Thursday, 12th December 2024

ಹಿರಿಯ ನಟ ಹೆಚ್.ಜಿ.ಸೋಮಶೇಖರ್ ನಿಧನ

ಬೆಂಗಳೂರು : ಕನ್ನಡದ ರಂಗಭೂಮಿ, ಕಿರುತೆರೆ, ಚಲನಚಿತ್ರ ರಂಗದ ಹಿರಿಯ ನಟ ಹೆಚ್.ಜಿ.ಸೋಮಶೇಖರ್(86) ಅವರು ಮಂಗಳವಾರ ಮದ್ಯಾನ್ಹ ನಿಧನರಾದರು.

ಬ್ಯಾಂಕ್ ಅಧಿಕಾರಿಯಾಗಿದ್ದ ಎಚ್.ಜಿ.ಸೋಮಶೇಖರರಾಯರಿಗೆ ಸಾಹಿತ್ಯ, ರಂಗಭೂಮಿ, ಚಲನಚಿತ್ರ ಮತ್ತು ಕಿರುತೆರೆ ಕ್ಷೇತ್ರ ಗಳಲ್ಲಿ ಆಸಕ್ತಿ. ಅನೇಕ ಪಾಶ್ಚಿಮಾತ್ಯ ಮತ್ತು ಭಾರತೀಯ ನಾಟಕಕರ್ತೃಗಳ ಕೃತಿಗಳನ್ನು ರಂಗಭೂಮಿಯ ಮೇಲೆ ಜೀವಂತ ಗೊಳಿಸಿದವರು.

ಚಿತ್ರರಂಗ ಪ್ರವೇಶಿಸಿದ್ದು 1981ರಲ್ಲಿ, ಟಿ.ಎಸ್.ರಂಗಾರವರ ನಿರ್ದೇಶನದ ‘ಸಾವಿತ್ರಿ’ಮೂಲಕ. ನಟ ಅನಿಲ್ ಠಕ್ಕರ್ರವರ ಪ್ರತಿದ್ವಂದಿಯಾಗಿ ನೀಡಿದ ಅಭಿನಯ ಗಂಭೀರ ಪ್ರೇಕ್ಷಕರ ಮೆಚ್ಚುಗೆ ಗಳಿಸಿತು. ನಂತರ ರಾಯರು ಅನೇಕ ಚಿತ್ರಗಳಲ್ಲಿ ಭಾವ ಪ್ರಧಾನ ಮತ್ತು ಹಾಸ್ಯಪ್ರಧಾನ ಪಾತ್ರಗಳನ್ನು ನಿರ್ವಹಿಸಿದರು.

ರವೀ ನಿರ್ದೇಶನದ ‘ಮಿಥಿಲೆಯ ಸೀತೆಯರು’ಇವರ ಅಭಿನಯ ಸಾಮರ್ಥ್ಯವನ್ನು ಸರಿಯಾಗಿ ಗುರುತಿಸುವಂತೆ ಮಾಡಿತು. ನಿರ್ದೇಶಿಸಿದ ಇನ್ನೊಂದು ಚಿತ್ರ ‘ಹರಕೆಯ ಕುರಿ’ಯಲ್ಲಿ ಸೋಮಶೇಖರ ರಾಯರು ನೀಡಿದ ಸೊಗಸಾದ ಅಭಿನಯಕ್ಕಾಗಿ 1992 -93ನೇ ಸಾಲಿನ ರಾಜ್ಯ ಸರ್ಕಾರದ ಅತ್ಯುತ್ತಮ ಪೋಷಕ ನಟ ಪ್ರಶಸ್ತಿ ಲಭಿಸಿತು.