1960ರ ದಶಕದ ಜನಪ್ರಿಯ ನಟಿ ದಾಸ್ ಶ್ರೀ ಜಗನ್ನಾಥ, ನಾರಿ, ಅದಿನಮೇಘ, ಅಭಿನೇತ್ರಿ ಮೊದಲಾದ ಸಿನಿಮಾಗಳ ಮೂಲಕ ಗುರುತಿಸಿಕೊಂಡಿದ್ದರು.
ಬಾಲನಟಿಯಾಗಿ, ಆಕಾಶವಾಣಿಯಲ್ಲಿ ಉದ್ಘೋಷಕಿಯಾಗಿ ಕೂಡ ಜನಪ್ರಿಯರಾಗಿದ್ದರು. ಕತಕ್ ದೂರದರ್ಶನ ಕೇಂದ್ರದ ಸಹಾಯಕ ನಿರ್ದೇಶಕಿಯಾಗಿದ್ದರು. ಮಾಜಿ ಮುಖ್ಯಮಂತ್ರಿ ಹರೇಕೃಷ್ಣ ಮಹ್ತಾಬ್ ಜೀವನಾಧಾರಿತ ಸಾಕ್ಷ್ಯಚಿತ್ರ ನಿರ್ದೇಶಿಸಿದ್ದರು.
ರಾಷ್ಟ್ರಪತಿ ಮುರ್ಮು, ಒಡಿಶಾ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಸೇರಿದಂತೆ ದೇಶದ ಅನೇಕ ಗಣ್ಯರು ದಾಸ್ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ. ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನಡೆಯಲಿದೆ ಎಂದು ಒಡಿಶಾ ಸರ್ಕಾರ ಹೇಳಿದೆ.