ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Just Married Movie: 'ಜಸ್ಟ್ ಮ್ಯಾರೀಡ್' ಚಿತ್ರದ 'ತಪ್ಪು ಮಾಡೋದು ಸಹಜ' ಹಾಡು ರಿಲೀಸ್‌

Sandalwood Movie: ಅನನ್ಯಾ ಭಟ್ ಅವರ ಧ್ವನಿಯಲ್ಲಿ ಮೂಡಿಬಂದಿರುವ ಸಿನಿಮಾ 'ಜಸ್ಟ್ ಮ್ಯಾರೀಡ್' ಚಿತ್ರದ 'ತಪ್ಪು ಮಾಡೋದು ಸಹಜ' ಎಂಬ ಸುಂದರ ಗೀತೆ ಇಂದು ಆನಂದ್ ಆಡಿಯೋ ಯೂಟ್ಯೂಬ್ ಚಾನೆಲ್‌ನಲ್ಲಿ ಬಿಡುಗಡೆಯಾಗಿದೆ. ಈ ಹಾಡಿಗೆ, ಬಿ. ಅಜನೀಶ್ ಲೋಕನಾಥ್ ಸಂಗೀತ ಸಂಯೋಜಿಸಿದ್ದಾರೆ ಹಾಗೂ ಧನಂಜಯ್ ರಂಜನ್ ಅವರು ಸಾಹಿತ್ಯ ಬರೆದಿದ್ದಾರೆ.

ಬೆಂಗಳೂರು: ಬಹುನಿರೀಕ್ಷಿತ ಕನ್ನಡ ಸಿನಿಮಾ 'ಜಸ್ಟ್ ಮ್ಯಾರೀಡ್' ಚಿತ್ರದ (Just Married Movie) 'ತಪ್ಪು ಮಾಡೋದು ಸಹಜ' ಎಂಬ ಸುಂದರ ಗೀತೆ ಇಂದು ಆನಂದ್ ಆಡಿಯೋ ಯೂಟ್ಯೂಬ್ ಚಾನೆಲ್‌ನಲ್ಲಿ ಬಿಡುಗಡೆಯಾಗಿದೆ. ಅನನ್ಯಾ ಭಟ್ ಅವರ ಧ್ವನಿಯಲ್ಲಿ ಮೂಡಿಬಂದಿರುವ ಈ ಹಾಡಿಗೆ, ಬಿ. ಅಜನೀಶ್ ಲೋಕನಾಥ್ ಸಂಗೀತ ಸಂಯೋಜಿಸಿದ್ದಾರೆ ಹಾಗೂ ಧನಂಜಯ್ ರಂಜನ್ ಅವರು ಸಾಹಿತ್ಯ ಬರೆದಿದ್ದಾರೆ. ಈ ಗೀತೆಯು ಆಧುನಿಕ ಬದುಕಿನ ಪ್ರತಿಯೊಬ್ಬರ ಜೀವನದ ಕನ್ನಡಿಯಂತಿದೆ. ಖ್ಯಾತ ನಿರ್ದೇಶಕ ಮತ್ತು ನಟ ರಾಜ್ ಬಿ ಶೆಟ್ಟಿ ಅವರು ಈ ಹಾಡನ್ನು ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭ ಕೋರಿದರು.



ಸಿ.ಆರ್. ಬಾಬಿ ಬರೆದು ನಿರ್ದೇಶಿಸಿರುವ ಈ ಚಿತ್ರವನ್ನು, ಎಬಿಬಿಎಸ್ ಸ್ಟುಡಿಯೋಸ್ ಬ್ಯಾನರ್ ಅಡಿಯಲ್ಲಿ ಬಿ. ಅಜನೀಶ್ ಲೋಕನಾಥ್ ಮತ್ತು ಸಿ.ಆರ್. ಬಾಬಿ ನಿರ್ಮಿಸಿದ್ದಾರೆ. ವಿ.ಕೆ ಫಿಲಂಸ್ ಚಿತ್ರವನ್ನು ವಿತರಿಸಲಿದೆ.

ಚಿತ್ರದಲ್ಲಿ ಶೈನ್ ಶೆಟ್ಟಿ ಮತ್ತು ಅಂಕಿತಾ ಅಮರ್ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದು, ಅನುಪ್ ಭಂಡಾರಿ, ಸಾಕ್ಷಿ ಅಗರ್ವಾಲ್, ಶ್ರುತಿ ಹರಿಹರನ್, ದೇವರಾಜ್, ಅಚ್ಯುತ್ ಕುಮಾರ್, ಶ್ರುತಿ ಕೃಷ್ಣ ಮತ್ತು ಶ್ರೀಮಾನ್ ಸೇರಿದಂತೆ ಅನೇಕ ಪ್ರತಿಭಾವಂತ ಕಲಾವಿದರು ಅಭಿನಯಿಸಿದ್ದಾರೆ. 'ಜಸ್ಟ್ ಮ್ಯಾರೀಡ್' ಚಿತ್ರವು ಇದೇ ಆಗಸ್ಟ್ 22, 2025 ರಂದು ಚಿತ್ರಮಂದಿರಗಳಲ್ಲಿ ತೆರೆಕಾಣಲಿದೆ.

ಜಸ್ಟ್ ಮ್ಯಾರೀಡ್ ಚಿತ್ರದ ʼಮಾಂಗಲ್ಯಂ ತಂತು ನಾನೇನಾʼ ಹಾಡಿಗೆ ಅಭಿಮಾನಿಗಳು ಫಿದಾ

ಬೆಂಗಳೂರು: ಖ್ಯಾತ ಸಂಗೀತ ನಿರ್ದೇಶಕ ಅಜನೀಶ್ ಲೋಕನಾಥ್ ಹಾಗೂ ಸಿ.ಆರ್ ಬಾಬಿ ಅವರು abbs studios ಲಾಂಛನದಲ್ಲಿ ನಿರ್ಮಾಣ ಮಾಡಿರುವ ʼಜಸ್ಟ್ ಮ್ಯಾರೀಡ್ʼ ಚಿತ್ರಕ್ಕಾಗಿ (Just Married Movie) ಹೆಸರಾಂತ ಸಾಹಿತಿ ಡಾ.ವಿ.ನಾಗೇಂದ್ರ ಪ್ರಸಾದ್ ಬರೆದಿರುವ ʼಮಾಂಗಲ್ಯಂ ತಂತು ನಾನೇನಾʼ ಎಂಬ ಹಾಡು ಇತ್ತೀಚೆಗೆ ಆನಂದ್ ಆಡಿಯೋ ಯೂಟ್ಯೂಬ್ ಚಾನಲ್‌ನಲ್ಲಿ ಬಿಡುಗಡೆಯಾಗಿದೆ. ಅಜನೀಶ್ ಲೋಕನಾಥ್ ಅವರೇ ಸಂಗೀತ ನೀಡಿರುವ ಈ ಹಾಡನ್ನು ಸಂಜಿತ್ ಹಗ್ಡೆ, ಐಶ್ವರ್ಯ ರಂಗರಾಜನ್ ಹಾಗೂ ವರುಣ್ ರಾಮಚಂದ್ರನ್ ಅಮೋಘವಾಗಿ ಹಾಡಿದ್ದಾರೆ. ಈ ಸುಮಧುರ ಹಾಡಿಗೆ ಅಭಿಮಾನಿಗಳು ಫಿದಾ ಆಗಿದ್ದಾರೆ. ಹಾಡುಗಳು ಹಾಗೂ ಟೀಸರ್ ಮೂಲಕ ಜನರ ಮನಸ್ಸಿಗೆ ಹತ್ತಿರವಾಗಿರುವ ಬಹುನಿರೀಕ್ಷಿತ ಈ ಪ್ರೇಮ ಕಥಾನಕ ಸದ್ಯದಲ್ಲೇ ಬಿಡುಗಡೆಯಾಗಲಿದೆ.

ಸಂಗೀತ ಕ್ಷೇತ್ರದಲ್ಲಿ ಗುರುತಿಸಿಕೊಂಡಿರುವ ಸಿ.ಆರ್. ಬಾಬಿ ಅವರ ಚೊಚ್ಚಲ ನಿರ್ದೇಶನದಲ್ಲಿ ಮೂಡಿಬಂದಿರುವ ಈ ಚಿತ್ರದ ನಾಯಕ ಹಾಗೂ ನಾಯಕಿಯಾಗಿ ಬಿಗ್ ಬಾಸ್ ಖ್ಯಾತಿಯ ಶೈನ್ ಶೆಟ್ಟಿ ಹಾಗೂ ಅಂಕಿತ ಅಮರ್ ಅಭಿನಯಿಸಿದ್ದಾರೆ. ಹಿರಿಯ ಹಾಗೂ ಅನುಭವಿ ಕಲಾವಿದರ ದೊಡ್ಡ ತಾರಾಬಳಗವೇ ಈ ಚಿತ್ರದಲ್ಲಿದೆ.

ದೇವರಾಜ್, ಅಚ್ಯುತಕುಮಾರ್, ಮಾಳವಿಕ ಅವಿನಾಶ್, ಅನೂಪ್ ಭಂಡಾರಿ, ಶ್ರುತಿ ಹರಿಹರನ್, ಶ್ರುತಿ ಕೃಷ್ಣ, ಸಾಕ್ಷಿ ಅಗರವಾಲ್, ಶ್ರೀಮಾನ್, ರವಿಶಂಕರ್ ಗೌಡ, ರವಿ ಭಟ್, ವಾಣಿ ಹರಿಕೃಷ್ಣ, ಸಂಗೀತ, ಅನಿಲ್, ವೇದಿಕಾ ಕಾರ್ಕಳ್ ಮುಂತಾದವರು ಅಭಿನಯಿಸಿದ್ದಾರೆ.

ಈ ಸುದ್ದಿಯನ್ನೂ ಓದಿ | Varamahalaxmi Festival 2025: ವರಮಹಾಲಕ್ಷ್ಮಿ ಹಬ್ಬದ ಸಂಭ್ರಮಕ್ಕೆ ಟ್ರೆಂಡಿಯಾದ ರೇಷ್ಮೆ ಸೀರೆಗಳಿವು

ಸಿ.ಆರ್. ಬಾಬಿ ಅವರೇ ಚಿತ್ರಕ್ಕೆ ಕಥೆ ಬರೆದಿದ್ದು, ಚಿತ್ರಕಥೆ ಸಿ.ಆರ್. ಬಾಬಿ ಹಾಗೂ ಧನಂಜಯ್ ರಂಜನ್ ಅವರದು. ರಘು ನಿಡುವಳ್ಳಿ ಅವರ‌ ಸಂಭಾಷಣೆ, ಪಿ.ಜಿ. ಛಾಯಾಗ್ರಹಣ, ಶ್ರೀಕಾಂತ್ ಮತ್ತು ಪ್ರತೀಕ್ ಶೆಟ್ಟಿ ಸಂಕಲನ, ಅಮರ್ ಕಲಾ ನಿರ್ದೇಶನ, ವಿಕ್ರಮ್ ಸಾಹಸ ನಿರ್ದೇಶನ ಹಾಗೂ ಬಾಬಾ ಭಾಸ್ಕರ್, ಶಾಂತಿ ಅರವಿಂದ್ ಅವರ ನೃತ್ಯ ನಿರ್ದೇಶನವಿರುವ ʼಜಸ್ಟ್ ಮ್ಯಾರೀಡ್ʼ ಚಿತ್ರದ ಹಾಡುಗಳನ್ನು ಕೆ. ಕಲ್ಯಾಣ್, ಡಾ.ವಿ.ನಾಗೇಂದ್ರ ಪ್ರಸಾದ್, ಪ್ರಮೋದ್ ಮರವಂತೆ, ಧನಂಜಯ್ ರಂಜನ್ ಮತ್ತು ಶಶಿ ಕಾವೂರ್ ಬರೆದಿದ್ದಾರೆ.