Sunday, 13th October 2024

‘ಜೇಮ್ಸ್’ ಸಿನಿಮಾ ಪೋಸ್ಟರ್ ಲಾಂಚ್: ಯೋಧನ ರೂಪದಲ್ಲಿ ಪವರ್ ಸ್ಟಾರ್

 

ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅಭಿನಯದ ಕೊನೆಯ ಚಿತ್ರ ‘ಜೇಮ್ಸ್’ ಮೊದಲ ಪೋಸ್ಟರ್ 73ನೇ ಗಣರಾಜ್ಯೋತ್ಸವ ದಿನದಂದು ಬಿಡುಗಡೆಯಾಗಿದೆ.

ಪತ್ನಿ ಅಶ್ವಿನಿ ಪುನೀತ್ ರಾಜ್ ಕುಮಾರ್ ಈ ಪೋಸ್ಟರ್ ಅನ್ನು ಟ್ವಿಟರ್ ಖಾತೆಯಲ್ಲಿ ಹಂಚಿಕೊಂಡು ಗಣರಾಜ್ಯೋತ್ಸವದ ಶುಭಾಶಯಗಳನ್ನು ಕೋರಿದ್ದಾರೆ.

ಜೇಮ್ಸ್ ಸಿನಿಮಾದ ಮೊದಲ ಪೋಸ್ಟರ್ #BoloBoloJames ಹ್ಯಾಶ್ ಟ್ಯಾಗ್ ಅಡಿ ಸಾಮಾಜಿಕ ಜಾಲತಾಣದಲ್ಲಿ ಟ್ರೆಂಡ್ ಆಗುತ್ತಿದೆ. ‘ಸಲಾಂ ಸೋಲ್ಜರ್ ದೇಶಕ್ಕೆ ನೀನೇ ಪವರ್’ ಎಂಬ ವಾಕ್ಯ ಪೋಸ್ಟರ್ ನಲ್ಲಿ ಹೈಲೈಟ್ ಆಗಿದ್ದು, ಪುನೀತ್ ರಾಜ್ ಕುಮಾರ್ ಸೈನಿಕ ವೇಷದಲ್ಲಿ ಕಾಣಿಸಿಕೊಂಡಿದ್ದಾರೆ.

ನಿರ್ದೇಶಕ ಚೇತನ್ ಕುಮಾರ್ ‘ಜೇಮ್ಸ್’ ಸಿನಿಮಾ ನಿರ್ದೇಶಿಸಿದ್ದು, ಕನ್ನಡ ಮಾತ್ರವಲ್ಲದೆ ತಮಿಳು, ಹಿಂದಿ ತೆಲುಗು, ಮಲಯಾಳಂ ಭಾಷೆಗಳಲ್ಲಿ ಬಿಡುಗಡೆಯಾಗುತ್ತಿದೆ.