Friday, 20th September 2024

ಚೆಕ್ ಬೌನ್ಸ್ ಪ್ರಕರಣ: ಸಂಕಷ್ಟದಲ್ಲಿ ಹಿರಿಯ ನಟಿ ಪದ್ಮಜಾ ರಾವ್

ಬೆಂಗಳೂರು: ಹಿರಿಯ ನಟಿ ಪದ್ಮಜಾ ರಾವ್ ಸಂಕಷ್ಟಕ್ಕೆ ಸಿಲುಕಿದ್ದಾರೆ. ಕನ್ನಡ ಚಿತ್ರರಂಗದಲ್ಲಿ ಬ್ಯುಸಿ ನಟಿ ಸದ್ಯ ಚೆಕ್ ಬೌನ್ಸ್ ಪ್ರಕರಣದಲ್ಲಿ ಸಂಕಷ್ಟಕ್ಕೆ ಸಿಲುಕಿದ್ದು ನಟಿಗೆ ಮಂಗಳೂರು ಜೆಎಂಎಫ್‌ಸಿ ನ್ಯಾಯಾಲಯವು ಮೂರು ತಿಂಗಳು ಕಾರಾಗೃಹ ಶಿಕ್ಷೆ ಜೊತೆಗೆ 40.20 ಲಕ್ಷ ರೂ. ದಂಡ ಕೂಡ ವಿಧಿಸಿದೆ.

‘ವೀರೂ ಟಾಕೀಸ್’ ಸಂಸ್ಥೆಯ ಮಾಲೀಕ ವೀರೇಂದ್ರ ಶೆಟ್ಟಿ ಅವರ ಬಳಿ ಪದ್ಮಜಾ ರಾವ್ ಅವರು 40 ಲಕ್ಷ ರೂಪಾಯಿ ಸಾಲ ಪಡೆದಿದ್ದರು. ಭದ್ರತೆ ದೃಷ್ಟಿ ಯಿಂದ ಪದ್ಮಜಾ ರಾವ್ ಚೆಕ್ ನೀಡಿದ್ದರು. ಇದು ನಡೆದಿದ್ದು 2020ರ ಜೂನ್‌ 17ರಂದು. ಆದರೆ, ಪದ್ಮಜಾ ಅವರು ಹಣ ಪಾವತಿ ಮಾಡಿಲ್ಲ. ಹೀಗಾಗಿ, ವಿರೇಂದ್ರ ಶೆಟ್ಟಿ ಅವರು ನ್ಯಾಯಾಲಯದ ಮೊರೆ ಹೊಗಿದ್ದರು.

ವಿಚಾರಣೆಗೆ ಹಾಜರಾದ ಪದ್ಮಜಾ ರಾವ್, ನಾನು ಸಾಲವನ್ನೇ ಪಡೆದಿಲ್ಲ ಎಂದು, ಚೆಕ್ ನೀಡಿದ ವಿಚಾರವನ್ನೂ ಅಲ್ಲಗಳೆದಿದ್ದರು. ಜೊತೆಗೆ ಪದ್ಮಜಾ ರಾವ್ ಅವರ ಚೆಕ್​ನ ಕದ್ದು ಸಹಿ ನಕಲು ಮಾಡಿದ ಆರೋಪವನ್ನು ಪದ್ಮಜಾ ರಾವ್ ಮಾಡಿದ್ದರು.

ಈ ತೀರ್ಪಿನ ಪ್ರಕಾರ ಪದ್ಮಜಾ ರಾವ್ ಅವರು 40.20ಲಕ್ಷ ರೂಪಾಯಿ ದಂಡ ಪಾವತಿಸಬೇಕಿದೆ. ಇದರಲ್ಲಿ 40.17 ಲಕ್ಷ ರೂಪಾಯಿ ಹಣವನ್ನು ದೂರು ದಾರನಿಗೆ ಕೊಡಬೇಕಿದೆ. ಉಳಿದ 3 ಸಾವಿರ ರೂಪಾಯಿ ಹಣವನ್ನು ಅವರು ಸರ್ಕಾರಕ್ಕೆ ತುಂಬಬೇಕು. ಉಳಿದಂತೆ ಸಾದಾ ಕಾರಗೃಹ ಶಿಕ್ಷೆ ಅನುಭವಿಸ ಬೇಕಿದೆ.

ಇದು ಮೂರು ವರ್ಷದ ಹಳೆಯ ಪ್ರಕರಣ. ನನ್ನ ವಿರುದ್ಧ ಸುಳ್ಳು ಆರೋಪ ಮಾಡಲಾಗಿದೆ. ಈ ಪ್ರಕರಣದ ವಿಚಾರವಾಗಿ ಸೆಷನ್ ಕೋರ್ಟ್‌ಗೆ ಅಪೀಲ್ ಹೋಗಿದ್ದೀನಿ. ನ್ಯಾಯಾಂಗದ ಮೇಲೆ ನನಗೆ ನಂಬಿಕೆ ಇದೆ. ನನ್ನ ವಿರುದ್ಧ ಸುಳ್ಳು ಆರೋಪ ಮಾಡಲಾಗಿದ್ದು, ನಾನು ಯಾರಿಗೂ ಮೋಸ ಮಾಡಿಲ್ಲ. ಇಷ್ಟರಲ್ಲೇ ಸತ್ಯ ಏನು ಅಂತಾ ಎಲ್ಲರಿಗೂ ಗೊತ್ತಾಗಲಿದೆ ಎಂದಿದ್ದಾರೆ.