ಬಿಗ್ ಬಾಸ್ ಕನ್ನಡ ಸಿಸನ್ 11 (Bigg Boss Kannada 11) ಇನ್ನು ಕೆಲವೇ ವಾರಗಳಲ್ಲಿ ಪೂರ್ಣಗೊಳ್ಳಲಿದೆ. ಸ್ಪರ್ಧಿಗಳ ಮಧ್ಯೆ ಕಾಂಪಿಟೇಷನ್ ಜೋರಾಗಿದೆ. ಸುಮಾರು 94 ದಿನಗಳ ಕಾಲ ಕುಟುಂಬವನ್ನು ಬಿಟ್ಟು ಬಿಗ್ ಬಾಸ್ ಮನೆಯಲ್ಲಿರುವ ಸ್ಪರ್ಧಿಗಳಿಗೆ ಕುಟುಂಬದವರನ್ನು ಭೇಟಿ ಮಾಡುವ ಅವಕಾಶ ಒದಗಿಸಲಾಗಿದೆ. ಈ ವಾರ ಫ್ಯಾಮಿಲಿ ವೀಕ್. ಸ್ಪರ್ಧಿಗಳ ಅಮ್ಮಂದಿರು, ಅಪ್ಪಂದಿರು ಮಡದಿ, ಮಕ್ಕಳು ಬಿಗ್ ಬಾಸ್ಗೆ ಬಂದಿದ್ದಾರೆ.
ಬಿಗ್ ಬಾಸ್ ಮನೆಯಲ್ಲಿರುವ 9 ಸ್ಪರ್ಧಿಗಳ ಕುಟುಂಬದವರು ಆಗಮಿಸುತ್ತಿದ್ದಾರೆ. ಮಂಗಳವಾರ ಭವ್ಯಾ ಗೌಡ ಅವರ ಫ್ಯಾಮಿಲಿ, ರಜತ್ ಕಿಶನ್ ಅವರ ಮಡದಿ ಹಾಗು ಮಕ್ಕಳು ಬಂದಿದ್ದರು. ಜೊತೆಗೆ ತ್ರಿವಿಕ್ರಮ್ ಅವರ ತಾಯಿ ಬಿಗ್ ಬಾಸ್ ಮನೆಯೊಳಗೆ ಕಾಲಿಟ್ಟಿದ್ದಾರೆ. ಆದರೆ, ಇದರಲ್ಲೂ ಬಿಗ್ ಬಾಸ್ ಒಂದು ಟ್ವಿಸ್ಟ್ ಇಟ್ಟಿದ್ದಾರೆ. ಕೆಲ ಸ್ಪರ್ಧಿಗಳಿಗೆ ಹೊಸ ಟಾಸ್ಕ್ ನೀಡಲಾಗಿದೆ. ಟಾಸ್ಕ್ ಗೆದ್ದವರಿಗೆ ಮಾತ್ರ ತಮ್ಮ ಮನೆಯವರನ್ನು ಭೇಟಿ ಮಾಡುವ ಅವಕಾಶ ಎಂದು ಬಿಗ್ ಬಾಸ್ ಹೇಳುತ್ತಾರೆ.
ಇಂದು ದೊಡ್ಮನೆಯೊಳಗೆ ಮೋಕ್ಷಿತಾ ಪೈ ಕುಟುಂಬ ಬಂದಿದೆ. ಅಪ್ಪ-ಅಮ್ಮ ಹಾಗೂ ವಿಶೇಷಚೇತನ ತಮ್ಮ ಬಿಗ್ ಬಾಸ್ ಮನೆಗೆ ಕಾಲಿಟ್ಟಿದ್ದಾರೆ. ಈ ಕುಟುಂಬವನ್ನು ಇಡೀ ಬಿಗ್ ಬಾಸ್ ಮನೆಯ ಸದಸ್ಯರು ಕಣ್ಣೀರಿಟ್ಟಿದ್ದಾರೆ. ಮೋಕ್ಷಿತಾ ಅವರ ತಮ್ಮ ವಿಶೇಷ ಚೇತನ. ಮೋಕ್ಷಿತಾ ಅವರು ತಮ್ಮನ ಅಷ್ಟು ದಿನ ಬಿಟ್ಟಿದ್ದೇ ಇಲ್ಲ. ಆದರೆ, ಬಿಗ್ ಬಾಸ್‌ಗಾಗಿ ಅವರು ಕುಟುಂಬವನ್ನು ಮೂರು ತಿಂಗಳು ಬಿಟ್ಟಿದ್ದರು. ಈ ಕಾರಣಕ್ಕೆ ಮೋಕ್ಷಿತಾ ಅವರನ್ನು ತಮ್ಮ ಮರೆತೇಬಿಟ್ಟಿದ್ದಾರೆ. ಈ ದೃಶ್ಯವನ್ನು ಕಂಡು ಗೌತಮಿ ಕೂಡ ಬೇಸರ ವ್ಯಕ್ತಪಡಿಸಿದ್ದಾರೆ.
ಇಷ್ಟು ದಿನ ಬಿಟ್ಟು ಇದ್ದಿದ್ದೆ. ತುಂಬಾ ಮಿಸ್ ಮಾಡಿಕೊಳ್ಳುತ್ತಿದ್ದೆ. ಪುಟಾಣಿ ಎಂದು ಕರೆದರೂ ವೀಲ್ ಚೇರ್ ಮೇಲಿದ್ದ ಸಹೋದರ, ಮೋಕ್ಷಿತಾರನ್ನು ಯಾರೆಂದು ಗುರುತಿಸಲಿಲ್ಲ. ನನ್ನನ್ನು ಮರೆತು ಹೋಗಿದ್ದಾನೆ. ಇಷ್ಟು ದಿನ ಮನೆಯಲ್ಲಿ ಇರದಿದ್ದಕ್ಕೆ ನನ್ನನ್ನು ಮರೆತು ಹೋಗಿ ಬಿಟ್ಟಿದ್ದಾನೆ ಎಂದು ಮೋಕ್ಷಿತಾ ಹೇಳಿದ್ದಾರೆ. ತಮ್ಮನನ್ನು ತಬ್ಬಿಕೊಂಡು ಮೋಕ್ಷಿ ಕಣ್ಣೀರು ಹಾಕಿದ್ದಾರೆ.
BBK 11: ಸದ್ಯಕ್ಕಿಲ್ಲ ಬಿಗ್ ಬಾಸ್ ಫಿನಾಲೆ: ವೀಕ್ಷಕರಿಗೆ ಸಿಕ್ಕತು ಭರ್ಜರಿ ಗುಡ್ ನ್ಯೂಸ್