Saturday, 14th December 2024

ಹಿರಿಯ ನಟ, ಬಿಜೆಪಿ ನಾಯಕ ಮಿಥುನ್​ ಚಕ್ರವರ್ತಿಗೆ ಎದೆನೋವು

ಮುಂಬೈ: ಬಾಲಿವುಡ್​ನ ಹಿರಿಯ ನಟ ಹಾಗೂ ಬಿಜೆಪಿ ನಾಯಕ ಮಿಥುನ್​ ಚಕ್ರವರ್ತಿಗೆ ಎದೆನೋವು ಕಾಣಿಸಿಕೊಂಡಿದೆ.

ಹೀಗಾಗಿ, ಕೋಲ್ಕತ್ತದ ಖಾಸಗಿ ಆಸ್ಪತ್ರೆಗೆ ಅವರನ್ನು ದಾಖಲು ಮಾಡಲಾಗಿದೆ. ಶನಿವಾರ ಎದೆಯಲ್ಲಿ ನೋವು ಕಾಣಿಸಿಕೊಂಡಿತು. ಅವರು ಸದ್ಯ ಆಸ್ಪತ್ರೆ ಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರು ಬೇಗ ಚೇತರಿಸಿಕೊಳ್ಳಲಿ ಎಂದು ಫ್ಯಾನ್ಸ್ ಬಯಸುತ್ತಿದ್ದಾರೆ.

ಮಿಥುನ್ ಚಕ್ರವರ್ತಿ ಆರೋಗ್ಯದ ಬಗ್ಗೆ ಸೋಶೀಯಲ್ ಮೀಡಿಯಾದಲ್ಲಿ ಸುದ್ದಿ ಹರಿದಾಡುತ್ತಿದೆ. ಆದರೆ, ಈ ಬಗ್ಗೆ ಕುಟುಂಬದವರ ಕಡೆಯಿಂದ ಯಾವುದೇ ಅಧಿಕೃತ ಮಾಹಿತಿ ಹೊರಬಿದ್ದಿಲ್ಲ.

ಮಿಥುನ್ ಅವರು 1976ರಲ್ಲೇ ಚಿತ್ರರಂಗಕ್ಕೆ ಕಾಲಿಟ್ಟರು. ಮೊದಲ ಚಿತ್ರದಲ್ಲೇ ನಟನೆಗೆ ರಾಷ್ಟ್ರಪ್ರಶಸ್ತಿ ಪಡೆದರು. ಹೀರೋ ಆಗಿ ಅವರು ಹಲವು ಚಿತ್ರಗ ಳಲ್ಲಿ ನಟಿಸಿದ್ದಾರೆ. ನೂರಾರು ಸಿನಿಮಾಗಳಲ್ಲಿ ಅವರು ಬಣ್ಣ ಹಚ್ಚಿದ್ದಾರೆ. ಸಿನಿಮಾ ಆಯ್ಕೆಯಲ್ಲೂ ಅವರು ಚ್ಯೂಸಿ ಆಗಿದ್ದಾರೆ. ಡ್ಯಾನ್ಸ್ ರಿಯಾಲಿಟಿ ಶೋಗಳಲ್ಲಿ ಅವರು ಜಡ್ಜ್​ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.

ಜನವರಿ ತಿಂಗಳಲ್ಲಿ ಕೇಂದ್ರ ಸರ್ಕಾರದ ಕಡೆಯಿಂದ ಮಿಥುನ್ ಅವರಿಗೆ ಪದ್ಮ ಭೂಷಣ ಪ್ರಶಸ್ತಿ ಘೋಷಣೆ ಮಾಡಲಾಯಿತು. ಭಾರತ ಸರ್ಕಾರ ನೀಡುವ ಮೂರನೇ ಅತ್ಯುತ್ತನತ ಪ್ರಶಸ್ತಿ ಇದು.