Thursday, 12th September 2024

ಕೃತಿ ನನಗೆ ಮಗಳಂತೆ, ಹೀಗಾಗಿ ತೆರೆಯ ಮೇಲೆ ಹೇಗೆ ರೊಮ್ಯಾನ್ಸ್​ ಮಾಡಲಿ? :ವಿಜಯ್​ ಸೇತುಪತಿ

ಚೆನ್ನೈ: ತಮಿಳು ಚಿತ್ರರಂಗದ ಸೂಪರ್​ಸ್ಟಾರ್​ ವಿಜಯ್​ ಸೇತುಪತಿ ಖಳನಾಯಕನಾಗಿ ನಟಿಸಿದ ಜವಾನ್​ ಸಿನಿಮಾ ಭರ್ಜರಿ ಯಶಸ್ಸು ದಾಖಲಿಸಿದೆ. ಇದರ ನಡುವೆ ವಿಜಯ್ ಅವರ ಹಳೆಯ ಸಂದರ್ಶನದ ವಿಡಿಯೋ ತುಣುಕು ವೈರಲ್ ಆಗಿದೆ.

ಕೃತಿ ಶೆಟ್ಟಿ ತೆಲುಗಿನ ಉಪ್ಪೇನಾ ಚಿತ್ರದ ಮೂಲಕ ಟಾಲಿವುಡ್​ಗೆ ಪದಾರ್ಪಣೆ ಮಾಡಿದರು. ಈ ಚಿತ್ರದಲ್ಲಿ ವಿಜಯ್​ ಸೇತುಪತಿ ಅವರು ನಾಯಕಿ ಕೃತಿ ಶೆಟ್ಟಿ ತಂದೆಯ ಪಾತ್ರದಲ್ಲಿ ನಟಿಸಿದ್ದಾರೆ. ಕೃತಿಯ ನಟನೆಯನ್ನು ನೋಡಿ ಸೇತುಪತಿ ಮನಸಾರೆ ಹೊಗಳಿದ್ದರು. ಅಲ್ಲದೆ, ಕೃತಿಯೊಂದಿಗೆ ತಮಿಳು ಚಿತ್ರವೊಂದರಲ್ಲಿ ನಟಿಸಲು ನಿರಾಕರಿಸಿದ್ದಕ್ಕೆ ಕಾರಣ ನೀಡಿರುವ ವಿಡಿಯೋ ತುಣುಕು ವೈರಲ್​ ಆಗಿದೆ.

ನಾನು ಉಪ್ಪೇನಾ ಚಿತ್ರದಲ್ಲಿ ಕೃತಿಗೆ ತಂದೆಯಾಗಿ ಅಭಿನಯಿಸಿದ್ದೇನೆ. ನನ್ನ ಮಗಳೆಂದು ಭಾವಿಸಿದ ಮೇಲೆ ಅವಳೊಂದಿಗೆ ನಾನ್ಹೇಗೆ ರೊಮ್ಯಾನ್ಸ್​ ಮಾಡಲು ಸಾಧ್ಯ ಎಂದು ಹೇಳಿ ದ್ದಾಗಿ ತಿಳಿಸಿದೆ. ಉಪ್ಪೇನಾ ಚಿತ್ರದ ಕ್ಲೈಮ್ಯಾಕ್ಸ್​ ಚಿತ್ರೀಕರಣದ ವೇಳೆ ನನ್ನನ್ನು ನಿನ್ನ ತಂದೆಯಂದೇ ಭಾವಿಸು. ನನ್ನ ಮಗನಿಗೆ ಸುಮಾರು 15 ವರ್ಷ. ಆತ ಕೃತಿಗಿಂತ ಸ್ವಲ್ಪ ಚಿಕ್ಕವನು. ಕೃತಿಯನ್ನು ಕೂಡ ನಾನು ಮಗಳಂತೆ ಭಾವಿಸುತ್ತೇನೆ. ಆದ್ರೆ ತೆರೆಯ ಮೇಲೆ ಹೇಗೆ ಅವಳೊಂದಿಗೆ ರೊಮ್ಯಾನ್ಸ್​ ಮಾಡಲು ಸಾಧ್ಯ. ಹೀಗಾಗಿ ಚಿತ್ರದ ನಾಯಕಿಯಾಗಿ ಅವಳ ಪ್ರಸ್ತಾವನೆಯನ್ನು ತಿರಸ್ಕರಿಸಿದ್ದೇನೆಂದು ಹೇಳಿದ್ದರು.

Leave a Reply

Your email address will not be published. Required fields are marked *