Wednesday, 11th December 2024

ಆಲಿಯಾ-ರಣಬೀರ್ ದಂಪತಿಗೆ ಶುಭ ಕೋರಿದ ಪ್ರಿಯಾಂಕಾ ಚೋಪ್ರಾ

ಮುಂಬೈ: ಬಾಲಿವುಡ್‌ನ ಕ್ಯೂಟ್ ಜೋಡಿ ಎಂದೇ ಹೆಸರಾಗಿರುವ ಆಲಿಯಾ ಭಟ್‌ ಮತ್ತು ರಣಬೀರ್ ಕಪೂರ್ ಅವರು ಗುರುವಾರ ವೈವಾಹಿಕ ಜೀವನಕ್ಕೆ ಕಾಲಿರಿಸಿದ್ದಾರೆ.

ನವ ದಂಪತಿಗೆ ಬಾಲಿವುಡ್‌ ನಟ -ನಟಿಯರು ಸೇರಿದಂತೆ ಅಭಿಮಾನಿಗಳು ಸಾಮಾಜಿಕ ಜಾಲತಾಣ ಗಳಲ್ಲಿ ಶುಭ ಕೋರಿದ್ದಾರೆ. ಆಲಿಯಾ ಭಟ್, ರಣಬೀರ್ ಕಪೂರ್ ಅವರಿಗೆ ‘ಜೀವಮಾನದ ಪ್ರೀತಿ ಮತ್ತು ಸಂತೋಷ’ ಎಂದು ಪ್ರಿಯಾಂಕಾ ಚೋಪ್ರಾ ಶುಭ ಹಾರೈಸಿದ್ದಾರೆ.

ಇನ್‌ಸ್ಟಾಗ್ರಾಮ್‌ ಸ್ಟೋರೀಸ್‌ನಲ್ಲಿ ಫೋಟೊ ಹಂಚಿಕೊಂಡಿರುವ ಪ್ರಿಯಾಂಕಾ, ‘ನಿಮ್ಮಿಬ್ಬರಿಗೂ ಅಭಿನಂದನೆಗಳು… ಸದಾ ಪ್ರೀತಿ, ಸಂತೋಷ ನಿಮ್ಮದಾಗಲಿ’ ಎಂದು ಬರೆದುಕೊಂಡಿದ್ದಾರೆ.

ಬಾಂದ್ರಾದ ರಣಬೀರ್‌ ಅವರ ‘ವಾಸ್ತು’ ನಿವಾಸದಲ್ಲಿ ಕುಟುಂಬದ ಸದಸ್ಯರು ಮತ್ತು ಆಪ್ತರ ಸಮ್ಮುಖ ದಲ್ಲಿ ಶಾಸ್ತ್ರೋಕ್ತವಾಗಿ ಮದುವೆ ಸಮಾರಂಭ ನೆರವೇರಿದೆ. ಮದುವೆ ಸಮಾರಂಭದಲ್ಲಿ ಎರಡೂ ಕುಟುಂಬಗಳ ಆಪ್ತರು ಮತ್ತು ಸ್ನೇಹಿತರಷ್ಟೇ ಭಾಗವಹಿಸಿದ್ದರು.

ನೀತು ಕಪೂರ್, ಕರೀನಾ ಕಪೂರ್, ಮಹೇಶ್ ಭಟ್, ಸೋನಿ ರಜ್ದಾನ್, ಕರಿಷ್ಮಾ ಕಪೂರ್, ಕರಣ್ ಜೋಹರ್, ಅಯಾನ್ ಮುಖರ್ಜಿ ಸೇರಿದಂತೆ ಅನೇಕರು ಉಪಸ್ಥಿತರಿದ್ದರು. 2010ರಲ್ಲಿ ‘ಅಂಜಾನ ಅಂಜಾನಿ’ ಹಾಗೂ 2012 ರಲ್ಲಿ ‘ಬರ್ಫಿ’ ಸಿನಿಮಾದಲ್ಲಿ ರಣಬೀರ್‌ಗೆ ನಾಯಕಿಯಾಗಿ ಪ್ರಿಯಾಂಕಾ ನಟಿಸಿದ್ದರು.