ನವರಸ ನಾಯಕ ಜಗ್ಗೇಶ್ ಅವರಿಗೆ ಹುಟ್ಟುಹಬ್ಬದ ಸಂಭ್ರಮ
ನವರಸ ನಾಯಕ ಜಗ್ಗೇಶ್ ಅವರಿಗೆ ಹುಟ್ಟುಹಬ್ಬದ ಸಂಭ್ರಮ
-
Vishwavani News
Mar 17, 2021 10:51 AM
ಬೆಂಗಳೂರು: ನವರಸ ನಾಯಕ ಜಗ್ಗೇಶ್ ಬುಧವಾರ ತಮ್ಮ ಜನ್ಮದಿನ ಆಚರಿಸಿಕೊಳ್ಳುತ್ತಿದ್ದಾರೆ. ಜಗ್ಗೇಶ್ ಈ ಬಾರಿ ಸರಳವಾಗಿ ತಮ್ಮ ಜನ್ಮದಿನವನ್ನು ಆಚರಿಸಿಕೊಳ್ಳುತ್ತಿದ್ದಾರೆ. ಇನ್ನು ಜಗ್ಗೇಶ್ ಬರ್ತ್‌ಡೇ ಪ್ರಯುಕ್ತ “ತೋತಾಪುರಿ’ ಚಿತ್ರತಂಡ ಚಿತ್ರದ ಪೋಸ್ಟರ್ ಬಿಡುಗಡೆ ಮಾಡಲು ಪ್ಲಾನ್ ಮಾಡಿಕೊಂಡಿದೆ.
ಕೆ. ಎ ಸುರೇಶ್ ನಿರ್ಮಿಸುತ್ತಿರುವ “ತೋತಾಪುರಿ’ ಚಿತ್ರಕ್ಕೆ ವಿಜಯ್ ಪ್ರಸಾದ್ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡಿದ್ದಾರೆ. ಚಿತ್ರಕ್ಕೆ ನಿರಂಜನ್ ಬಾಬು ಛಾಯಾ ಗ್ರಹಣ, ಸುರೇಶ್ ಅರಸ್ ಸಂಕಲನವಿದೆ. ಚಿತ್ರದ ಹಾಡುಗಳಿಗೆ ಜೆ. ಅನೂಪ್ ಸೀಳಿನ್ ಸಂಗೀತ ಸಂಯೋಜಿಸಿದ್ದಾರೆ.
ಚಿತ್ರದಲ್ಲಿ ಜಗ್ಗೇಶ್ ಅವರೊಂದಿಗೆ ನಟ ಧನಂಜಯ್, ಅದಿತಿ ಪ್ರಭುದೇವ, ಸುಮನ್ ರಂಗನಾಥ್, ದತ್ತಣ್ಣ ಮೊದಲಾದವರು ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ. “ತೋತಾಪುರಿ’ ಚಿತ್ರದ ಪೋಸ್ಟ್ ಪ್ರೊಡಕ್ಷನ್ ಕೆಲಸಗಳಲ್ಲಿ ನಿರತವಾಗಿರುವ ಚಿತ್ರತಂಡ, ಏಪ್ರಿಲ್ – ಮೇ ವೇಳೆಗೆ ಚಿತ್ರವನ್ನು ಪ್ರೇಕ್ಷಕರ ಮುಂದೆ ತರುವ ಯೋಚನೆಯಲ್ಲಿದೆ.
ಜಗ್ಗೇಶ್-ಗುರುಪ್ರಸಾದ್ ಕಾಂಬಿನೇಷನ್‌ನಲ್ಲಿ ರಂಗನಾಯಕ ಚಿತ್ರ ಕೂಡ ಬರಲಿದ್ದು, ವಿಖ್ಯಾತ್ ಈ ಸಿನಿಮಾದ ನಿರ್ಮಾಪಕರು.
ಕ್ಷಣ ಕ್ಷಣದ ಸುದ್ದಿಗಳಿಗಾಗಿ ವಿಶ್ವವಾಣಿ ಫೇಸ್ ಬುಕ್ ಪೇಜ್ ಲೈಕ್ ಮಾಡಿ
https://www.facebook.com/Vishwavanidaily