Saturday, 27th July 2024

ನಟಿ ಜಾಕ್ವೆಲಿನ್ ಫರ್ನಾಂಡಿಸ್ ವಿಚಾರಣೆ ಮುಂದೂಡಿಕೆ

ನವದೆಹಲಿ: ನಟಿ ಜಾಕ್ವೆಲಿನ್ ಫರ್ನಾಂಡಿಸ್ ಮತ್ತು ವಂಚಕ ಸುಖೇಶ್ ಚಂದ್ರಶೇಖರ್ ವಿರುದ್ಧದ 200 ಕೋಟಿ ರೂಪಾಯಿ ಹಣ ಅಕ್ರಮ ವರ್ಗಾವಣೆ ಪ್ರಕರಣದ ವಿಚಾರಣೆ ಯನ್ನು ದೆಹಲಿ ನ್ಯಾಯಾಲಯವು ಸೋಮವಾರ ಒಂದು ವಾರ ಮುಂದೂಡಿದೆ.
ವಿಶೇಷ ನ್ಯಾಯಾಧೀಶ ಶೈಲೇಂದ್ರ ಮಲಿಕ್ ಅವರು, ಜಾರಿ ನಿರ್ದೇಶನಾಲಯದಿಂದ ಚಾರ್ಜ್ ಶೀಟ್ ಮತ್ತು ಇತರ ದಾಖಲೆಗಳ ಸಂಪೂರ್ಣ ಪ್ರತಿಗಳನ್ನು ಇನ್ನೂ ಸ್ವೀಕರಿಸಿಲ್ಲ ಎಂದು ಜಾಕ್ವೆಲಿನ್ ಫರ್ನಾಂಡಿಸ್ ಪರ ವಕೀಲರು ವಾದ ಮಂಡಿಸಿದ ಬಳಿಕ ಪ್ರಕರಣವನ್ನು ಡಿಸೆಂಬರ್ 20ಕ್ಕೆ ಮುಂದೂಡಿದರು. ಜಾಕ್ವೆಲಿನ್ ಫರ್ನಾಂಡಿಸ್ ಅವರು ಸಂಕ್ಷಿಪ್ತ ವಿಚಾರಣೆಯ ಸಂದರ್ಭದಲ್ಲಿ ನ್ಯಾಯಾಲಯದ ಮುಂದೆ ಹಾಜರಾಗಿದ್ದರು. ನವೆಂಬರ್ 15 ರಂದು ನ್ಯಾಯಾಲಯವು ನಟಿಗೆ ಜಾಮೀನು ನೀಡಿತ್ತು. ಈ ಪ್ರಕರಣ ದಲ್ಲಿ ಆಕೆಯನ್ನು ಈವರೆಗೆ ಬಂಧಿಸಿಲ್ಲ.
ಆಗಸ್ಟ್ 31 ರಂದು ಜಾರಿ ನಿರ್ದೇಶನಾಲಯ ಸಲ್ಲಿಸಿದ ಪೂರಕ ಚಾರ್ಜ್ ಶೀಟ್ ಅನ್ನು ಗಮನದಲ್ಲಿಟ್ಟುಕೊಂಡು ನ್ಯಾಯಾಲಯವು ಫರ್ನಾಂಡಿಸ್ ಅವರನ್ನು ನ್ಯಾಯಾಲಯಕ್ಕೆ ಹಾಜರಾಗುವಂತೆ ಕೇಳಿತ್ತು. ತನಿಖೆಗೆ ಸಂಬಂಧಿಸಿದಂತೆ ಇ.ಡಿಯಿಂದ ಹಲವು ಬಾರಿ ಸಮನ್ಸ್ ಪಡೆದಿದ್ದ ಫರ್ನಾಂಡೀಸ್ ಅವರನ್ನು ಪೂರಕ ಆರೋಪಪಟ್ಟಿಯಲ್ಲಿ ಆರೋಪಿ ಎಂದು ಹೆಸರಿಸಲಾಗಿದೆ.
error: Content is protected !!