Sunday, 15th December 2024

ಕೋವಿಡ್ ಲಸಿಕೆ ಮೊದಲ ಡೋಸ್ ಪಡೆದುಕೊಂಡ ಪವರ್‌ ಸ್ಟಾರ್‌ ಪುನೀತ್

ಬೆಂಗಳೂರು : ಸ್ಯಾಂಡಲ್‌ವುಡ್‌ ಪವರ್‌ ಸ್ಟಾರ್‌ ಪುನೀತ್ ರಾಜಕುಮಾರ್ ಗುರುವಾರ ಆರೋಗ್ಯ ಕೇಂದ್ರಕ್ಕೆ ತೆರಳಿ ಮೊದಲ ಡೋಸ್ ಕೋವಿಡ್ ಲಸಿಕೆ ಪಡೆದಿದ್ದಾರೆ.

ಕೋವಿಡ್ ಲಸಿಕೆ ಪಡೆದಿರುವ ಕುರಿತು ಟ್ವಿಟರ್‌ನಲ್ಲಿ, 45 ವರ್ಷ ವಯಸ್ಸಿನವರು ಹಾಗೂ ಅದಕ್ಕೂ ಮೇಲ್ಪಟ್ಟವರು ಕೋವಿಡ್ ಲಸಿಕೆ ಪಡೆದುಕೊಳ್ಳಿ ಎಂದು ಸಲಹೆ ನೀಡಿದ್ದಾರೆ.

ಏ.1 ರಂದು ಪುನೀತ್ ಅಭಿನಯಿಸಿರುವ ಯುವರತ್ನ ಸಿನಿಮಾ ಬಿಡುಗಡೆಯಾಗಿ ಎಲ್ಲೆಡೆ ಅದ್ಭುತ ಪ್ರದರ್ಶನ ಕಾಣುತ್ತಿದೆ.

ಮಂಗಳವಾರ ಹಿರಿಯ ನಟ ನವರಸ ನಾಯಕ ಜಗ್ಗೇಶ್ ಹಾಗೂ ಅವರ ಪತ್ನಿ ಪರಿಮಳ ಜಗ್ಗೇಶ್ ಕೋವಿಡ್ ಲಸಿಕೆ ಪಡೆದಿದ್ದಾರೆ. ‘ಕೋವಿಡ್ ವಿಶ್ವಕ್ಕೆ ಬಂದಾಗ ಲಸಿಕೆ ಬೇಗ ಬರಲಿ ಎಂದು ಮನುಕುಲ ಪ್ರಾರ್ಥಿಸಿದೆವು. ಈಗ ವ್ಯಾಕ್ಸಿನ್ ಬಂದಿದೆ, ತೆಗೆದುಕೊಳ್ಳಲು ಅನಾವಶ್ಯಕ ಭಯವೇಕೆ ? ಎಂದು ಎಲ್ಲರಿಗೂ ಹೇಳಿದ್ದಾರೆ.

ಕ್ಷಣ ಕ್ಷಣದ ಸುದ್ದಿಗಳಿಗಾಗಿ ವಿಶ್ವವಾಣಿ ಫೇಸ್‌ ಬುಕ್‌ ಪೇಜ್‌ ಲೈಕ್‌ ಮಾಡಿ

https://www.facebook.com/Vishwavanidaily