ಫೋಟೋ ಗ್ಯಾಲರಿ ಆಪರೇಷನ್​ ಸಿಂಧೂರ ಐಪಿಎಲ್​ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Maadeva Movie: ನಟ ವಿನೋದ್ ಪ್ರಭಾಕರ್ ಅಭಿನಯದ ಬಹು ನಿರೀಕ್ಷಿತ ʼಮಾದೇವʼ ಚಿತ್ರ ಜೂನ್ 6ಕ್ಕೆ ರಿಲೀಸ್‌

Maadeva Movie: ನವೀನ್ ರೆಡ್ಡಿ ಬಿ. ನಿರ್ದೇಶನದ ಹಾಗೂ ಟೈಗರ್ ವಿನೋದ್ ಪ್ರಭಾಕರ್ ನಾಯಕರಾಗಿ ನಟಿಸಿರುವ ʼಮಾದೇವʼ ಚಿತ್ರ ಜೂನ್ 6 ರಂದು ರಾಜ್ಯಾದ್ಯಂತ ಅದ್ಧೂರಿಯಾಗಿ ಬಿಡುಗಡೆಯಾಗಲಿದೆ. ʼಮಾದೇವʼ ಚಿತ್ರ 1980ರ ಕಾಲಘಟ್ಟದಲ್ಲಿ ನಡೆಯುವ ಕಥಾಹಂದರ ಹೊಂದಿರುವ ಚಿತ್ರ. ಸೋನಾಲ್ ಮೊಂತೆರೊ ನಾಯಕಿಯಾಗಿ ಅಭಿನಯಿಸಿದ್ದಾರೆ. ವಿಶೇಷ ಪಾತ್ರದಲ್ಲಿ ಶ್ರೀನಗರ ಕಿಟ್ಟಿ ನಟಿಸಿದ್ದಾರೆ. ಈ ಕುರಿತ ವಿವರ ಇಲ್ಲಿದೆ.

ಟೈಗರ್ ವಿನೋದ್ ಪ್ರಭಾಕರ್ ಅಭಿನಯದ ʼಮಾದೇವʼ ಚಿತ್ರ ಜೂ.6ಕ್ಕೆ ರಿಲೀಸ್‌

Profile Siddalinga Swamy May 28, 2025 12:01 AM

ಬೆಂಗಳೂರು: ರಾಧಾಕೃಷ್ಣ ಪಿಕ್ಚರ್ಸ್ ಲಾಂಛನದಲ್ಲಿ ಆರ್. ಕೇಶವ (ದೇವಸಂದ್ರ) ನಿರ್ಮಿಸಿರುವ, ನವೀನ್ ರೆಡ್ಡಿ ಬಿ. ನಿರ್ದೇಶನದ ಹಾಗೂ ಟೈಗರ್ ವಿನೋದ್ ಪ್ರಭಾಕರ್ ನಾಯಕರಾಗಿ ನಟಿಸಿರುವ ʼಮಾದೇವʼ ಚಿತ್ರ (Maadeva Movie) ಜೂನ್ 6 ರಂದು ರಾಜ್ಯಾದ್ಯಂತ ಅದ್ಧೂರಿಯಾಗಿ ಬಿಡುಗಡೆಯಾಗಲಿದೆ. ಈ ಕುರಿತು ಪತ್ರಿಕಾಗೋಷ್ಠಿಯಲ್ಲಿ ಚಿತ್ರತಂಡ ಮಾಹಿತಿ ನೀಡಿದೆ.

ʼಮಾದೇವʼ ಚಿತ್ರ 1980ರ ಕಾಲಘಟ್ಟದಲ್ಲಿ ನಡೆಯುವ ಕಥಾಹಂದರ ಹೊಂದಿರುವ ಚಿತ್ರ. ವಿನೋದ್ ಪ್ರಭಾಕರ್ ಅವರು ಈ ಚಿತ್ರದಲ್ಲಿ ʼಹ್ಯಾಂಗ್ ಮ್ಯಾನ್ʼ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಹಾಗಾಗಿ ಆ ಕಾಲಘಟ್ಟಕ್ಕೆ ಸರಿ ಹೊಂದುವ ಸ್ಥಳಗಳಲ್ಲೇ ಈ ಚಿತ್ರದ ಚಿತ್ರೀಕರಣವಾಗಿದೆ. ಸೋನಾಲ್ ಮೊಂತೆರೊ ನಾಯಕಿಯಾಗಿ ಅಭಿನಯಿಸಿದ್ದಾರೆ. ವಿಶೇಷ ಪಾತ್ರದಲ್ಲಿ ಶ್ರೀನಗರ ಕಿಟ್ಟಿ ನಟಿಸಿದ್ದಾರೆ. ಮಾಲಾಶ್ರೀ, ಶೃತಿ, ಅಚ್ಯುತ ಕುಮಾರ್, ಕಾಕ್ರೋಜ್ ಸುಧೀ, ಮೈಕೋ ನಾಗರಾಜ್, ಬಲ ರಾಜ್ವಾಡಿ ಮುಂತಾದವರು ತಾರಾಬಳಗದಲ್ಲಿದ್ದಾರೆ ಎಂದು ನಿರ್ದೇಶಕ ನವೀನ್ ರೆಡ್ಡಿ ತಿಳಿಸಿದರು.

ಡಿಫರೆಂಟ್ ಡ್ಯಾನಿ, ರಿಯಲ್ ಸತೀಶ್,‌ ವಿಕ್ರಮ್ ಮೋರ್ ಅವರ ಸಾಹಸ ನಿರ್ದೇಶನ,‌ ಬಾಲಕೃಷ್ಣ ತೋಟ ಛಾಯಾಗ್ರಹಣ, ವಿಜಯ್ ಎಂ. ಕುಮಾರ್ ಸಂಕಲನ ಹಾಗು ಗುಣ ಅವರ ಕಲಾ ನಿರ್ದೇಶನವಿರುವ ಈ ಚಿತ್ರ ಜೂನ್ 6 ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ ನಮ್ಮ ಚಿತ್ರಕ್ಕೆ ನಿಮ್ಮೆಲ್ಲರ ಪ್ರೋತ್ಸಾಹವಿರಲಿ ಎಂದರು ನಿರ್ದೇಶಕ ನವೀನ್ ರೆಡ್ಡಿ.

ಕೋವಿಡ್ ಸಮಯದಲ್ಲಿ ನನಗೆ ನಿರ್ದೇಶಕರು ಈ ಕಥೆ ಹೇಳಿದರು. ಕಥೆ ಬಹಳ ಇಷ್ಟವಾಯಿತು. ನಿರ್ದೇಶಕರು ಹೇಳಿದ ಹಾಗೆ 80 ರ ಕಾಲಘಟ್ಟದ ಕಥೆ. ʼಹ್ಯಾಂಗ್ ಮ್ಯಾನ್ʼ ಪಾತ್ರದಲ್ಲಿ ನಾನು ಅಭಿನಯಿಸಿದ್ದೇನೆ. ನನಗೆ ತಿಳಿದಿರುವ ಹಾಗೆ ಕನ್ನಡದಲ್ಲಿ ಹ್ಯಾಂಗ್ ಮ್ಯಾನ್ ಕುರಿತಾದ ಕಥೆ ಬಂದಿಲ್ಲ. ನಾನು ಈ ಚಿತ್ರದಲ್ಲಿ ಅಭಿನಯಿಸುವಾಗ ಕೆಲವು ಸನ್ನಿವೇಶಗಳು ನಮ್ಮ ತಂದೆ ಪ್ರಭಾಕರ್ ಅವರ ಅಭಿನಯದ ʼಜಿದ್ದುʼ ಹಾಗೂ ʼಕರುಳಿನ ಕೂಗುʼ ಚಿತ್ರಗಳು ನೆನಪಾದವು. ನಿರ್ಮಾಪಕ ಕೇಶವ್ ಅವರು ಯಾವುದೇ ಕೊರತೆ ಬಾರದ ಹಾಗೆ ಚಿತ್ರ ನಿರ್ಮಾಣ ಮಾಡಿದ್ದಾರೆ. ರಾಬರ್ಟ್ ಚಿತ್ರದ ನಂತರ ನಾನು ಹಾಗೂ ಸೋನಾಲ್ ಅವರು ಈ ಚಿತ್ರದಲ್ಲಿ ನಟಿಸಿದ್ದೇವೆ. ಇಡೀ ತಂಡದ ಸಹಕಾರದಿಂದ ‌ಒಂದೊಳ್ಳೆ ಚಿತ್ರ ಮೂಡಿಬಂದಿದೆ. ನಿಮ್ಮೆಲ್ಲರ ಪ್ರೋತ್ಸಾಹ ಸದಾ ಇರಲಿ ಎಂದರು ನಾಯಕ ವಿನೋದ್ ಪ್ರಭಾಕರ್.

ಈ ಚಿತ್ರದಲ್ಲಿ ನನ್ನ ಪಾತ್ರದ ಹೆಸರು ಪಾರ್ವತಿ. ಹಳ್ಳಿ ಹುಡುಗಿಯಾಗಿ ಕಾಣಿಸಿಕೊಂಡಿದ್ದೇನೆ. ವಿನೋದ್ ಪ್ರಭಾಕರ್ ಅವರು ಹೇಳಿದ ಹಾಗೆ ʼರಾಬರ್ಟ್ʼ ಚಿತ್ರದ ನಂತರ ನಾನು ಹಾಗೂ ಅವರು ಈ ಚಿತ್ರದಲ್ಲಿ ಅಭಿನಯಿಸಿದ್ದೇವೆ ಎಂದು ನಾಯಕಿ ಸೋನಾಲ್ ಮೊಂತೆರೊ ತಿಳಿಸಿದರು.

ಈ ಸುದ್ದಿಯನ್ನೂ ಓದಿ | Summer Season End Sale: ಸೀಸನ್‌ಗೂ ಮುನ್ನವೇ ಆರಂಭವಾಯ್ತು ಸಮ್ಮರ್‌ ಎಂಡ್‌ ಸೇಲ್‌

ನಮ್ಮ ಮೊದಲ ಚಿತ್ರಕ್ಕೆ ನಿಮ್ಮೆಲ್ಲರ ಪ್ರೋತ್ಸಾಹವಿರಲಿ ಎಂದರು ನಿರ್ಮಾಪಕ ಕೇಶವ್ ಆರ್ (ದೇವಸಂದ್ರ). ನಟ ಕಾಕ್ರೋಜ್ ಸುಧೀ ಸಹ ತಮ್ಮ ಪಾತ್ರದ ಬಗ್ಗೆ ಹೇಳಿಕೊಂಡರು. ಸಂಗೀತ ನಿರ್ದೇಶಕ ಪ್ರದ್ಯೋತನ್ ಸಂಗೀತದ ಬಗ್ಗೆ ಮಾಹಿತಿ ನೀಡಿದರು. ಚಿತ್ರತಂಡದ ಅನೇಕ ಸದಸ್ಯರು ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.