ಫೋಟೋ ಗ್ಯಾಲರಿ ಗುಜರಾತ್​ ವಿಮಾನ ಪತನ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Kannappa Movie: ವಿಷ್ಣು ಮಂಚು ನಟನೆಯ ʼಕಣ್ಣಪ್ಪʼ ಚಿತ್ರ ವೀಕ್ಷಿಸಿ, ಮೆಚ್ಚುಗೆ ವ್ಯಕ್ತಪಡಿಸಿದ ರಜನಿಕಾಂತ್

Kannappa Movie: ಸೂಪರ್‌ಸ್ಟಾರ್ ರಜನಿಕಾಂತ್ ಅವರು ವಿಷ್ಣು ಮಂಚು ಅಭಿನಯದ ʼಕಣ್ಣಪ್ಪʼ ಚಿತ್ರ ವೀಕ್ಷಿಸಿ, ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಬಹುತಾರಾಗಣದ ಈ‌ ಸಿನಿಮಾ ತೆಲುಗು, ಕನ್ನಡ, ತಮಿಳು, ಮಲಯಾಳಂ, ಹಿಂದಿ‌ ಭಾಷೆಗಳಲ್ಲಿ‌ ಜೂನ್ 27 ರಂದು ಬಿಡುಗಡೆ ಆಗಲಿದೆ. ಈ ಕುರಿತ ವಿವರ ಇಲ್ಲಿದೆ.

ʼಕಣ್ಣಪ್ಪʼ ಚಿತ್ರಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ ರಜನಿಕಾಂತ್

Profile Siddalinga Swamy Jun 17, 2025 8:54 PM

ಬೆಂಗಳೂರು: ಕಳೆದ 30 ವರ್ಷಗಳ ಹಿಂದಿನ ಸ್ಮರಣೀಯ ಕ್ಷಣಗಳು ಮತ್ತು ಚಿತ್ರರಂಗದ ಸಂಭ್ರಮದ ನಡುವೆ, ಭಾರತೀಯ ಚಿತ್ರರಂಗದ ಇಬ್ಬರು ದಿಗ್ಗಜರಾದ ಸೂಪರ್‌ಸ್ಟಾರ್ ರಜನಿಕಾಂತ್ ಹಾಗೂ ನಟ ಮೋಹನ್ ಬಾಬು ಚೆನ್ನೈನಲ್ಲಿ ಮತ್ತೆ ಒಂದಾದರು. ಇದಕ್ಕೆ ಕಾರಣ ʼಪೆದರಾಯುಡುʼ ಸಿನಿಮಾ. ಈ ಚಿತ್ರ ಜೂನ್ 15, 1995ರಂದು ತೆರೆಕಂಡಿತ್ತು. ಇದೀಗ 30 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಇಬ್ಬರೂ ಸ್ಟಾರ್ ನಟರು ವಿಷ್ಣು ಮಂಚು‌ ನಟನೆಯ ʼಕಣ್ಣಪ್ಪʼ ಸಿನಿಮಾ (Kannappa Movie) ವೀಕ್ಷಿಸಿ ಹಳೇ ನೆನಪುಗಳನ್ನು ಮೆಲುಕು ಹಾಕಿದರು.

ರವಿ ರಾಜ‌ ಪಿನಿಸೆಟ್ಟಿ ನಿರ್ದೇಶನದಲ್ಲಿ ಮೂಡಿಬಂದ ʼಪೆದರಾಯುಡುʼ ಸಿನಿಮಾ, ಅಂದಿನ ಕಾಲದಲ್ಲಿ ಬ್ಲಾಕ್ ಬಸ್ಟರ್ ಹಿಟ್ ಆಗಿತ್ತು. ಗಟ್ಟಿ ಕಥಾ ಶೈಲಿ, ನೆನಪಲ್ಲಿ ಉಳಿಯುವ ಅಭಿನಯಗಳು ಮತ್ತು ಅದ್ವಿತೀಯ ಮಾಸ್ ಆಕರ್ಷಣೆಯಿಂದ ತೆಲುಗು ಚಿತ್ರರಂಗದಲ್ಲಿ ಈ ಚಿತ್ರ ಶಾಶ್ವತವಾಗಿ ಉಳಿದಿದೆ. ಈ ಚಿತ್ರ 30 ವರ್ಷ ಪೂರೈಸಿದ ಬೆನ್ನಲ್ಲೇ ರಜನಿಕಾಂತ್ ಮತ್ತು ಮೋಹನ್ ಬಾಬು ಒಂದೆಡೆ ಸೇರಿ ʼಕಣ್ಣಪ್ಪʼ ಚಿತ್ರ ವೀಕ್ಷಿಸಿದರು.

ಅಂದಹಾಗೆ, ಜೂನ್ 27 ರಂದು ಜಾಗತಿಕ ಮಟ್ಟದಲ್ಲಿ ಪ್ಯಾನ್ ಇಂಡಿಯಾ ಮಟ್ಟದಲ್ಲಿ ʼಕಣ್ಣಪ್ಪʼ ಸಿನಿಮಾ ಬಿಡುಗಡೆಗೊಳ್ಳಲಿದೆ. ಈ ಚಿತ್ರದಲ್ಲಿ ಶಿವನ ಭಕ್ತರಾದ ಕಣ್ಣಪ್ಪನ ಕಥೆಯನ್ನು ವಿಶಿಷ್ಟವಾಗಿ ಆವರಿಸಿಕೊಂಡಿದ್ದಾರೆ. ಚಿತ್ರ ವೀಕ್ಷಿಸಿದ ಬಳಿಕ ರಜನಿಕಾಂತ್ ಕೊಂಚ ಭಾವುಕರಾಗಿದ್ದಾರೆ.

ʼಇದು ಅಸಾಧಾರಣ ಚಿತ್ರ. ಭಾವನೆ, ದೃಶ್ಯ ವೈಭವ ಮತ್ತು ಅಧ್ಯಾತ್ಮ—all extraordinary,' ಎಂದು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಇತ್ತ ರಜನಿಕಾಂತ್ ಬಗ್ಗೆಯೂ ಮಾತನಾಡಿದ ಮೋಹನ್ ಬಾಬು, ʼಇವತ್ತು 22 ವರ್ಷಗಳಿಂದ ನಿರೀಕ್ಷಿಸುತ್ತಿದ್ದ ರಜನಿಕಾಂತ್ ಅವರ ಆಲಿಂಗನ ದೊರೆತಿದೆ. ಈಗ ನಾನು ಹೆದರುವುದಿಲ್ಲ. ನಾನು ಅಜೇಯ. ಕಣ್ಣಪ್ಪ ಬರುತ್ತಾನೆ!ʼ ಎಂದು ಅವರು ಸಂಭ್ರಮದಿಂದ ಹೇಳಿದ್ದಾರೆ.

ಈ ಸುದ್ದಿಯನ್ನೂ ಓದಿ | Fashion News 2025: ಉದ್ಯಾನನಗರಿಯಲ್ಲಿ ಯಶಸ್ವಿಯಾದ ಇಂಡಿಯಾ ಫ್ಯಾಷನ್‌ ಐಕಾನ್‌ ಶೋ

ಅಂದಹಾಗೆ ಕಣ್ಣಪ್ಪ ಚಿತ್ರವನ್ನು ಮುಖೇಶ್ ಕುಮಾರ್ ಸಿಂಗ್ ನಿರ್ದೇಶನ‌ ಮಾಡಿದ್ದಾರೆ. ಪುತ್ರ‌ನ ಚಿತ್ರಕ್ಕೆ ಮೋಹನ್‌ ಬಾಬು ಬಂಡವಾಳ ಹೂಡಿ ನಿರ್ಮಾಪಕರಾಗಿದ್ದಾರೆ. ಬಹುತಾರಾಗಣದ ಈ‌ ಸಿನಿಮಾ ತೆಲುಗು, ಕನ್ನಡ, ತಮಿಳು, ಮಲಯಾಳಂ, ಹಿಂದಿ‌ ಭಾಷೆಗಳಲ್ಲಿ‌ ಜೂನ್ 27 ರಂದು ಬಿಡುಗಡೆ ಆಗಲಿದೆ.