Saturday, 14th December 2024

ಡ್ರಗ್ಸ್ ವಿಚಾರದಲ್ಲಿ ನನ್ನನ್ನು ಟಾರ್ಗೆಟ್ ಮಾಡಲಾಗಿದೆ: ನಟಿ ರಾಗಿಣಿ

ವಿಜಯಪುರ : ನಾವು ತಪ್ಪು ಮಾಡಿಲ್ಲವೆಂದರೆ ನಾವು ಟೆನ್ಷನ್ ಮಾಡಿಕೊಳ್ಳಬಾರದು. ಡ್ರಗ್ಸ್ ವಿಚಾರದಲ್ಲಿ ನನ್ನನ್ನು 100 % ಟಾರ್ಗೆಟ್ ಮಾಡಲಾಗಿದೆ ಎಂದು ನಟಿ ರಾಗಿಣಿ ಅಭಿಪ್ರಾಯಪಟ್ಟರು.

ಬುಧವಾರ ಮಾಧ್ಯಮಗಳ ಎದುರು ಮಾತನಾಡಿ, ಬರೀ ಒಂದು ಕೇಸ್ ವಿಚಾರವಾಗಿ ಮಾತ್ರವಲ್ಲ. ಹೆಣ್ಮಕ್ಕಳು ಅಂದರೆ ಸಾಕು ಪ್ರತಿಯೊಂದು ವಿಚಾರದಲ್ಲೂ ಸಮಾಜದಲ್ಲಿ ಟಾರ್ಗೆಟ್ ಮಾಡಲಾಗುತ್ತದೆ. ಬ್ಲೇಮ್ ಮಾಡೋ ಬದಲು ಎಲ್ಲರೂ ನಿಮ್ಮ ನಿಮ್ಮ ಕೆಲಸದಲ್ಲಿ ಕರೆಕ್ಟ್ ಆಗಿದ್ದರೆ ಸಾಕು ಎಂದರು.

ಕಾಸ್ಟಿಂಗ್ ಕೌಚ್ ಕುರಿತು ಮಾತನಾಡಿ, ಕಾಸ್ಟಿಂಗ್ ಕೌಚ್ ಎನ್ನುವುದು ನನ್ನ ಪ್ರಕಾರ ಒಂದು ಸ್ಟುಪಿಡ್ ವರ್ಡ್. ಯಾವತ್ತೂ ಒಂದೇ ಕೈಯಲ್ಲಿ ಚಪ್ಪಾಳೆ ಆಗುವುದಿಲ್ಲ. ಕಾಸ್ಟಿಂಗ್ ಕೌಚ್ ಬಗ್ಗೆ ನನ್ನ ಲೈಫ್‌ನಲ್ಲಿ ನನಗೆ ಎಕ್ಸ್​​ಪೀರಿಯನ್ಸ್ ಆಗಿಲ್ಲ.

ಕಷ್ಟಪಟ್ಟರೆ ನಾವು ಬೆಳೀತಿವಿ. ಶಾರ್ಟ್ ಕಟ್ ತೆಗೆದುಕೊಂಡರೆ ಕೆಲವು ಸಲ ರಾಂಗ್ ಪರ್ಸನ್ ಮೀಟ್ ಮಾಡಬೇಕಾಗುತ್ತೆ.ನಮ್ಮ ಕೆಲಸದ ಮೇಲೆ ವಿಶ್ವಾಸವಿಟ್ಟು, ನಾವು ಏನು ಮಾಡುತ್ತೇವೆ ಅನ್ನೋದರ ಮೇಲೆ ಫೋಕಸ್ ಮಾಡಬೇಕು.

ಹನ್ನೆರಡು ವರ್ಷದಿಂದ ಇಂಡಸ್ಟ್ರೀಯಲ್ಲಿದ್ದೇನೆ. ಯಾರಾದರೂ ಕಾಸ್ಟಿಂಗ್ ಕೌಚ್ ಬಗ್ಗೆ ಹೇಳಿದರೆ ಬಹುಶಃ ಅವರು ಅಂತಹ ಸಂದರ್ಭ ಅನುಭವಿಸಿರಬಹುದು ಎಂದು ಹೇಳಿದರು.