Thursday, 12th December 2024

ಜೈಲರ್​ ಚಿತ್ರದ ಖಳನಾಯಕ ವಿನಾಯಕನ್ ಬಂಧನ

ಕೊಚ್ಚಿ: ಜೈಲರ್​ ಚಿತ್ರದಲ್ಲಿ ವಿಲನ್​ ಪಾತ್ರದಲ್ಲಿ ನಟಿಸಿ ಸೈ ಎನಿಸಿಕೊಂಡಿರುವ ವಿನಾಯಕನ್​ ಅವರನ್ನು ಪೊಲೀಸರು ಬಂಧಿಸಿದ್ದಾರೆ.

ಮದ್ಯದ ಅಮಲಿನಲ್ಲಿ ಪೊಲೀಸ್​ ಠಾಣೆಯಲ್ಲಿ ಗಲಾಟೆ ಸೃಷ್ಟಿಸಿದ ಆರೋಪದಡಿ ​ಅವರನ್ನು ಬಂಧಿಸಲಾಗಿದೆ ಎಂದು ಕೇರಳದ ಪೊಲೀಸ್​ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ವಿನಾಯಕನ್ ವಾಸವಿದ್ದ ಅಪಾರ್ಟ್‌ಮೆಂಟ್ ನಿವಾಸಿಗಳು ತಮಗೆ ತೊಂದರೆ ನೀಡುತ್ತಿದ್ದಾರೆ ಎಂದು ನೀಡಿದ ದೂರಿನ ಮೇರೆಗೆ ಎರ್ನಾಕುಲಂ ಟೌನ್ ನಾರ್ತ್ ಪೊಲೀಸ್ ಠಾಣೆಗೆ ಅವರನ್ನು ಕರೆಸಲಾಗಿತ್ತು. ಈ ವೇಳೆ ಮದ್ಯದ ಅಮಲಿನಲ್ಲಿದ್ದ ವಿನಾಯಕನ್​ ತಾಳ್ಮೆ ಕಳೆದುಕೊಂಡು ಪೊಲೀಸ್​ ಠಾಣೆಯಲ್ಲಿ ಗಲಾಟೆ ಸೃಷ್ಟಿಸಿದ್ದಕ್ಕಾಗಿ ಪೊಲೀಸ್​ ಅಧಿಕಾರಿಗಳು ನಟನನ್ನು ಬಂಧಿಸಿದ್ದಾರೆ.

ನಟ ಕುಡಿದ ಅಮಲಿನಲ್ಲಿ ಪೊಲೀಸ್ ಠಾಣೆಯಲ್ಲಿ ಗಲಾಟೆ ಸೃಷ್ಟಿಸಿದ್ದರು. ಇದೇ ಕಾರಣಕ್ಕಾಗಿ ಅವರನ್ನು ಬಂಧಿಸಲಾಗಿದೆ ಎಂದು ಸುದ್ದಿಗಾರರಿಗೆ ಸ್ಪಷ್ಟನೆ ನೀಡಿದ್ದಾರೆ.

ವಿನಾಯಕನ್​ ಅವರು ಮಲಯಾಳಂ ಚಿತ್ರರಂಗದ ಖ್ಯಾತ ನಟ. ತಿಮಿರು ಮತ್ತು ಮಾರಿಯನ್​ ತಮಿಳು ಸಿನಿಮಾದಲ್ಲಿ ನಟಿಸುವ ಮೂಲಕ ತಮಿಳು ಚಿತ್ರರಂಗಕ್ಕೂ ಪರಿಚಿತರಾದವರು ಈ ವಿನಾಯಕನ್​. ಕೇರಳದಲ್ಲಿ ಗಾಯಕ ಮತ್ತು ಸಂಗೀತ ಸಂಯೋಜಕರಾಗಿ ತಮ್ಮ ಪ್ರತಿಭೆ ಸಾಬೀತುಪಡಿಸುವುದರ ಜೊತೆಗೆ ನಟನೆಗಾಗಿ ಹಲವಾರು ಪ್ರಶಸ್ತಿಗಳನ್ನು ಸಹ ಪಡೆದುಕೊಂಡಿದ್ದಾರೆ.

ನಟ ವಿನಾಯಕನ್​ ಮಲಯಾಳಂ ಮತ್ತು ತಮಿಳು ಚಿತ್ರಗಳಲ್ಲಿ ನಟಿಸುತ್ತಾರೆ.