Saturday, 14th December 2024

ಬಿಜೆಪಿ ಅಭ್ಯರ್ಥಿ ಮುನಿರತ್ನ ಪರ ’ಜಗ್ಗುದಾದಾ’ ನಾಳೆ ಪ್ರಚಾರ

ಬೆಂಗಳೂರು: ಬೆಂಗಳೂರಿನ ರಾಜರಾಜೇಶ್ವರಿ ನಗರ ಕ್ಷೇತ್ರದಲ್ಲಿ ಚಿತ್ರ ನಿರ್ಮಾಪಕ ಮುನಿರತ್ನ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಯಾಗಿದ್ದು, ನಟ-ನಟಿಯರು ಚುನಾವಣಾ ಪ್ರಚಾರದಲ್ಲಿ ಪಾಲ್ಗೊಳ್ಳಲಿದ್ದಾರೆ.

ನವೆಂಬರ್ 3ರಂದು ಆರ್.ಆರ್.ನಗರ ಉಪ ಚುನಾವಣೆ ನಡೆಯಲಿದ್ದು, ಬಹಿರಂಗ ಪ್ರಚಾರ ಭಾನುವಾರ ಅಂತ್ಯವಾಗಲಿದೆ. ನಟ ದರ್ಶನ್ ಆರ್. ಆರ್. ನಗರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಮುನಿರತ್ನ ಪರವಾಗಿ ಗುರುವಾರ ಪ್ರಚಾರ ನಡೆಸಲಿದ್ದಾರೆ. ನಿರ್ಮಾಪಕ ಮುನಿರತ್ನ ಮತ್ತು ನಟ ದರ್ಶನ್ ಉತ್ತಮ ಸ್ನೇಹಿತರು. ಕ್ಷೇತ್ರದ ವ್ಯಾಪ್ತಿಯಲ್ಲಿ ರೋಡ್ ಶೋ ನಡೆಸುವ ಮೂಲಕ ದರ್ಶನ್ ಮತಯಾಚನೆ ಮಾಡಲಿದ್ದಾರೆ. ದರ್ಶನ್ ಜೊತೆ ಇತರ ಕೆಲವು ನಟ-ನಟಿಯರು ಪ್ರಚಾರದಲ್ಲಿ ಪಾಲ್ಗೊಳ್ಳುವ ಸಾಧ್ಯತೆ ಇದೆ.

ಆರ್. ಆರ್. ನಗರ ಕ್ಷೇತ್ರದಲ್ಲಿ ಬಿಜೆಪಿಯಿಂದ ಮುನಿರತ್ನ, ಕಾಂಗ್ರೆಸ್‌ನಿಂದ ಹೆಚ್. ಕುಸುಮಾ ಮತ್ತು ಜೆಡಿಎಸ್‌ನಿಂದ ಕೃಷ್ಣ ಮೂರ್ತಿ ಅಭ್ಯರ್ಥಿಗಳು. ನವೆಂಬರ್ 3ರಂದು ಚುನಾವಣೆ ನಡೆಯಲಿದ್ದು, 10ರಂದು ಫಲಿತಾಂಶ ಪ್ರಕಟವಾಗಲಿದೆ.