Saturday, 30th September 2023

ಗಾಯಕಿ ‘ನಿಶಾ ಉಪಾಧ್ಯಾಯ’ ಮೇಲೆ ಗುಂಡಿನ ದಾಳಿ

ಬಿಹಾರ: ಭೋಜ್‌ಪುರಿ ಜಾನಪದ ಗಾಯಕಿ ನಿಶಾ ಉಪಾಧ್ಯಾಯ ವೇದಿಕೆಯಲ್ಲಿ ಕಾರ್ಯಕ್ರಮ ನೀಡುತ್ತಿರುವಾಗ್ಲೇ ಅಪರಿಚಿತ ವ್ಯಕ್ತಿಯೊಬ್ಬ ಬಂದೂಕಿ ನಿಂದ ಗುಂಡು ಹಾರಿಸಿದ್ದಾನೆ. ಗಾಯಕಿ ವೇದಿಕೆಯಲ್ಲೇ ಕುಸಿದು ಬಿದ್ದಿದ್ದಾಳೆ.

ಕೆಲ ಸ್ಥಳೀಯರು ಗಾಯಕಿಯನ್ನ ಪಾಟ್ನಾದ ಖಾಸಗಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಸದ್ಯ ಆಕೆಗೆ ಚಿಕಿತ್ಸೆ ನೀಡಲಾಗು ತ್ತಿದ್ದು, ಆಕೆಯ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎನ್ನಲಾಗಿದೆ.

ಸರನ್ ಜಿಲ್ಲೆಯ ಜನತಾ ಬಜಾರ್ ಪೊಲೀಸ್ ಠಾಣೆ ವ್ಯಾಪ್ತಿಯ ಸೆಂಡುರ್ವಾ ಗ್ರಾಮದಲ್ಲಿ ನಡೆದ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ನಿಶಾ ಉಪಾಧ್ಯಾಯ ವೇದಿಕೆಯಲ್ಲಿ ಹಾಡುತ್ತಿದ್ದಾಗ ಅಪರಿಚಿತ ವ್ಯಕ್ತಿಯೊಬ್ಬ ಬಂದೂಕಿನಿಂದ ಆಕೆಯ ಮೇಲೆ ಗುಂಡು ಹಾರಿಸಿದ್ದು, ಆಕೆಯ ಎಡತೊಡೆಯ ಭಾಗಕ್ಕೆ ಗಾಯವಾಗಿದೆ.

ಆದರೆ, ನಿಶಾ ಉಪಾಧ್ಯಾಯ ಅವರ ಕುಟುಂಬ ಸದಸ್ಯರು ಈ ಘಟನೆ ಬಗ್ಗೆ ಪ್ರತಿಕ್ರಿಯಿಸಲು ಹಿಂದೇಟು ಹಾಕು ತ್ತಿದ್ದಾರೆ.

error: Content is protected !!