Sunday, 8th September 2024

ಮರಾಠಿ ನಟಿ ಆಶಾಲತಾ ವಾಬ್​ಗಾಂವ್ಕರ್ ಕರೊನಾಗೆ ಬಲಿ

ನವದೆಹಲಿ: ಕರೊನಾ ವೈರಸ್​ಗೆ ತುತ್ತಾಗಿ, ಚಿಕಿತ್ಸೆ ಪಡೆಯುತ್ತಿದ್ದ ಮರಾಠಿ ನಟಿ ಆಶಾಲತಾ ವಾಬ್​ಗಾಂವ್ಕರ್(79) ಮಂಗಳವಾರ ಮೃತಪಟ್ಟಿದ್ದಾರೆ.

ಕೆಲ ದಿನಗಳ ಹಿಂದೆ ಕರೊನಾ ಸೋಂಕು ಕಾಣಿಸಿಕೊಂಡಿದ್ದರಿಂದ ಅವರನ್ನು ಮಹಾರಾಷ್ಟ್ರದ ಸತಾರಾದಲ್ಲಿನ ಖಾಸಗಿ ಆಸ್ಪತ್ರೆಗೆ ಸೇರಿಸಲಾಗಿತ್ತು. ಇವರಿಗೆ ಒಬ್ಬ ಪುತ್ರ ಇದ್ದಾರೆ. ಗೋವಾದಲ್ಲಿ ಹುಟ್ಟಿದ್ದ ಆಶಾಲತಾ ಅವರು ನಂತರ ಮರಾಠಿ ಕಿರುತೆರೆ ಮತ್ತು ಹಿರಿತೆರೆಗಳಲ್ಲಿ ಸಾಕಷ್ಟು ಹೆಸರು ಮಾಡಿದ್ದಾರೆ.

ಆಶಾಲತಾ ಅವರು ಸತಾರದಲ್ಲಿ ಆಯ್ ಮಜಿ ಕಲುಬಾಯಿ ಎಂಬ ಪೌರಾಣಿಕ ಶೋವೊಂದರ ಶೂಟಿಂಗ್ ನಲ್ಲಿ ತೊಡಗಿದ್ದರು. ಆ ಟಿವಿ ಸೀರಿಯಲ್ ತಂಡದಲ್ಲಿ ಕೆಲವರಿಗೆ ಸೋಂಕು ತಗುಲಿತ್ತು.

ಈ ಚಿತ್ರೀಕರಣದಲ್ಲಿ ಭಾಗವಹಿಸಿದ್ದ 20 ಮಂದಿಗೆ ಸೋಂಕು ತಗುಲಿತ್ತು. ಎಲ್ಲರನ್ನೂ ಸಹ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಆಶಾಲತಾ ಅವರ ಆರೋಗ್ಯ ಸ್ಥಿತಿ ತುಂಬಾ ಗಂಭೀರವಾಗಿತ್ತು. ಹೀಗಾಗಿ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.

Leave a Reply

Your email address will not be published. Required fields are marked *

error: Content is protected !!