Thursday, 12th December 2024

’ಕೈ’ ತೊರೆದ ಖುಷ್ಬೂ

ಚೆನ್ನೈ: ಹಿರಿಯ ನಟಿ ಹಾಗೂ ರಾಜಕಾರಣಿ ಖುಷ್ಬೂ ಸುಂದರ್ ಸೋಮವಾರ ಕಾಂಗ್ರೆಸ್ ಪಕ್ಷಕ್ಕೆ ಗುಡ್ ಬೈ ಹೇಳಿದ್ದಾರೆ.

ಪಕ್ಷದಲ್ಲಿನ ಕೆಲವು ಬೆಳವಣಿಗೆಗಳು ಮತ್ತು ಪ್ರಾಮಾಣಿಕವಾಗಿ ಅಲ್ಲಿ ದುಡಿಯಲು ಸಾಧ್ಯವಾಗದಿರುವ ಹಿನ್ನೆಲೆಯಲ್ಲಿ ಈ ನಿರ್ಧಾರಕ್ಕೆ ಬಂದಿರುವುದಾಗಿ ಖುಷ್ಬೂ ಹೇಳಿದ್ದಾರೆ.

ತಾವು ಕಾಂಗ್ರೆಸ್ ಪಕ್ಷಕ್ಕೆ ಮತ್ತು ಎಐಸಿಸಿ ರಾಷ್ಟ್ರೀಯ ವಕ್ತಾರೆ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ತಿಳಿಸಿ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿಗೆ ಪತ್ರ ಬರೆದಿದ್ದಾರೆ. ಕಾಂಗ್ರೆಸ್ ಪಕ್ಷಕ್ಕೆ ಖುಷ್ಬೂ ಅವರು ರಾಜೀನಾಮೆ ನೀಡಿದ ತಕ್ಷಣವೇ ಅವರನ್ನು ಎಐಸಿಸಿ ವಕ್ತಾರೆ ಹುದ್ದೆಯಿಂದ ಕೆಳಗಿಳಿಸಲಾಗಿದೆ ಎಂದು ಕಾಂಗ್ರೆಸ್ ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದೆ.