ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Karnataka State Film Awards: ಕರ್ನಾಟಕ ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರಕಟ; ರಕ್ಷಿತ್ ಶೆಟ್ಟಿ ಅತ್ಯುತ್ತಮ ನಟ, ಅರ್ಚನಾ ಜೋಯಿಸ್ ಅತ್ಯುತ್ತಮ ನಟಿ

State Film Awards: 2021ನೇ ಸಾಲಿನ ಕನ್ನಡ ಸಿನಿಮಾಗಳಿಗೆ ಕರ್ನಾಟಕ ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರಕಟ ಆಗಿದೆ. ‘ದೊಡ್ಡಹಟ್ಟಿ ಬೋರೆಗೌಡ’ ಚಿತ್ರಕ್ಕೆ ಮೊದಲನೇ ಅತ್ಯುತ್ತಮ ಚಿತ್ರ ಪ್ರಶಸ್ತಿ ನೀಡಲಾಗಿದ್ದು, ‘777 ಚಾರ್ಲಿ’ ಸಿನಿಮಾ ‘2ನೇ ಅತ್ಯುತ್ತಮ ಚಿತ್ರ’ ಪ್ರಶಸ್ತಿ ಪಡೆದುಕೊಂಡಿದೆ.

ಬೆಂಗಳೂರು: 2021ನೇ ಸಾಲಿನ ಕರ್ನಾಟಕ ರಾಜ್ಯ ಚಲನಚಿತ್ರ ಪ್ರಶಸ್ತಿ (Karnataka State Film Awards) ಪ್ರಕಟ ಆಗಿದೆ. ‘777 ಚಾರ್ಲಿ’ ಸಿನಿಮಾದಲ್ಲಿನ ಅಭಿನಯಕ್ಕಾಗಿ ರಕ್ಷಿತ್ ಶೆಟ್ಟಿ (Rakshit Shetty) ಅವರು ಅತ್ಯುತ್ತಮ ನಟ ರಾಜ್ಯ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಇನ್ನು ‘ಮ್ಯೂಟ್’ ಸಿನಿಮಾದ ಅಭಿನಯಕ್ಕಾಗಿ ಅರ್ಚನಾ ಜೋಯಿಸ್ ಅವರು ಅತ್ಯುತ್ತಮ ನಟಿ ಪ್ರಶಸ್ತಿಗೆ ಭಾಜನರಾಗಿದ್ದಾರೆ. ‘ದೊಡ್ಡಹಟ್ಟಿ ಬೋರೆಗೌಡ’ ಚಿತ್ರಕ್ಕೆ ಮೊದಲನೇ ಅತ್ಯುತ್ತಮ ಚಿತ್ರ ಪ್ರಶಸ್ತಿ ನೀಡಲಾಗಿದ್ದು, ‘777 ಚಾರ್ಲಿ’ ಸಿನಿಮಾ ‘2ನೇ ಅತ್ಯುತ್ತಮ ಚಿತ್ರ’ ಪ್ರಶಸ್ತಿಗೆ ಆಯ್ಕೆಯಾಗಿದೆ.

ಲೋಕೇಶ್ ಕೆ.ಎಂ ನಿರ್ಮಾಣ, ರಘು ಕೆ.ಎಂ. ನಿರ್ದೇಶನದಲ್ಲಿ ‘ದೊಡ್ಡಹಟ್ಟಿ ಬೋರೆಗೌಡ’ ಮೂಡಿಬಂದಿದೆ. ‘777 ಚಾರ್ಲಿ’ ಸಿನಿಮಾವನ್ನು ರಕ್ಷಿತ್ ಶೆಟ್ಟಿ ನಿರ್ಮಾಣ ಮಾಡಿದ್ದು, ಕಿರಣ್ ರಾಜ್ ಕೆ. ನಿರ್ದೇಶಿಸಿದ್ದಾರೆ. ಹೃದಯಶಿವ ನಿರ್ದೇಶನ ಮಾಡಿದ ‘ಬಿಸಿಲು ಕುದುರೆ’ ಸಿನಿಮಾಗೆ 3ನೇ ಅತ್ಯುತ್ತಮ ಚಿತ್ರ ಪ್ರಶಸ್ತಿ ನೀಡಲಾಗಿದೆ.

‘ರತ್ನನ್ ಪ್ರಪಂಚ’ ಸಿನಿಮಾದ ಅಭಿನಯಕ್ಕಾಗಿ ಪ್ರಮೋದ್ ಅವರು ಅತ್ಯುತ್ತಮ ಪೋಷಕ ನಟ ಹಾಗೂ ಉಮಾಶ್ರೀ ಅವರು ಅತ್ಯುತ್ತಮ ಪೋಷಕ ನಟಿ ಪ್ರಶಸ್ತಿಗೆ ಭಾಜನರಾಗಿದ್ದಾರೆ. ‘ಬಿಸಿಲು ಕುದುರೆ’ ಸಿನಿಮಾದ ಸಂಗೀತಕ್ಕಾಗಿ ಇಮ್ತಿಯಾಜ್ ಸುಲ್ತಾನ್ ಅವರಿಗೆ ‘ಅತ್ಯುತ್ತಮ ಸಂಗೀತ ನಿರ್ದೇಶನ’ ಪ್ರಶಸ್ತಿ ನೀಡಲಾಗಿದೆ. ‘ಕೇಕ್’ ಚಿತ್ರದ ನಟನೆಗೆ ಮಾಸ್ಟರ್ ಅತೀಶ್ ಶೆಟ್ಟಿಗೆ ಅತ್ಯುತ್ತಮ ಬಾಲನಟ ಪ್ರಶಸ್ತಿ ನೀಡಲಾಗಿದೆ. ‘ಭೈರವಿ’ ಸಿನಿಮಾದ ಅಭಿನಯಕ್ಕಾಗಿ ಬೇಬಿ ಭೈರವಿಗೆ ಅತ್ಯುತ್ತಮ ಬಾಲ ನಟಿ ಪ್ರಶಸ್ತಿ ನೀಡಲಾಗಿದೆ.

ವಿಶೇಷ ಸಾಮಾಜಿಕ ಕಳಕಳಿ ಚಿತ್ರ ಪ್ರಶಸ್ತಿಯನ್ನು ‘ಭಾರತದ ಪ್ರಜೆಗಳಾದ ನಾವು’ ಸಿನಿಮಾಗೆ ನೀಡಲಾಗಿದೆ. ಪುನೀತ್ ರಾಜ್​​ಕುಮಾರ್ ನಟನೆಯ ‘ಯುವರತ್ನ’ ಚಿತ್ರಕ್ಕೆ ‘ಅತ್ಯುತ್ತಮ ಜನಪ್ರಿಯ ಮನರಂಜನಾ ಸಿನಿಮಾ’ ಪ್ರಶಸ್ತಿ ಘೋಷಿಸಲಾಗಿದೆ. ‘ಕೇಕ್’ ಸಿನಿಮಾಗೆ ಅತ್ಯುತ್ತಮ ಮಕ್ಕಳ ಚಿತ್ರ ಪ್ರಶಸ್ತಿ ಸಿಕ್ಕಿದೆ. ಶಂಕರ್ ಗುರು ಅವರಿಗೆ ‘ಬಡವ ರಾಸ್ಕಲ್’ ಚಿತ್ರಕ್ಕಾಗಿ ‘ಅತ್ಯುತ್ತಮ ಚೊಚ್ಚಲ ನಿರ್ದೇಶನ’ ಪ್ರಶಸ್ತಿ ನೀಡಲಾಗಿದೆ.

ಈ ಸುದ್ದಿಯನ್ನೂ ಓದಿ | Landlord Movie: ರಚಿತಾ ರಾಮ್ ಹುಟ್ಟುಹಬ್ಬಕ್ಕೆ ʼಲ್ಯಾಂಡ್ ಲಾರ್ಡ್ʼ ಚಿತ್ರದ ಕ್ಯಾರೆಕ್ಟರ್ ಟೀಸರ್ ಬಿಡುಗಡೆ

ಕೊಡವ ಭಾಷೆಯ ‘ನಾಡ ಪೆದ ಆಶಾ’ ಚಿತ್ರಕ್ಕೆ ಅತ್ಯುತ್ತಮ ಪ್ರಾದೇಶಿಕ ಭಾಷಾ ಸಿನಿಮಾ ಪ್ರಶಸ್ತಿ ಸಿಕ್ಕಿದೆ. ಅತ್ಯುತ್ತಮ ಹಿನ್ನೆಲೆ ಗಾಯಕಿ ಪ್ರಶಸ್ತಿಯನ್ನು ಸಹನಾ ಎಂ. ಭಾರದ್ವಾಜ್ ಅವರಿಗೆ ನೀಡಲಾಗಿದೆ. ಅನೀಶ್ ಕೇಶವ ರಾವ್ ಅವರು ಅತ್ಯುತ್ತಮ ಹಿನ್ನೆಲೆ ಗಾಯಕ ಪ್ರಶಸ್ತಿ ಪಡೆದುಕೊಂಡಿದ್ದಾರೆ. ‘ಭಜರಂಗಿ 2’ ಸಿನಿಮಾಗಾಗಿ ರವಿ ಸಂತೇಹಕ್ಲು ಅವರು ‘ಅತ್ಯುತ್ತಮ ಕಲಾ ನಿರ್ದೇಶನ’ ಪ್ರಶಸ್ತಿ ಪಡೆದುಕೊಂಡಿದ್ದಾರೆ.