ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

B Saroja Devi Passes away: ಮಲ್ಲೇಶ್ವರಂ ರಸ್ತೆಗೆ ಬಿ ಸರೋಜಾದೇವಿ ಹೆಸರು: ಸಿಎಂ ಸಿದ್ದರಾಮಯ್ಯ

B Saroja Devi: ಅವರ ನಿವಾಸ ಇರುವ ಮಲ್ಲೇಶ್ವರಂ 11ನೇ ಕ್ರಾಸಿಗೆ ಬಿ ಸರೋಜಾ ದೇವಿ ಅವರ ಹೆಸರಿಡುವ ಬಗ್ಗೆ ಬಿಬಿಎಂಪಿಯೊಂದಿಗೆ ಚರ್ಚೆ ಮಾಡಿ ಬಳಿಕ ನಿರ್ಧರಿಸುತ್ತೇವೆ. ಸಕಲ ಪೊಲೀಸ್ ಗೌರವಗಳೊಂದಿಗೆ ಹಿರಿಯ ನಟಿ ಬಿ. ಸರೋಜಾದೇವಿ ಅಂತ್ಯಕ್ರಿಯೆ ನಡೆಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದರು.

ಮಲ್ಲೇಶ್ವರಂ ರಸ್ತೆಗೆ ಬಿ ಸರೋಜಾದೇವಿ ಹೆಸರು: ಸಿಎಂ ಸಿದ್ದರಾಮಯ್ಯ

ಹರೀಶ್‌ ಕೇರ ಹರೀಶ್‌ ಕೇರ Jul 15, 2025 11:38 AM

ಬೆಂಗಳೂರು: ನಿನ್ನೆ ಮೃತಪಟ್ಟ, ಅಭಿನಯ ಸರಸ್ವತಿ ಎಂದೇ ಖ್ಯಾತಿ ಪಡೆದಿದ್ದ ಬಹುಭಾಷಾ ಹಿರಿಯ ನಟಿ ಬಿ ಸರೋಜಾ ದೇವಿ (B Saroja Devi Passes away) ಅವರ ಪಾರ್ಥಿವ ಶರೀರದ ದರ್ಶನವನ್ನು ಇಂದು ಸಿಎಂ ಸಿದ್ದರಾಮಯ್ಯ (CM Siddaramaiah) ಮಾಡಿದರು. ಮಲ್ಲೇಶ್ವರಂನಲ್ಲಿ ಅವರ ನಿವಾಸವಿದ್ದ ರಸ್ತೆಗೆ ಸರೋಜಾದೇವಿಯವರ ಹೆಸರಿಡುವ ಬಗ್ಗೆ ಚರ್ಚೆ ಮಾಡಲಾಗುತ್ತದೆ ಎಂದು ಅವರು ಅಂತಿಮ ದರ್ಶನದ ಬಳಿಕ ಭರವಸೆ ನೀಡಿದರು.

ಅವರ ನಿವಾಸ ಇರುವ ಮಲ್ಲೇಶ್ವರಂ 11ನೇ ಕ್ರಾಸಿಗೆ ಬಿ ಸರೋಜಾ ದೇವಿ ಅವರ ಹೆಸರಿಡುವ ಬಗ್ಗೆ ಬಿಬಿಎಂಪಿಯೊಂದಿಗೆ ಚರ್ಚೆ ಮಾಡಿ ಬಳಿಕ ನಿರ್ಧರಿಸುತ್ತೇವೆ. ಸಕಲ ಪೊಲೀಸ್ ಗೌರವಗಳೊಂದಿಗೆ ಹಿರಿಯ ನಟಿ ಬಿ. ಸರೋಜಾದೇವಿ ಅಂತ್ಯಕ್ರಿಯೆ ನಡೆಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದರು.

ಸರೋಜಾ ದೇವಿಯವರ ಅಂತಿಮ ದರ್ಶನ ಪಡೆದ ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಧ್ಯಮಗಳೊಂದಿಗೆ ಮಾತನಾಡಿ, ಬಹಳ ಚಿಕ್ಕ ವಯಸ್ಸಿನಲ್ಲಿ ಸರೋಜಾ ದೇವಿಯವರು ಸಿನಿಮಾರಂಗ ಪ್ರವೇಶಿಸಿದ್ದರು. ಕನ್ನಡ ಚಲನಚಿತ್ರರಂಗ ಬೆಳೆಯಲು ಸರೋಜಾ ದೇವಿ ಅವರ ಕೊಡುಗೆ ಅಪಾರ. ಹಿರಿಯ ನಟಿ ಬಿ ಸರೋಜಾ ದೇವಿ ನಿಧನದಿಂದ ಅಪಾರ ನಷ್ಟವಾಗಿದೆ. ಅವರ ಕುಟುಂಬಕ್ಕೆ ದುಃಖ ಭರಿಸುವ ಶಕ್ತಿ ದೇವರು ನೀಡಲಿ. ಅವರಿಗೆ ಚಿರಶಾಂತಿ ಸಿಗಲಿ. ನಾನು ಈ ಹಿಂದೆ ಹಲವು ಸಲ ಸರೋಜಾ ದೇವಿ ಅವರನ್ನು ಭೇಟಿಯಾಗಿದ್ದೆ. ಎಲ್ಲರ ಜೊತೆಗೂ ಬಹಳ ಆತ್ಮೀಯವಾಗಿ ಪ್ರೀತಿಯಿಂದ ಮಾತನಾಡುತ್ತಾರೆ. ಹಲವು ಭಾಷೆಗಳಲ್ಲಿ ಹೆಸರಾಂತ ನಟರ ಜೊತೆಗೆ ನಟಿಸಿದ್ದರು ಎಂದರು.

ನಿನ್ನೆ ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ತಮ್ಮ ನಿವಾಸದಲ್ಲಿ ಸರೋಜಾದೇವಿ ನಿಧನರಾಗಿದ್ದರು. ಕನ್ನಡ ಚಿತ್ರರಂಗದ ಎಲ್ಲಾ ಕಲಾವಿದರು ಸರೋಜಾ ದೇವಿ ಅವರ ನಿಧನಕ್ಕೆ ಸಂತಾಪ ಸೂಚಿಸಿದ್ದು, ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಸೇರಿದಂತೆ ಗಣ್ಯಾತಿ ಗಣ್ಯರು ಶೋಕ ವ್ಯಕ್ತಪಡಿಸಿದ್ದಾರೆ ಹಾಗೂ ಇಂದು ಬಿ.ಸರೋಜಾದೇವಿಯವರ ಅಂತಿಮ ದರ್ಶನ ಪಡೆದು ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.

ಇಂದು ಮಧ್ಯಾಹ್ನ ಬೆಂಗಳೂರು ದಕ್ಷಿಣ ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ದಶವಾರ ಗ್ರಾಮದಲ್ಲಿ ಸರೋಜಾದೇವಿ ಅವರ ಅಂತ್ಯಕ್ರಿಯೆ ನೆರವೇರಲಿದೆ. ಒಕ್ಕಲಿಗ ಸಂಪ್ರದಾಯದಂತೆ ಅಂತ್ಯಕ್ರಿಯೆ ನೆರವೇರಲಿದೆ. ತಾಯಿ ಸಮಾಧಿ ಪಕ್ಕದಲ್ಲೇ ಅಂತ್ಯಕ್ರಿಯೆ ನಡೆಸಲು ನಿರ್ಧರಿಸಲಾಗಿದೆ ಎಂದು ಅವರ ಕುಟುಂಬದ ಮೂಲಗಳು ತಿಳಿಸಿದೆ.

ಸರೋಜಾದೇವಿಯವರು ವಯೋ ಸಹಜ ಅನಾರೋಗ್ಯದ ಸಮಸ್ಯೆಯಿಂದ ಬಳಲುತ್ತಿದ್ದರು ಅಭಿನಯ ಸರಸ್ವತಿ ಎಂದೇ ಸರೋಜಾದೇವಿ ಖ್ಯಾತಿ ಹೊಂದಿದ್ದರು. ಸುಮಾರು ಆರು ದಶಕಗಳ ಕಾಲ ಚಿತ್ರರಂಗದಲ್ಲಿ ಸೇವೆ ಸಲ್ಲಿಸಿದ್ದಾರೆ. ಐದು ಭಾಷೆಗಳಲ್ಲಿ ಸುಮಾರು 250ಕ್ಕೂ ಹೆಚ್ಚು ಚಿತ್ರಗಳಲ್ಲಿ ಸರೋಜಾ ದೇವಿ ನಟಿಸಿದ್ದಾರೆ.

ಇದನ್ನೂ ಓದಿ: Actress B Saroja Devi: ಇಂದು ಹುಟ್ಟೂರು ದಶವಾರದಲ್ಲಿ ನಟಿ ಸರೋಜಾದೇವಿ ಅಂತ್ಯಕ್ರಿಯೆ