ನವದೆಹಲಿ : ಬಾಲಿವುಡ್ ಹಿರಿಯ ನಟ ರಿಶಿ ಕಪೂರ್ ಪತ್ನಿ,ನಟಿ ನೀತು ಕಪೂರ್ ಗೂ ಕೊರೋನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟಿದೆ.
ಈ ಕುರಿತಂತೆ ತಮ್ಮ ಇನ್ಟಾಗ್ರಾಂ ಪೇಜ್ ನಲ್ಲಿ ಮಾಹಿತಿ ಹಂಚಿಕೊಂಡಿರುವ ನಟಿ ನೀತು ಕಪೂರ್, ಈ ವಾರ ನನಗೂ ಕೊರೋನಾ ಪಾಸಿಟಿವ್ ಎಂಬುದಾಗಿ ಪರೀಕ್ಷೆಯಿಂದ ದೃಢಪಟ್ಟಿದೆ. ವೈದ್ಯರ ಸಲಹೆಯ ಮೇರೆಗೆ ಔಷಧಿಗಳನ್ನು ತೆಗೆದುಕೊಳ್ಳುತ್ತಿದ್ದೇನೆ. ಕೊರೋನಾ ಬಗ್ಗೆ ಜಾಗ್ರತೆ ವಹಿಸುವಂತೆ ಮನವಿ ಮಾಡಿದ್ದಾರೆ.