ಮುಂಬೈ: ಶಾರುಖ್ ಖಾನ್ ನಟನೆಯ ‘ಪಠಾಣ್’ ಸಿನಿಮಾ ಮೊದಲ ದಿನ 55 ಕೋಟಿ ರೂಪಾಯಿ ಕಲೆಕ್ಷನ್ ಮಾಡುವ ಮೂಲಕ ಗಮನ ಸೆಳೆದಿದೆ.
ಸತತ ಸೋಲು ಕಂಡಿದ್ದ ಶಾರುಖ್ ಖಾನ್ ಅವರು ಈಗ ಭರ್ಜರಿಯಾಗಿ ಕಮ್ಬ್ಯಾಕ್ ಮಾಡಿ ದ್ದಾರೆ.
‘ಪಠಾಣ್’ ಸಿನಿಮಾಗೆ ಮೊದಲ ದಿನ ನಿರೀಕ್ಷೆಗೂ ಮೀರಿ ಕಲೆಕ್ಷನ್ ಆಗಿದೆ. ಯಶ್ ನಟನೆಯ ‘ಕೆಜಿಎಫ್: ಚಾಪ್ಟರ್ 2’ ಚಿತ್ರದ ಹಿಂದಿ ವರ್ಷನ್ ಮೊದಲ ದಿನ ಮಾಡಿದ್ದ ದಾಖಲೆಯನ್ನು ಈಗ ‘ಪಠಾಣ್’ ಮುರಿದಿದೆ. ‘ಪಠಾಣ್’ ಸಿನಿಮಾ ಬರೋಬ್ಬರಿ 55 ಕೋಟಿ ರೂಪಾಯಿ ಗಳಿಕೆ ಮಾಡುವ ಮೂಲಕ ಧೂಳೆಬ್ಬಿಸಿದೆ.
ಪ್ರಶಾಂತ್ ನೀಲ್ ನಿರ್ದೇಶನ ಮಾಡಿದ್ದ ‘ಕೆಜಿಎಫ್ 2’ ಸಿನಿಮಾದ ಹಿಂದಿ ವರ್ಷನ್ಗೆ ಉತ್ತರ ಭಾರತದಲ್ಲಿ ಒಳ್ಳೆಯ ಪ್ರತಿಕ್ರಿಯೆ ಸಿಕ್ಕಿತ್ತು. ಆ ಸಿನಿಮಾ ಮೊದಲ ದಿನ 53.95 ಕೋಟಿ ರೂಪಾಯಿ ಗಳಿಸಿ ಬೀಗಿತ್ತು. ಈಗ ‘ಪಠಾಣ್’ ಸಿನಿಮಾ ಮೊದಲ ದಿನ 55 ಕೋಟಿ ರೂಪಾಯಿ ಕಲೆಕ್ಷನ್ ಮಾಡುವ ಮೂಲಕ ಗಮನ ಸೆಳೆದಿದೆ.
ಶಾರುಖ್ ಖಾನ್ಗೆ ಜೋಡಿಯಾಗಿ ನಟಿಸಿದ ದೀಪಿಕಾ ಪಡುಕೋಣೆ ಅವರಿಗೂ ಈ ಚಿತ್ರದಿಂದ ಖ್ಯಾತಿ ಹೆಚ್ಚಾಗಿದೆ. ಈ ಚಿತ್ರ ಎಷ್ಟು ಕಲೆಕ್ಷನ್ ಮಾಡಿದೆ ಎಂಬ ಬಗ್ಗೆ ಟ್ರೇಡ್ ವಿಶ್ಲೇಷಕ ತರಣ್ ಆದರ್ಶ್ ಅವರು ಮಾಹಿತಿ ಹಂಚಿಕೊಂಡಿದ್ದಾರೆ.