Wednesday, 6th November 2024

ಆಸ್ಕರ್ ಗೆ ದಿನಗಣನೆ: ನಟಿ ದೀಪಿಕಾಗೆ ನಿರೂಪಣೆಯ ಹೊಣೆ

ನವದೆಹಲಿ: ಪ್ರತಿಷ್ಠಿತ ಪ್ರಶಸ್ತಿ ಆಸ್ಕರ್ ಗೆ ದಿನಗಣನೆ ಶುರುವಾಗಿದೆ. ಭಾರತದ ಹೆಸರಾಂತ ನಟರಾದ ರಾಮ್ ಚರಣ್ ಮತ್ತು ಜ್ಯೂನಿಯರ್ ಎನ್.ಟಿ.ಆರ್ ‘ನಾಟು ನಾಟು’ ಹಾಡಿಗೆ ವೇದಿಕೆಯ ಮೇಲೆ ಹೆಜ್ಜೆ ಹಾಕುತ್ತಿದ್ದರೆ, ಈ ಬಾರಿಯ ಕಾರ್ಯಕ್ರಮದ ನಿರೂಪಣೆಯ ಹೊಣೆಯನ್ನು ಬಾಲಿವುಡ್ ನಟಿ ದೀಪಿಕಾ ಪಡುಕೋಣೆ ಹೊರಲಿದ್ದಾರೆ.

2022ನೇ ಸಾಲಿನ ಕೇನ್ಸ್ ನಲ್ಲಿ ತೀರ್ಪುಗಾರರಾಗಿ ದೀಪಿಕಾ, ಆಸ್ಕರ್ ನಲ್ಲಿ ನಿರೂಪಕಿಯಾಗಿ ಮಿಂಚಲಿದ್ದಾರೆ. ಈ ಮಾಹಿತಿಯನ್ನು ದೀಪಿಕಾ ಅವರೇ ಸೋಷಿಯಲ್ ಮೀಡಿಯಾ ಮೂಲಕ ಅಭಿಮಾನಿಗಳಿಗೆ ತಿಳಿಸಿದ್ದಾರೆ.

ಇದೇ ಮಾರ್ಚ್ 12ರಂದು ಲಾಸ್ ಏಂಜಲೀಸ್ ನಲ್ಲಿ ಆಸ್ಕರ್ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ.

ಈ ಸಮಾರಂಭದಲ್ಲಿ ಹತ್ತು ಜನ ನಿರೂಪಕರು ಕೆಲಸ ಮಾಡಲಿದ್ದಾರೆ. ಅದರಲ್ಲಿ ದೀಪಿಕಾ ಪಡುಕೋಣೆ ಕೂಡ ಒಬ್ಬರು. ದೀಪಿಕಾ ಜೊತೆ ಮೆಲಿಸ್ಸಾ ಮೆಕಾರ್ಥಿ, ಜಾನೆಲ್ಲೆ ಮೋನೆ, ಜೆನ್ನಿಫರ್ ಕೊನ್ನೆಲ್ಲಿ, ಸ್ಯಾಮ್ಯುಯೆಲ್ ಎಲ್ ಜಾಕ್ಸನ್, ಜೋ ಸಲ್ಡಾನಾ ಸೇರಿದಂತೆ ಇತರರು ಕಾರ್ಯಕ್ರಮವನ್ನು ನಡೆಸಿಕೊಡಲಿದ್ದಾರೆ.