Friday, 20th September 2024

Kaala Patthar: ಭಾರೀ ಸದ್ದು ಮಾಡ್ತಿದೆ ಕಾಲಾಪತ್ಥರ್ ಚಿತ್ರದ “ಬಾಂಡ್ಲಿ ಸೌಟ್” ಹಾಡು- ಗೃಹಿಣಿಯರಿಂದಲೇ ಸಾಂಗ್‌ ರಿಲೀಸ್‌

Kaala patthar

ಬೆಂಗಳೂರು: ಕೆಂಡ ಸಂಪಿಗೆ(Kenda Sampige) ಚಿತ್ರ ಖ್ಯಾತಿಯ ವಿಕ್ಕಿ ವರುಣ್ ನಿರ್ದೇಶಿಸಿ, ನಾಯಕನಾಗೂ ನಟಿಸಿರುವ “ಕಾಲಾಪತ್ಥರ್”(Kaala Patthar) ಚಿತ್ರದ ಹಾಡೊಂದು ಇತ್ತೀಚೆಗೆ ಬಿಡುಗಡೆ ಆಗಿದೆ. ಭುವನ್ ಮೂವೀಸ್ ಲಾಂಛನದಲ್ಲಿ ಭುವನ್ ಸುರೇಶ್ ಹಾಗೂ ನಾಗರಾಜ್ ಬಿಲ್ಲಿನಕೋಟೆ ನಿರ್ಮಿಸಿರುವ,  “ಕಾಲಾಪತ್ಥರ್” ಚಿತ್ರಕ್ಕಾಗಿ ಪ್ರಮೋದ್ ಮರವಂತೆ ಬರೆದು, ಅನೂಪ್ ಸೀಳಿನ್ ಸಂಗೀತ ನೀಡಿರುವ “ಬಾಂಡ್ಲಿ ಸೌಟ್” ಹಾಡು ಇತ್ತೀಚೆಗೆ ಬಿಡುಗಡೆ(Song Release)ಯಾಗಿದ್ದು, ಹಾಡು ಕೇಳಿದ ಸಿನಿಪ್ರಿಯರು ಫುಲ್‌ ಫಿದಾ ಆಗಿದ್ದಾರೆ. ಇನ್ನು ಗೃಹಿಣಿಯರಿಂದಲೇ ಈ ಹಾಡು ಬಿಡುಗಡೆಯಾಗಿದ್ದು ವಿಶೇಷ.

ಹಾಡು ಬಿಡುಗಡೆ ನಂತರ ಚಿತ್ರತಂಡದ ಸದಸ್ಯರು ಮಾತನಾಡಿ, ಸಂತಸ ಹಂಚಿಕೊಂಡರು. ಆರಂಭದಲ್ಲಿ ಮಾತನಾಡಿದ ಸಂಗೀತ ನಿರ್ದೇಶಕ ಅನೂಪ್ ಸೀಳಿನ್, ಮೊದಲು ಒಂದು ಹಾಡು ಶುರುವಾಗಬೇಕದಾಗಿನಿಂದಲೂ ಸಂಗೀತ ನಿರ್ದೇಶಕರ ಜೊತೆಗೆ ನಿರ್ದೇಶಕರು ಇರುತ್ತಿದ್ದರು‌. ಈಗ ಹಾಗಲ್ಲ‌. ಆದರೆ ಈ ಚಿತ್ರದ ನಿರ್ದೇಶಕ ವಿಕ್ಕಿ ವರುಣ್ ಆರಂಭದಿಂದಲೂ ನನ್ನ ಜೊತೆಗಿದ್ದಾರೆ. ಹಾಡು ಚೆನ್ನಾಗಿ ಬಂದಿದೆ ಅಂದರೆ ಅವರು ಕಾರಣ. ಹಾಡುಗಳಿಗೆ ಹಾಗೂ ಚಿತ್ರಕ್ಕೆ ನಿಮ್ಮ ಪ್ರೋತ್ಸಾಹವಿರಲಿ ಎಂದರು.

ನಾಯಕ ಹಾಗೂ ನಿರ್ದೇಶಕ ವಿಕ್ಕಿ ವರುಣ್ ಮಾತನಾಡಿ, ಬಾಂಡ್ಲಿ, ಸ್ವವ್ ಹಾಗೂ ಸೌಟ್ ಅನ್ನು ಹೆಚ್ಚಾಗಿ ಗೃಹಿಣಿಯರು ಬಳಸುತ್ತಾರೆ. ಹಾಗಾಗಿ ಈ ಹಾಡನ್ನು ಅವರಿಂದ ಬಿಡುಗಡೆ ಮಾಡಿಸಿದ್ದೇವೆ. ಅನೂಪ್ ಸೀಳಿನ್ ಸಂಗೀತ ನಿರ್ದೇಶನ ಹಾಗೂ ಪ್ರಮೋದ್ ಮರವಂತೆ ಅವರ ಸಾಹಿತ್ಯ ಚೆನ್ನಾಗಿದೆ‌. ನೃತ್ಯ ಬಾರದ ನನ್ನಿಂದ ಧನು ಮಾಸ್ಟರ್ ಚೆನ್ನಾಗಿ ನೃತ್ಯ ಮಾಡಿಸಿದ್ದಾರೆ. ನಿರ್ಮಾಪಕರು ಅದ್ದೂರಿಯಾಗಿ ಈ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ಸೆಪ್ಟೆಂಬರ್ 13 ಚಿತ್ರ ತೆರೆಗೆ ಬರಲಿದೆ ಎಂದರು. ಇದೇ ಮಾತನಾಡಿದ ಚಿತ್ರದ ನಾಯಕಿ ನಾಯಕಿ ಧನ್ಯ ರಾಮಕುಮಾರ್, ಇಂದು ಬಿಡುಗಡೆಯಾಗಿರುವ ಹಾಡು ಹಾಗೂ ಚಿತ್ರ ಎರಡು ಚೆನ್ನಾಗಿದೆ ಎಂದರು. ಇದೇ ವೇಳೆ  ನಿರ್ಮಾಪಕರಾದ ಭುವನ್ ಸುರೇಶ್, ನಾಗರಾಜ್ ಬಿಲ್ಲನಕೋಟೆ ಹಾಗೂ ನೃತ್ಯ ನಿರ್ದೇಶಕ ಧನು ಮಾಸ್ಟರ್ ಉಪಸ್ಥಿತರಿದ್ದರು.