Marutha Movie: ಎಸ್. ನಾರಾಯಣ್ ನಿರ್ದೇಶನದ ʼಮಾರುತʼ ಚಿತ್ರಕ್ಕೆ U/A ಪ್ರಮಾಣಪತ್ರ: ಅ.31ಕ್ಕೆ ಸಿನಿಮಾ ಬಿಡುಗಡೆ
Marutha Movie: ಖ್ಯಾತ ನಿರ್ದೇಶಕ ಡಾ.ಎಸ್. ನಾರಾಯಣ್ ನಿರ್ದೇಶನದ, ದುನಿಯಾ ವಿಜಯ್ ಹಾಗೂ ಶ್ರೇಯಸ್ ಮಂಜು ಪ್ರಮುಖ ಪಾತ್ರದಲ್ಲಿ ನಟಿಸಿರುವ ʼಮಾರುತʼ ಚಿತ್ರವನ್ನು ವೀಕ್ಷಿಸಿದ ಪ್ರಾದೇಶಿಕ ಸೆನ್ಸಾರ್ ಮಂಡಳಿ ಯಾವುದೇ ಕಟ್ ನೀಡದೆ U/A ಪ್ರಮಾಣಪತ್ರ ನೀಡಿದೆ. ಈ ಚಿತ್ರ ಅಕ್ಟೋಬರ್ 31ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ.

-

ಬೆಂಗಳೂರು: ಖ್ಯಾತ ನಿರ್ದೇಶಕ ಡಾ.ಎಸ್. ನಾರಾಯಣ್ ನಿರ್ದೇಶನದ, ದುನಿಯಾ ವಿಜಯ್ ಹಾಗೂ ಶ್ರೇಯಸ್ ಮಂಜು ಪ್ರಮುಖ ಪಾತ್ರದಲ್ಲಿ ನಟಿಸಿರುವ ಮತ್ತು ಕೆ.ಮಂಜು - ರಮೇಶ್ ಯಾದವ್ ಈಶಾ ಪ್ರೊಡಕ್ಷನ್ಸ್ ಲಾಂಛನದಲ್ಲಿ ನಿರ್ಮಿಸಿರುವ ʼಮಾರುತʼ ಚಿತ್ರವನ್ನು (Marutha Movie) ವೀಕ್ಷಿಸಿದ ಪ್ರಾದೇಶಿಕ ಸೆನ್ಸಾರ್ ಮಂಡಳಿ ಯಾವುದೇ ಕಟ್ ನೀಡದೆ U/A ಪ್ರಮಾಣಪತ್ರ ನೀಡಿದೆ. ʼಮಾರುತʼ ಚಿತ್ರದಲ್ಲಿ ಸಮಾಜಕ್ಕೆ ಉಪಯೋಗುವ ಸಾಕಷ್ಟು ಸಾಮಾಜಿಕ ಕಳಕಳಿಯುಳ್ಳ ವಿಷಯಗಳಿದೆ ಎಂದು ಸೆನ್ಸಾರ್ ಮಂಡಳಿ ʼಮಾರುತʼ ಚಿತ್ರವನ್ನು ಶ್ಲಾಘಿಸಿದೆ ಎಂದು ಚಿತ್ರತಂಡ ತಿಳಿಸಿದೆ. ಬಹು ನಿರೀಕ್ಷಿತ ಈ ಚಿತ್ರ ಅಕ್ಟೋಬರ್ 31ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ.
ಕನ್ನಡದಲ್ಲಿ ಸೂಪರ್ ಹಿಟ್ ಚಿತ್ರಗಳನ್ನು ನಿರ್ದೇಶಿಸಿರುವ ಎಸ್. ನಾರಾಯಣ್ ಹಾಗೂ ತಮ್ಮ ಅಮೋಘ ಅಭಿನಯದ ಮೂಲಕ ಜನಪ್ರಿಯರಾಗಿರುವ ದುನಿಯಾ ವಿಜಯ್ ಮತ್ತು ಉತ್ಸಾಹಿ ಯುವ ನಟ ಶ್ರೇಯಸ್ ಕೆ. ಮಂಜು ಅವರ ಕಾಂಬಿನೇಶನ್‌ನಲ್ಲಿ ಮೂಡಿಬಂದಿರುವ ಈ ಚಿತ್ರ ಆರಂಭದಿಂದಲೂ ಸಾಕಷ್ಟು ಸದ್ದು ಮಾಡಿದೆ. ಜಂಕಾರ್ ಮ್ಯೂಸಿಕ್ ಮೂಲಕ ಬಿಡುಗಡೆಯಾಗಿರುವ ಈ ಚಿತ್ರದ ಹಾಡುಗಳು ಹಾಗೂ ಟೀಸರ್ ಈಗಾಗಲೇ ಜನರ ಮನ ತಲುಪಿದೆ. ಚಿತ್ರ ನೋಡುವ ಕಾತುರವನ್ನು ಹೆಚ್ಚಿಸಿದೆ.
ಅಪಾರ ವೆಚ್ಚದಲ್ಲಿ ಅದ್ದೂರಿಯಾಗಿ ಮೂಡಿಬಂದಿರುವ ʼಮಾರುತʼ ಚಿತ್ರಕ್ಕೆ ಎಸ್. ನಾರಾಯಣ್ ಅವರ ರಚನೆ ಹಾಗೂ ನಿರ್ದೇಶನವಿದ್ದು, ಪಿ.ಕೆ.ಎಚ್. ದಾಸ್ ಛಾಯಾಗ್ರಹಣ, ಶಿವಪ್ರಸಾದ್ ಯಾದವ್ ಸಂಕಲನ, ವಿನೋದ್ ಹಾಗೂ ಅರ್ಜುನ್ ಸಾಹಸ ನಿರ್ದೇಶನ ಮತ್ತು ಮೋಹನ್ ಕುಮಾರ್, ಸಂತು ಅವರ ನೃತ್ಯ ನಿರ್ದೇಶನವಿದೆ. ಎಸ್. ನಾರಾಯಣ್ ಹಾಗೂ ಜೆಸ್ಸಿಗಿಫ್ಟ್ ಸಂಗೀತ ಸಂಯೋಜಿಸಿದ್ದಾರೆ.
ಈ ಸುದ್ದಿಯನ್ನೂ ಓದಿ | Fashion Trend 2025: ಫಂಕಿ ಲುಕ್ ನೀಡುವ ವ್ರಾಪ್ ಹೆಡ್ ಬ್ಯಾಂಡ್ಸ್
ದುನಿಯಾ ವಿಜಯ್, ಶ್ರೇಯಸ್ ಕೆ ಮಂಜು, ಬೃಂದಾ (ನಾಯಕಿ), ಸಾಧುಕೋಕಿಲ, ನಿಶ್ವಿಕಾ ನಾಯ್ಡು, ರಂಗಾಯಣ ರಘು, ತಾರಾ ಅನುರಾಧ, ಶರತ್ ಲೋಹಿತಾಶ್ವ, ಪ್ರಮೋದ್ ಶೆಟ್ಟಿ, ಮಂಜು ಪಾವಗಡ , ಚಿತ್ರಾ ಶೆಣೈ, ಸುಜಯ್ ಶಾಸ್ತ್ರಿ ಮುಂತಾದವರ ತಾರಾಬಳಗವಿರುವ ಈ ಚಿತ್ರದ ವಿಶೇಷ ಪಾತ್ರದಲ್ಲಿ ಕ್ರೇಜಿಸ್ಟಾರ್ ರವಿಚಂದ್ರನ್ ಅವರು ನಟಿಸಿದ್ದಾರೆ.