Saturday, 14th December 2024

ಹಿರಿಯ ನಟ ಲೋಹಿತಾಶ್ವರಿಗೆ ಹೃದಯಾಘಾತ

ಬೆಂಗಳೂರು: ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಹಿರಿಯ ನಟ ಲೋಹಿತಾಶ್ವ ಅವರಿಗೆ ಹೃದಯಾಘಾತವಾಗಿದೆ.

ಅವರನ್ನು ಕುಮಾರಸ್ವಾಮಿ ಲೇಔಟ್ ನಲ್ಲಿರುವ ಅಪೋಲೋ ಆಸ್ಪತ್ರೆಗೆ ದಾಖಲಿಸ ಲಾಗಿದೆ. ಅವರ ಆರೋಗ್ಯ ಸ್ಥಿತಿ ಗಂಭೀರ ವಾಗಿದೆ. ಚಿಕಿತ್ಸೆ ಮುಂದುವರಿದಿದೆ.

ಟಿ.ಎಸ್. ಲೋಹಿತಾಶ್ವ ಅವರು ಚಿತ್ರ ನಟ, ನಾಟಕಕಾರ ಮತ್ತು ನಿವೃತ್ತ ಇಂಗ್ಲಿಷ್ ಪ್ರಾಧ್ಯಾಪಕರಾಗಿದ್ದರು. ಅವರು ಐನೂರಕ್ಕೂ ಹೆಚ್ಚು ಕನ್ನಡ ಚಲನಚಿತ್ರಗಳು, ರಂಗ ನಾಟಕಗಳು ಮತ್ತು ದೂರದರ್ಶನ ಧಾರಾವಾಹಿಗಳಲ್ಲಿ ನಟಿಸಿದ್ದಾರೆ.

ಅವರು ಚಿತ್ರರಂಗದಲ್ಲಿ ತಮ್ಮ ಗಂಭೀರ ಧ್ವನಿಗೆ ಹೆಸರಾದವರು. ಅವರ ಪುತ್ರ ನಟ ಶರತ್ ಲೋಹಿತಾಶ್ವ ಕನ್ನಡ ಚಿತ್ರರಂಗದಲ್ಲಿ ಜನಪ್ರಿಯ ಖಳನಟರಾಗಿದ್ದಾರೆ.