ಬೆಂಗಳೂರು: ಕನ್ನಡ ಸಿನಿಮಾ ರಂಗದ ನಿರ್ದೇಶಕ ನಾಗತಿಹಳ್ಳಿ ಚಂದ್ರಶೇಖರ್ ಅವರು ಟ್ವೀಟ್ ಮಾಡಿ, ಮೈಸೂರು ಸ್ಯಾಂಡಲ್ ಸೋಪ್ ಬಳಸಲೂ ಹಿಂಜರಿಯುವಂತಾಗಿದೆ ಎಂದು ಹೇಳಿದ್ದಾರೆ.
ಮೈಸೂರು ಸ್ಯಾಂಡಲ್ ವುಡ್ ಗುಣಮಟ್ಟದ ಕುರಿತು ಅವರು ಅನುಮಾನ ವ್ಯಕ್ತಪಡಿಸಿದ್ದಾರೆ.
ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಹಾಗೂ ಪುತ್ನ ಮನೆಯಲ್ಲಿ ಕೋಟಿ ಕೋಟಿ ಹಣ ಸಿಕ್ಕ ಪ್ರಕರಣಕ್ಕೆ ಸಂಬಂಧಿಸಿದಂತೆ ಟ್ವೀಟ್ ಮಾಡಿ ಪ್ರತಿಕ್ರಿಯೆ ನೀಡಿದ್ದಾರೆ.
ಮಾಡಾಳರು ಮಾಡಿರುವ ಭ್ರಷ್ಟತೆ ಹಾಗೂ ಕಲಬೆರಕೆಯ ಕಾರಣ ಸರ್ಕಾರೀ ಸ್ವಾಮ್ಯದ ಉದ್ಯಮ ಮತ್ತು ಉತ್ಪನ್ನಗಳಲ್ಲಿ ನಂಬಿಕೆ ಮತ್ತು ಗೌರವ ಇರಿಸಿದ ನನ್ನಂಥವರು ಬಹುಕಾಲದಿಂದ ಬಳಸುತ್ತಿದ್ದ ಮೈಸೂರು ಸ್ಯಾಂಡಲ್ ಸೋಪ್ ಬಳಸಲೂ ಹಿಂಜರಿಯುವಂತಾಗಿದೆ ಎಂದು ಟ್ವೀಟ್ ಮಾಡಿದ್ದಾರೆ.