Friday, 13th December 2024

ಮೆಗಾ ಸ್ಟಾರ್ ಚಿರಂಜೀವಿಗೂ ಕೊರೋನಾ ಪಾಸಿಟಿವ್

ಹೈದರಾಬಾದ್ : ತೆಲುಗಿನ ಮೆಗಾ ಸ್ಟಾರ್ ಚಿರಂಜೀವಿಯವರಿಗೂ ಕೊರೋನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟಿದೆ.

ಈ ಕುರಿತಂತೆ ಮಾಹಿತಿ ಹಂಚಿಕೊಂಡಿರುವ ಮೆಗಾಸ್ಟಾರ್ ಚಿರಂಜೀವಿ, ತಮಗೊ ಕೊರೋನಾ ಪಾಸಿಟಿವ್ ಎಂಬುದಾಗಿ ಕೊರೋನಾ ಪರೀಕ್ಷೆಯಿಂದ ತಿಳಿದು ಬಂದಿದೆ.

ಈ ಹಿನ್ನಲೆಯಲ್ಲಿ ಮನೆಯಲ್ಲಿಯೇ ಹೋಂ ಐಸೋಲೇಷನ್ ಆಗಿದ್ದು, ಚಿಕಿತ್ಸೆ ಪಡೆಯುತ್ತಿರುವುದಾಗಿ ತಿಳಿಸಿದ್ದಾರೆ. ಅಲ್ಲದೇ ತಮ್ಮ ಸಂಪರ್ಕದಲ್ಲಿದ್ದಂತ ವ್ಯಕ್ತಿಗಳು ಕೊರೋನಾ ಸೋಂಕಿನ ಲಕ್ಷಣಗಳನ್ನು ಹೊಂದಿದ್ದರೇ ಪರೀಕ್ಷೆಗೆ ಒಳಪಡುವಂತೆ ಮನವಿ ಮಾಡಿದ್ದಾರೆ.