ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Khela Movie: ವಿಹಾನ್ ಪ್ರಭಂಜನ್ ಅಭಿನಯದ ʼಖೇಲಾʼ ಚಿತ್ರದ ʼಪುಣ್ಯಾತ್ ಗಿತ್ತೀʼ ಹಾಡು ರಿಲೀಸ್‌

Khela Movie: ವಿ.ಜೆ. ಭರತ್ ಅವರು ನಿರ್ಮಿಸಿ, ನಿರ್ದೇಶಿಸುತ್ತಿರುವ, ನಟ ವಿಹಾನ್ ಪ್ರಭಂಜನ್ ಅಭಿನಯದ, ವಿಭಿನ್ನ ಕಥಾಹಂದರ ಹೊಂದಿರುವ ʼಖೇಲಾʼ ಚಿತ್ರಕ್ಕಾಗಿ ಪ್ರಮೋದ್ ಜೋಯಿಸ್ ಬರೆದಿರುವ, ಖ್ಯಾತ ಗಾಯಕ ವೇಲ್ ಮುರುಗನ್ ಹಾಡಿರುವ ʼಪುಣ್ಯಾತ್ ಗಿತ್ತೀʼ ಎಂಬ ಹಾಡು ಇತ್ತೀಚೆಗೆ ಬಿಡುಗಡೆಯಾಗಿದೆ. ಈ ಕುರಿತ ವಿವರ ಇಲ್ಲಿದೆ.

1/5

ಭರತ್ ಫಿಲಂಸ್ ಲಾಂಛನದಲ್ಲಿ ವಿ.ಜೆ. ಭರತ್ ಅವರು ನಿರ್ಮಿಸಿ, ನಿರ್ದೇಶಿಸುತ್ತಿರುವ ವಿಭಿನ್ನ ಕಥಾಹಂದರ ಹೊಂದಿರುವ ʼಖೇಲಾʼ ಚಿತ್ರಕ್ಕಾಗಿ ಪ್ರಮೋದ್ ಜೋಯಿಸ್ ಬರೆದಿರುವ, ಖ್ಯಾತ ಗಾಯಕ ವೇಲ್ ಮುರುಗನ್ ಹಾಡಿರುವ ʼಪುಣ್ಯಾತ್ ಗಿತ್ತೀʼ ಎಂಬ ಹಾಡು ಇತ್ತೀಚೆಗೆ ಬಿಡುಗಡೆಯಾಗಿದೆ. ಎಂ.ಎಸ್. ತ್ಯಾಗರಾಜ್ ಸಂಗೀತ ನೀಡಿರುವ ಈ ಹಾಡಿಗೆ ಮೆಚ್ಚುಗೆಯ ಮಹಾಪೂರವೇ ಹರಿದು ಬರುತ್ತಿದ್ದು, ಆಧಿಕ ಸಂಖ್ಯೆಯಲ್ಲಿ ವೀಕ್ಷಣೆಯಾಗುತ್ತಿದೆ. ಹಾಡು ಬಿಡುಗಡೆ ನಂತರ ‌ಚಿತ್ರತಂಡದ ಸದಸ್ಯರು ಸಿನಿಮಾ ಕುರಿತು‌ ಮಾತನಾಡಿದರು.

2/5

ನಾನು ಕನ್ನಡದ ಹಿರಿಯ ನಿರ್ಮಾಪಕ ಹಾಗೂ ನಿರ್ದೇಶಕ ವಿಷ್ಣುಕಾಂತ್ ಅವರ ಪುತ್ರ. ಅಪ್ಪನ ಮಾರ್ಗದರ್ಶನದಲ್ಲಿ ಚೊಚ್ಚಲ ಚಿತ್ರವನ್ನು ನಿರ್ಮಿಸುವುದರ ಜತೆಗೆ ನಿರ್ದೇಶನವನ್ನೂ ಮಾಡಿದ್ದೇನೆ. ಪ್ರಮುಖವಾಗಿ ಇದೊಂದು ಪ್ರೇಮ ಕಥಾನಕವಾಗಿದ್ದರೂ, ತಾಯಿ - ಮಗನ ಬಾಂಧವ್ಯ, ಸಸ್ಪೆನ್ಸ್, ಥ್ರಿಲ್ಲರ್ ಹೀಗೆ ನೋಡುಗರಿಗೆ ಬೇಕಾದ ಎಲ್ಲಾ ಅಂಶಗಳು ನಮ್ಮ ಚಿತ್ರದಲ್ಲಿದೆ. ತಾಯಂದಿರ ದಿನದಂದು ಮೊದಲ ಹಾಡು ಬಿಡುಗಡೆಯಾಗಿತ್ತು. ಇಂದು ʼಪುಣ್ಯಾತ್ ಗಿತ್ತೀʼ ಹಾಡನ್ನು ಬಿಡುಗಡೆ ಮಾಡಿದ್ದೇವೆ. ಎಂ.ಎಸ್. ತ್ಯಾಗರಾಜ್ ಸಂಗೀತ ನಿರ್ದೇಶನದಲ್ಲಿ ಎಲ್ಲಾ ಹಾಡುಗಳು ಉತ್ತಮವಾಗಿ ಮೂಡಿಬಂದಿದೆ. ವಿಹಾನ್ ಪ್ರಭಂಜನ್, ಆಶಿಕ ರಾವ್ ಅವರು ನಾಯಕ, ನಾಯಕಿಯಾಗಿ ನಟಿಸಿರುವ ಈ ಚಿತ್ರದ ವಿಶೇಷ ಪಾತ್ರದಲ್ಲಿ ಸಂಗೀತ ಭಟ್ ಸಹ ಅಭಿನಯಿಸಿದ್ದಾರೆ. ಚಿತ್ರದ ಬಹುತೇಕ ಚಿತ್ರೀಕರಣ ಮುಕ್ತಾಯವಾಗಿದ್ದು, ಒಂದು ಹಾಡು ಹಾಗು ಒಂದು ಫೈಟ್‌ನ‌ ಚಿತ್ರೀಕರಣ ಮಾತ್ರ ಬಾಕಿ ಇದೆ ಎಂದು ನಿರ್ಮಾಪಕ ಹಾಗೂ ನಿರ್ದೇಶಕ‌ ಭರತ್ ವಿ.ಜೆ. ತಿಳಿಸಿದರು.

3/5

ತಾಯಂದಿರ ದಿನದಂದು ಬಿಡುಗಡೆಯಾದ ತಾಯಿ - ಮಗನ ಬಾಂಧವ್ಯದ ಹಾಡು ಈಗಾಗಲೇ ಜನಪ್ರಿಯವಾಗಿದೆ. ಇಂದು ಬಿಡುಗಡೆಯಾಗಿರುವ ʼಪುಣ್ಯಾತ್ ಗಿತ್ತೀʼ ಹಾಡು ಕೂಡ ಎಲ್ಲರ ಮೆಚ್ಚುಗೆ ಪಡೆಯುತ್ತಿದೆ.‌ ನಾನು ಈ ಚಿತ್ರದ ನಾಯಕ. ‌ಚಿತ್ರದಲ್ಲಿ ಕಾಲೇಜು ಹುಡುಗ ಎಂದು ನಾಯಕ ವಿಹಾನ್ ಪ್ರಭಂಜನ್ ತಿಳಿಸಿದರು.

4/5

ನಮ್ಮ ಚಿತ್ರದಲ್ಲಿ ಐದು ಹಾಡುಗಳಿದ್ದು, ಈ ಹಾಡು ಸೇರಿದಂತೆ ಎರಡು ಹಾಡುಗಳನ್ನು ಪ್ರಮೋದ್ ಜೋಯಿಸ್ ಬರೆದಿದ್ದಾರೆ. ವೇಲ್ ಮುರುಗನ್ ʼಪುಣ್ಯಾತ್ ಗಿತ್ತೀʼ ಹಾಡನ್ನು ಹಾಡಿದ್ದಾರೆ ಎಂದು ಹಾಡುಗಳ ಹಾಗೂ ಹಾಡಿರುವವರ ಬಗ್ಗೆ ಸಂಗೀತ ನಿರ್ದೇಶಕ ಎಂ.ಎಸ್. ತ್ಯಾಗರಾಜ್ ಮಾಹಿತಿ ನೀಡಿದರು.

5/5

ನಾಯಕಿ ಆಶಿಕಾ ರಾವ್, ಪ್ರಮುಖ ಪಾತ್ರಧಾರಿ ಯುವರಾಜ್ ಗೌಡ, ಹಾಡು ಬರೆದಿರುವ ಪ್ರಮೋದ್ ಜೋಯಿಸ್ ಹಾಗೂ ಛಾಯಾಗ್ರಾಹಕ ಸ್ವಾಮಿ ಮೈಸೂರು ಮುಂತಾದ ಚಿತ್ರತಂಡದ ಸದಸ್ಯರು ʼಖೇಲಾʼ ಚಿತ್ರದ ಕುರಿತು ಮಾತನಾಡಿದರು.