ಫೋಟೋ ಗ್ಯಾಲರಿ ಬಿಗ್​ಬಾಸ್ ಬಜೆಟ್​ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

#Paaru Parvathy Movie: ಅಮೆಜಾನ್‌ ಪ್ರೈಮ್‌ ವಿಡಿಯೋ ಓಟಿಟಿಯಲ್ಲಿ ಸ್ಟ್ರೀಮಿಂಗ್‌ ಆಗುತ್ತಿದೆ ‘#ಪಾರು ಪಾರ್ವತಿʼ ಚಿತ್ರ

#Paaru Parvathy Movie: ಬಿಗ್ ಬಾಸ್ ಮತ್ತು ನಾಗಿಣಿ ಸೀರಿಯಲ್‌ ಖ್ಯಾತಿಯ ದೀಪಿಕಾ ದಾಸ್, ಪೂನಂ ಸರ್ ನಾಯಕ್ ಹಾಗೂ ಫವಾಜ್ ಅಶ್ರಫ್ ಪ್ರಮುಖ ಪಾತ್ರದಲ್ಲಿ ನಟಿಸಿರುವ ʼ#ಪಾರು ಪಾರ್ವತಿʼ ಚಿತ್ರ ಚಿತ್ರಮಂದಿರಗಳ ಬಳಿಕ ಇದೀಗ ಓಟಿಟಿಗೆ (ಏಪ್ರಿಲ್‌ 4ರಿಂದ) ಆಗಮಿಸಿದೆ. ಜನವರಿ 31 ರಂದು ರಾಜ್ಯಾದ್ಯಂತ ಬಿಡುಗಡೆಯಾಗಿದ್ದ ಈ ಸಿನಿಮಾ ಇದೀಗ ಅಮೆಜಾನ್‌ ಪ್ರೈಂ ವಿಡಿಯೋ ಓಟಿಟಿಯಲ್ಲಿ ಸ್ಟ್ರೀಮಿಂಗ್‌ ಆರಂಭಿಸಿದೆ. ಈ ಕುರಿತ ವಿವರ ಇಲ್ಲಿದೆ.

ಬೆಂಗಳೂರು: EIGHTEEN THIRTY SIX ಪಿಕ್ಚರ್ಸ್ ಲಾಂಛನದಲ್ಲಿ ಪಿ.ಬಿ. ಪ್ರೇಂನಾಥ್ ನಿರ್ಮಿಸಿರುವ, ರೋಹಿತ್ ಕೀರ್ತಿ ನಿರ್ದೇಶನದ ಸಿನಿಮಾ ʼ#ಪಾರು ಪಾರ್ವತಿʼ‌ (#Paaru Parvathy Movie). ಬಿಗ್ ಬಾಸ್ ಮತ್ತು ನಾಗಿಣಿ ಸೀರಿಯಲ್‌ ಖ್ಯಾತಿಯ ದೀಪಿಕಾ ದಾಸ್, ಪೂನಂ ಸರ್ ನಾಯಕ್ ಹಾಗೂ ಫವಾಜ್ ಅಶ್ರಫ್ ಪ್ರಮುಖ ಪಾತ್ರದಲ್ಲಿ ನಟಿಸಿರುವ ʼ#ಪಾರು ಪಾರ್ವತಿʼ ಚಿತ್ರ ಚಿತ್ರಮಂದಿರಗಳ ಬಳಿಕ ಇದೀಗ ಓಟಿಟಿಗೆ (ಏಪ್ರಿಲ್‌ 4ರಿಂದ) ಆಗಮಿಸಿದೆ. ಜನವರಿ 31 ರಂದು ರಾಜ್ಯಾದ್ಯಂತ ಬಿಡುಗಡೆಯಾಗಿದ್ದ ಈ ಸಿನಿಮಾ ಇದೀಗ ಅಮೆಜಾನ್‌ ಪ್ರೈಂ ವಿಡಿಯೋ ಓಟಿಟಿಯಲ್ಲಿ ಸ್ಟ್ರೀಮಿಂಗ್‌ ಆರಂಭಿಸಿದೆ.

ಆರಂಭದಲ್ಲಿ ʼ#ಪಾರು ಪಾರ್ವತಿʼ ಚಿತ್ರದ ಟ್ರೇಲರ್‌ ಅನ್ನು ನಟ ಕಿಚ್ಚ ಸುದೀಪ್‌ ಬಿಡುಗಡೆ ಮಾಡಿ ಇಡೀ ತಂಡಕ್ಕೆ ಶುಭ ಹಾರೈಸಿದ್ದರು. ಅದಾದ ಬಳಿಕ ಚಿತ್ರಮಂದಿರಗಳಲ್ಲಿ ಬಿಡುಗಡೆ ಆದ ಈ ಸಿನಿಮಾಕ್ಕೆ ಮೆಚ್ಚುಗೆಯೂ ಸಿಕ್ಕಿತ್ತು. ಇದೀಗ ಓಟಿಟಿಯಲ್ಲಿ ಕಣ್ತುಂಬಿಕೊಳ್ಳುವ ಸಮಯ ಬಂದಿದೆ.

ಈ ಸುದ್ದಿಯನ್ನೂ ಓದಿ | Holiday Fashion: ಸಮ್ಮರ್‌ ಹಾಲಿಡೇ ಫ್ಯಾಷನ್‌ಗೆ ಇಲ್ಲಿವೆ 5 ಕೂಲ್‌ ಐಡಿಯಾ

ಪ್ರವಾಸ ಕಥನದ ಹಿನ್ನೆಲೆಯ ʼ#ಪಾರು ಪಾರ್ವತಿʼ ಸಿನಿಮಾವನ್ನು ಬೆಂಗಳೂರು, ಗೋವಾ, ಮಹಾರಾಷ್ಟ್ರ, ರಾಜಸ್ಥಾನ ಹಾಗೂ ಉತ್ತರಕಾಂಡ್ ನಲ್ಲಿ ಚಿತ್ರೀಕರಣ ಮಾಡಲಾಗಿದೆ. ಅಬಿನ್ ರಾಜೇಶ್ ಛಾಯಾಗ್ರಹಣ, ಆರ್ ಹರಿ ಸಂಗೀತ ನಿರ್ದೇಶನ ಹಾಗೂ ಸಿ.ಕೆ.ಕುಮಾರ ಅವರ ಸಂಕಲನ ʼ#ಪಾರು ಪಾರ್ವತಿʼ ಚಿತ್ರಕ್ಕಿದೆ.