Thursday, 3rd October 2024

Kannada New Movie: ನಟ ಲಿಖಿತ್ ಶೆಟ್ಟಿ ಅಭಿನಯದ ‘ಫುಲ್ ಮೀಲ್ಸ್ʼ ಚಿತ್ರದ ಪೋಸ್ಟರ್‌ ರಿಲೀಸ್‌

Kannada New Movie

ಬೆಂಗಳೂರು: ಸಂಕಷ್ಟಕರ ಗಣಪತಿ, ಫ್ಯಾಮಿಲಿ ಪ್ಯಾಕ್, ಅಬ್ಬಬ್ಬ ಚಿತ್ರಗಳ ಖ್ಯಾತಿಯ ನಾಯಕ ನಟ ಲಿಖಿತ್ ಶೆಟ್ಟಿ ನಟಿಸಿ, ನಿರ್ಮಿಸುತ್ತಿರುವ ‘ಫುಲ್ ಮೀಲ್ಸ್ʼ ಚಿತ್ರದ (Kannada New Movie) ನಾಯಕಿ ತೇಜಸ್ವಿನಿ ಶರ್ಮ ಹುಟ್ಟುಹಬ್ಬದ ಅಂಗವಾಗಿ ಚಿತ್ರತಂಡ ಬರ್ತ್‌ಡೇ ಫೋಸ್ಟರ್ ಅನ್ನು ಬಿಡುಗಡೆ ಮಾಡಿದೆ. ತ್ರಿಕೋನ ಪ್ರೇಮಕಥೆ ಹೊಂದಿರುವ ಸಿನಿಮಾದಲ್ಲಿ ನಾಯಕ ಲಿಖಿತ್ ಶೆಟ್ಟಿ ನಾಯಕಿಯರಾದ ತೇಜಸ್ವಿನಿ ಶರ್ಮ ಮತ್ತು ಖುಷಿ ರವಿಯೊಟ್ಟಿಗಿರುವ ವಿಭಿನ್ನ ಭಂಗಿಯ, ಭಾವದ ಪೋಸ್ಟರ್ (Poster) ನೋಡುಗರ ಗಮನ ಸೆಳೆದಿದ್ದು, ಸಿನಿಮಾದ ಬಗ್ಗೆ ಕುತೂಹಲ ಹೆಚ್ಚಿಸಿದೆ.

ತೇಜಸ್ವಿನಿ ಶರ್ಮ ಚಿತ್ರದಲ್ಲಿ ಮೇಕಪ್ ಆರ್ಟಿಸ್ಟ್ ಪಾತ್ರವನ್ನು ಮಾಡಿದ್ದು, ಅವರ ಪಾತ್ರವನ್ನು ತೆರೆಯ ಮೇಲೆ ನೋಡಲು ಸಾಕಷ್ಟು ಕಾತುರರಾಗಿದ್ದಾರೆ. ಚಿತ್ರದ ಪೋಸ್ಟ್ ಪ್ರೊಡಕ್ಷನ್ ಕೆಲಸ ಬಹುತೇಕ ಮುಗಿದಿದ್ದು, ಸದ್ಯಕ್ಕೆ ಹಿನ್ನೆಲೆ ಸಂಗೀತದ ಕೆಲಸ ನಡೆಯುತ್ತಿದ್ದು, ವರ್ಷಾಂತ್ಯದೊಳಗೆ ಚಿತ್ರವನ್ನು ತೆರೆಗೆ ತರುವ ಯೋಚನೆಯಲ್ಲಿ ಚಿತ್ರತಂಡವಿದೆ.

ಈ ಸುದ್ದಿಯನ್ನೂ ಓದಿ | Bigg Boss Telugu 8: ತೆಲುಗು ಬಿಗ್‌ಬಾಸ್‌ನಲ್ಲಿ ಕನ್ನಡಿಗರದ್ದೇ ಹವಾ

ವೆಡ್ಡಿಂಗ್ ಫೋಟೋಗ್ರಾಫರ್ ಸುತ್ತ ಸುತ್ತುವ ಕಥಾ ಹಂದರವನ್ನು ಹೊಂದಿರುವ ಸಿನಿಮಾ, ಮನೋರಂಜನೆಯ ಜತೆಗೆ ಸಾಕಷ್ಟು ಹೊಸ ವಿಷಯಗಳನ್ನು ಒಳಗೊಂಡಿದ್ದು, ಪ್ರೇಕ್ಷಕರು ಸಿನಿಮಾವನ್ನು ಇಷ್ಟಪಡುತ್ತಾರೆಂಬ ವಿಶ್ವಾಸ ಚಿತ್ರತಂಡಕ್ಕಿದೆ.

ಲಿಖಿತ್ ಶೆಟ್ಟಿಗೆ ನಾಯಕಿಯರಾಗಿ ಖುಷೀ ರವಿ ಮತ್ತು ತೇಜಸ್ವಿನಿ ಶರ್ಮ ಅಭಿನಯಿಸಿದ್ದು, ಚಿತ್ರದುರ್ಗದ ಪ್ರತಿಭೆ ಎನ್. ವಿನಾಯಕ ಚಿತ್ರದ ಮೂಲಕ ಮೊದಲ ಬಾರಿಗೆ ನಿರ್ದೇಶನದ ಜವಾಬ್ದಾರಿ ಹೊತ್ತಿದ್ದಾರೆ. ಸಿನಿಮಾಗೆ ಹರೀಶ್ ಗೌಡ ಸಂಭಾಷಣೆ ಬರೆದಿದ್ದು, ಮನೋಹರ್ ಜೋಷಿ ಛಾಯಾಗ್ರಹಣ, ಗುರು ಕಿರಣ್ ಸಂಗೀತ, ದೀಪು ಎಸ್. ಕುಮಾರ್ ಸಂಕಲನ, ವಿಶ್ವಾಸ್ ಕಶ್ಯಪ್ ಕಲಾ ನಿರ್ದೇಶನ, ಅರ್ಜುನ್ ರಾಜ್ ಸಾಹಸ ನಿರ್ದೇಶನ ಚಿತ್ರಕ್ಕಿದೆ.

ಈ ಸುದ್ದಿಯನ್ನೂ ಓದಿ | Jio network : ದೇಶಾದ್ಯಂತ ಜಿಯೊ ನೆಟ್‌ವರ್ಕ್‌ ಸಮಸ್ಯೆ; ಗ್ರಾಹಕರಿಂದ ದೂರುಗಳ ಸುರಿಮಳೆ

ಉಳಿದಂತೆ ತಾರಾಗಣದಲ್ಲಿ ರಂಗಾಯಣ ರಘು, ಸೂರಜ್ ಲೋಕ್ರೆ, ವಿಜಯ್ ಚಂಡೂರ್, ರವಿ ಶಂಕರ್ ಗೌಡ, ರಾಜೇಶ್ ನಟರಂಗ, ಸುಜಯ್ ಶಾಸ್ತ್ರಿ, ಚಂದ್ರಕಲಾ ಮೋಹನ್, ಹೂನ್ನವಳ್ಳಿ ಕೃಷ್ಣ, ರಮೇಶ್ ಪಂಡಿತ್, ಚೇತನ್ ದುರ್ಗಾ, ನಾಗೇಂದ್ರ ಅರಸ್, ಮೂಗು ಸುರೇಶ್ ಸೇರಿದಂತೆ ಬಹು ದೊಡ್ಡ ತಾರಾ ಬಳಗವೇ ಇದೆ.