ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Santhosh Balaraj: ಜಾಂಡೀಸ್‌ನಿಂದ ಬಳಲುತ್ತಿದ್ದ ಕನ್ನಡ ನಟ ಸಂತೋಷ್‌ ಬಾಲರಾಜ್‌ ನಿಧನ

Actor Santosh Balaraj: ಜಾಂಡೀಸ್​ನಿಂದಾಗಿ ನಟ ಸಂತೋಷ್ ಕೋಮಾಗೆ ಹೋಗಿದ್ದರು. 2 ದಿನಗಳ ಹಿಂದೆ ಸಂತೋಷ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಸಂತೋಷ್ ಬೇಗ ಚೇತರಿಸಿಕೊಳ್ಳಲಿ ಎಂದು ಆಪ್ತರು, ಕುಟುಂಬ ವರ್ಗ ಪ್ರಾರ್ಥಿಸುತ್ತಿತ್ತು. ಇದೀಗ ಚಿಕಿತ್ಸೆ ಫಲಕಾರಿಯಾಗದೆ ಸಂತೋಷ್ ಬಾಲರಾಜ್ ಸಾವನಪ್ಪಿದ್ದಾರೆ.

ಜಾಂಡೀಸ್‌ನಿಂದ ಬಳಲುತ್ತಿದ್ದ ಕನ್ನಡ ನಟ ಸಂತೋಷ್‌ ಬಾಲರಾಜ್‌ ನಿಧನ

‌ಸಂತೋಷ್‌ ಬಾಲರಾಜ್

ಹರೀಶ್‌ ಕೇರ ಹರೀಶ್‌ ಕೇರ Aug 5, 2025 10:37 AM

ಬೆಂಗಳೂರು : ಸ್ಯಾಂಡಲ್‌ವುಡ್ ನಟ, ನಿರ್ಮಾಪಕ ಆನೇಕಲ್‌ ಬಾಲರಾಜ್‌ ಪುತ್ರ ಸಂತೋಷ್ ಬಾಲರಾಜ್ (34) ನಿಧನರಾಗಿದ್ದಾರೆ. ನಟ ಸಂತೋಷ್ ಬಾಲರಾಜ್ (Kannada cinema avtor santosh Balaraj) ಜಾಂಡೀಸ್‌ನಿಂದ ಬಳಲುತ್ತಿದ್ದು, ಇತ್ತೀಚಿಗೆ ಚಿಕಿತ್ಸೆಗಾಗಿ ಬೆಂಗಳೂರಿನ ಬನಶಂಕರಿಯ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ನಂತರ ಕೋಮಾಗೆ ಹೋಗಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಇಂದು (Passes away) ಸಾವನ್ನಪ್ಪಿದ್ದಾರೆ.

ಅನಾರೋಗ್ಯದಿಂದ ಬಳಲುತ್ತಿದ್ದ 34 ವಯಸ್ಸಿನ ನಟ ಸಂತೋಷ್ ಬಾಲರಾಜ್ ಕಳೆದ ತಿಂಗಳು ಜಾಂಡೀಸ್‌ಗೆ ಚಿಕಿತ್ಸೆ ಪಡೆದಿದ್ದರು. ಮೊನ್ನೆಯಷ್ಟೇ ಅವರ ಆರೋಗ್ಯದಲ್ಲಿ ತೀವೃ ಏರುಪೇರಾಗಿದ್ದರಿಂದ ಕುಮಾರಸ್ವಾಮಿ ಲೇ ಔಟ್ ನ ಸಾಗರ್ ಅಪೊಲೋ ಆಸ್ಪತ್ರೆಗೆ ಸೇರಿಸಲಾಗಿತ್ತು. ಆದರೆ, ಜಾಂಡೀಸ್​ನಿಂದಾಗಿ ನಟ ಸಂತೋಷ್ ಕೋಮಾಗೆ ಹೋಗಿದ್ದರು. 2 ದಿನಗಳ ಹಿಂದೆ ಸಂತೋಷ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಸಂತೋಷ್ ಬೇಗ ಚೇತರಿಸಿಕೊಳ್ಳಲಿ ಎಂದು ಆಪ್ತರು, ಕುಟುಂಬ ವರ್ಗ ಪ್ರಾರ್ಥಿಸುತ್ತಿತ್ತು. ಇದೀಗ ಚಿಕಿತ್ಸೆ ಫಲಕಾರಿಯಾಗದೆ ಸಂತೋಷ್ ಬಾಲರಾಜ್ ಸಾವನಪ್ಪಿದ್ದಾರೆ.

ಸಂತೋಷ್ ಬಾಲ್​ರಾಜ್ ಅವರು ಅಮ್ಮನ ಜೊತೆಗೆ ವಾಸವಾಗಿದ್ದರು. ನಟನ ಅಪ್ಪ ಅನೇಕಲ್ ಬಾಲರಾಜ್ ದರ್ಶನ್​ಗೆ ಕರಿಯ ಸಿನಿಮಾ ಮಾಡಿದ್ದರು. ಕರಿಯ-2 ಕೆಂಪ, ಗಣಪ, ಬರ್ಕ್ಲಿ, ಸತ್ಯ ಸಿನಿಮಾಗಳಲ್ಲಿ ಸಂತೋಷ್ ನಾಯಕ ನಟನಾಗಿ ಅಭಿನಯಿಸಿದ್ದಾರೆ. ಕೆಂಪ ಚಿತ್ರದ ಮೂಲಕ ಕನ್ನಡ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ್ದರೂ ಆ ಸಿನಿಮಾದಿಂದ ಹೇಳಿಕೊಳ್ಳುವಂತಹ ಯಶಸ್ಸು ಅವರಿಗೆ ಸಿಕ್ಕಲಿಲ್ಲ. ನಂತರ ನಟಿಸಿದ ಗಣಪ ಹಾಗೂ ಕರಿಯ 2 ಚಿತ್ರ ತಕ್ಕಮಟ್ಟಕ್ಕೆ ಯಶಸ್ಸು ಕಂಡಿದ್ದವು. ನಂತರದ ದಿನಗಳಲ್ಲಿ ಒಂದಷ್ಟು ಸಿನಿಮಾದಲ್ಲಿ ನಟಿಸಿದರೂ ಯಾವ ಚಿತ್ರ ಕೂಡಾ ಅಷ್ಟರ ಮಟ್ಟಿಗೆ ಕೈ ಹಿಡಿಯಲಿಲ್ಲ. ಸಂತೋಷ್ ಅಭಿನಯದ ಸತ್ಯ ಚಿತ್ರ ಇನ್ನೂ ರಿಲೀಸಾಗಬೇಕಿತ್ತು.

ಎಲ್ಲರ ಜತೆ ಸ್ನೇಹಮಯ ವ್ಯಕ್ತಿತ್ವ ಹೊಂದಿದ್ದ ಸಂತೋಷ್ ಒಂದೂವರೆ ವರ್ಷದ ಹಿಂದಷ್ಟೇ ತಂದೆಯನ್ನು ಕಳೆದುಕೊಂಡಿದ್ದರು. ಸಂತೋಷ್ ಬಾಲರಾಜ್ ಸದ್ಯದಲ್ಲೇ ಮದುವೆಯಾಗುವ ಸಿದ್ದತೆಯನ್ನೂ ನಡೆಸಿದ್ದರು. ಒಬ್ಬ ತಂಗಿ ಹಾಗೂ ತಾಯಿಯನ್ನು ಬಿಟ್ಟು ಸಂತೋಷ್ ಈಗ ಬಾರದ ಲೋಕಕ್ಕೆ ಪಯಣಿಸಿದ್ದಾರೆ.

ಇದನ್ನೂ ಓದಿ: Actor Santhosh Balaraj: ತೀವ್ರ ಅನಾರೋಗ್ಯ; ಸ್ಯಾಂಡಲ್‌ವುಡ್‌ ಯುವ ನಟ ಸಂತೋಷ್ ಬಾಲರಾಜ್ ಸ್ಥಿತಿ ಗಂಭೀರ