Monday, 14th October 2024

ಲವ್​​ ಮಾಕ್​ಟೈಲ್ ಸಿನಿಮಾ ಜೋಡಿಗೆ ಕೋವಿಡ್ ಸೋಂಕು ದೃಢ

ಬೆಂಗಳೂರು: ಲವ್​​ ಮಾಕ್​ಟೈಲ್ ಸಿನಿಮಾದ ಜೋಡಿ​ ಡಾರ್ಲಿಂಗ್ ಕೃಷ್ಣ ಮತ್ತು ಮಿಲನಾ ನಾಗರಾಜ್‌’ಗೆ ಕೋವಿಡ್ ಸೋಂಕು ದೃಢಪಟ್ಟಿದೆ.

ಚಂದನವನದ ನವ ದಂಪತಿ ಡಾರ್ಲಿಂಗ್ ಕೃಷ್ಣಾ ಹಾಗೂ ಅವರ ಪತ್ನಿ ಮಿಲನಾ ನಾಗರಾಜ್‌ ಅವರಿಗೂ ಮಹಾಮಾರಿ ಕೋವಿಡ್ ಪಾಸಿಟಿವ್ ಸೋಂಕು ಪತ್ತೆಯಾಗಿದೆ. ಈ ಕುರಿತು ಡಾರ್ಲಿಂಗ್ ಕೃಷ್ಣಾ ಅವರೇ ತಮ್ಮ ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಖಚಿತಪಡಿಸಿ ದ್ದಾರೆ.

ಕೋವಿಡ್ ಪರೀಕ್ಷೆಯ ವರದಿ ಬಂದಿದ್ದು, ಇಬ್ಬರಿಗೂ ಪಾಸಿಟಿವ್ ಸೋಂಕು ತಗುಲಿರುವುದು ದೃಢಪಟ್ಟಿದೆ. ನಮ್ಮೊಂದಿಗೆ ಪ್ರಾಥಮಿಕ ಸಂಪರ್ಕದಲ್ಲಿದ್ದವರು ದಯವಿಟ್ಟು ಪರೀಕ್ಷೆಗೊಳಗಾಗುವಂತೆ ಮನವಿ ಮಾಡಿಕೊಳ್ಳುತ್ತೇವೆಂದು ತಿಳಿಸಿದ್ದಾರೆ.

ಇತ್ತೀಚಿಗೆ ಬಾಲಿವುಡ್ ನಟ ಅಕ್ಷಯ್ ಕುಮಾರ್, ಅಜಯ್ ದೇವಗನ್, ಹಿರಿಯ ನಟ ಗೋವಿಂದ್ ಹಾಗೂ ನಟಿ ಕತ್ರಿನಾ ಕೈಫ್ ಸೇರಿದಂತೆ ಸಾಕಷ್ಟು ತಾರೆಯರಿಗೆ ಕೋವಿಡ್ ಸೋಂಕು ದೃಢಪಟ್ಟಿದೆ.

ಕ್ಷಣ ಕ್ಷಣದ ಸುದ್ದಿಗಳಿಗಾಗಿ ವಿಶ್ವವಾಣಿ ಫೇಸ್‌ ಬುಕ್‌ ಪೇಜ್‌ ಲೈಕ್‌ ಮಾಡಿ

https://www.facebook.com/Vishwavanidaily