Thursday, 12th September 2024

ನಾಗ ಚೈತನ್ಯ -ನಟಿ ಸೋಭಿತಾ ಧೂಳಿಪಾಲ ನಿಶ್ಚಿತಾರ್ಥ

ಹೈದರಾಬಾದ್: ಮಂತಾ ರುತ್‌ಪ್ರಭು ಮಾಜಿ ಪತಿ ನಾಗ ಚೈತನ್ಯ ಮತ್ತು ನಟಿ ಸೋಭಿತಾ ಧೂಳಿಪಾಲ ಅವರು ಗುರುವಾರ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.

ಹೈದರಾಬಾದ್‌ನ ಖಾಸಗಿ ಹೋಟೆಲ್‌ನಲ್ಲಿ ನಿಶ್ಚಿತಾರ್ಥ ಸಮಾರಂಭ ನಡೆದಿದೆ ಎಂದು ಹೇಳಲಾಗಿದೆ. ಸಮಂತಾ ಜೊತೆ ವಿಚ್ಛೇದನ ಪಡೆದ ಬಳಿಕ ನಾಗ ಚೈತನ್ಯ ಸೋಭಿತಾ ಧೂಳಿಪಾಲ ಅವರ ಜೊತೆ ಪ್ರೇಮದಲ್ಲಿದ್ದರು ಎಂದು ವರದಿಗಳಾಗಿದ್ದವು.

ನಿಶ್ಚಿತಾರ್ಥ ಮುಗಿದ ಬಳಿಕ ಮಾಧ್ಯಮಗಳ ಜೊತೆ ನಾಗಾರ್ಜುನ ಮಾತನಾಡಲಿದ್ದು, ನಿಶ್ಚಿತಾರ್ಥದ ಫೋಟೊಗಳನ್ನು ಹಂಚಿಕೊಳ್ಳಲಿದ್ದಾರೆ ಎನ್ನಲಾಗಿದೆ. ನಾಗಚೈತನ್ಯ ಮತ್ತು ಸೋಭಿತಾ ಧೂಳಿಪಾಲ ಈ ಬಗ್ಗೆ ಇನ್ನೂ ಅಧಿಕೃತವಾಗಿ ಘೋಷಣೆ ಮಾಡಿಲ್ಲ. ಇದೇ ವರ್ಷ ಈ ಜೋಡಿ ಹಸೆಮಣೆ ಏರುವ ಸಾಧ್ಯತೆ ಇದೆ.

ನಾಗ ಚೈತನ್ಯ ಮತ್ತು ಸೋಭಿತಾ ಹಲವು ಬಾರಿ ಒಟ್ಟಿಗೆ ಕಾಣಿಸಿಕೊಂಡಿದ್ದರೂ, ಇಬ್ಬರ ಸಂಬಂಧವನ್ನು ಸಾರ್ವಜನಿಕವಾಗಿ ಒಪ್ಪಿಕೊಂಡಿಲ್ಲ.

ಇದೇ ವರ್ಷದ ಏಪ್ರಿಲ್ ತಿಂಗಳಿನಲ್ಲಿ ನಾಗಚೈತನ್ಯ ಮತ್ತು ಸೋಭಿತಾ ಅವರು ತೆಗೆದುಕೊಂಡ ಸಫಾರಿ ಪ್ರವಾಸದ ಚಿತ್ರಗಳನ್ನು ತಮ್ಮ ಪುಟಗಳಲ್ಲಿ ಹಂಚಿಕೊಂಡಿದ್ದಾರೆ. ಅಭಿಮಾನಿಗಳು ಅವರು ಪೋಸ್ಟ್ ಮಾಡಿದ ಫೋಟೋಗಳಲ್ಲಿ ಹೋಲಿಕೆ ಇರುವುದನ್ನು ಗಮನಿಸಿದ್ದರು, ಇಬ್ಬರೂ ಒಟ್ಟಿಗೆ ಇದ್ದಾರೆ ಎಂದು ಹೇಳಿದ್ದರು.

ನಾಗ ಚೈತನ್ಯ ಮತ್ತು ಸೋಭಿತಾ ಕಳೆದ ಎರಡು ವರ್ಷಗಳಿಂದ ಡೇಟಿಂಗ್ ಮಾಡುತ್ತಿದ್ದರು ಎನ್ನುವ ಸುದ್ದಿ ಇದೆ. ನಾಗ ಚೈತನ್ಯ ಸಮಂತಾ ಜೊತೆ ವಿಚ್ಛೇದನ ಘೋಷಣೆ ಮಾಡಿದ ಹಲವು ವರ್ಷಗಳ ಬಳಿಕ ಸೋಭಿತಾ ಅವರ ಜೊತೆ ಪ್ರೀತಿಯಲ್ಲಿ ಬಿದ್ದಿದ್ದರು ಎಂದು ಹೇಳಲಾಗಿದೆ.

ಐದು ವರ್ಷಗಳ ಕಾಲ ನಾಗ ಚೈತನ್ಯ ಮತ್ತು ಸಮಂತಾ ಅವರ ವೈವಾಹಿಕ ಜೀವನ 2021ರಲ್ಲಿ ಕೊನೆಯಾಗಿತ್ತು.

ನಾಗ ಚೈತನ್ಯ ಅವರ ‘ತಾಂಡೇಲ್’ ಸಿನಿಮಾ ಬಿಡುಗಡೆಗೆ ಸಿದ್ಧವಾಗುತ್ತಿದೆ. ಸಾಯಿ ಪಲ್ಲವಿ ಈ ಸಿನಿಮಾದಲ್ಲಿ ನಾಯಕಿಯಾಗಿ ಕಾಣಿಸಿಕೊಂಡಿದ್ದಾರೆ. ಸೋಭಿತಾ ಧೂಳಿಪಾಲ ದೇವ್ ಪಟೇಲ್ ಅವರ ‘ಮಂಕಿ ಮ್ಯಾನ್’ ಸಿನಿಮಾದಲ್ಲಿ ಕೊನೆಯದಾಗಿ ಕಾಣಿಸಿಕೊಂಡಿದ್ದರು.

Leave a Reply

Your email address will not be published. Required fields are marked *