Tuesday, 30th May 2023

ನಿಖಿಲ್ ಕುಮಾರಸ್ವಾಮಿ ದಂಪತಿಗೆ ಗಂಡು ಮಗು: ಹೆಚ್.ಡಿ.ದೇವೇಗೌಡರ ಮನೆಯಲ್ಲಿ ಸಂಭ್ರಮ

ಬೆಂಗಳೂರು: ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಪುತ್ರ, ನಟ ನಿಖಿಲ್ ಕುಮಾರಸ್ವಾಮಿ ಪತ್ನಿ ರೇವತಿ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ಈ ಮೂಲಕ ಮಾಜಿ ಪ್ರಧಾನಿ, ಹೆಚ್.ಡಿ.ದೇವೇಗೌಡರ ಮನೆಯಲ್ಲಿ ಸಂಭ್ರಮ ಮನೆ ಮಾಡಿದೆ.

ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಖಿಲ್ ಪತ್ನಿ ರೇವತಿ ಗಂಡು ಮಗುವಿಗೆ ಜನ್ಮ ನೀಡಿದ್ದು, ತಾಯಿ ಹಾಗೂ ಮಗು ಇಬ್ಬರೂ ಆರೋಗ್ಯವಾಗಿದ್ದಾರೆ ಎಂದು ತಿಳಿದುಬಂದಿದೆ. ಮುದ್ದಾದ ಮಗುವನ್ನು ಎತ್ತಿಕೊಂಡು ನಿಖಿಲ್ ಫೋಟೋಗೆ ಪೋಸ್ ನೀಡಿದ್ದಾರೆ. ಸಾಮಾಜಿಕ ಜಾಲತಾಣಗಲ್ಲಿ ಫೋಟೋ ವೈರಲ್ ಆಗಿದೆ.

ಇದೇ ವೇಳೆ ಮಾಜಿ ಸಿಎಂ ಕುಮಾರಸ್ವಾಮಿ ಹಾಗೂ ಪತ್ನಿ ಅನಿತಾ ಕುಮಾರಸ್ವಾಮಿ ಆಸ್ಪತ್ರೆಗೆ ಭೇಟಿ ನೀಡಿ ತಾಯಿ-ಮಗುವಿನ ಆರೋಗ್ಯ ವಿಚಾರಿಸಿದ್ದಾರೆ.

ನನ್ನ ಜೀವನದಲ್ಲಿ ಇನ್ನೊಂದು ಶುಭ ಘಳಿಗೆ ಬಂದಿದೆ. ನಮ್ಮ ಪರಿವಾರಕ್ಕೆ ಹೊಸ ಸದಸ್ಯನ ಆಗಮನವಾಗಿದೆ. ತಾತನಾದೆ ಎಂದು ಹೇಳಲು ಅತೀವ ಸಂತಸವಾಗುತ್ತಿದೆ. ಕಂದನಿಗೆ ನಿಮ್ಮೆಲ್ಲರ ಹಾರೈಕೆ ಮತ್ತು ಆಶೀರ್ವಾದ ಇರಲಿ ಎಂದು ಪ್ರಾರ್ಥನೆ ಮಾಡುತ್ತೇನೆ.

error: Content is protected !!