ಬಿಗ್​ಬಾಸ್ ಫೋಟೋ ಗ್ಯಾಲರಿ ವಿಶ್ವವಾಣಿ ಪ್ರಾಪರ್ಟಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Priyanka Upendra: ಪ್ರಿಯಾಂಕ ಉಪೇಂದ್ರ ಮೊಬೈಲ್‌ ಹ್ಯಾಕ್‌, ಹಣ ನೀಡದಂತೆ ದಂಪತಿ ಮನವಿ

Priyanka Upendra: ‘ನನ್ನ ಮೊಬೈಲ್​ನಿಂದ ಅಥವಾ ಪ್ರಿಯಾಂಕಾ ಮೊಬೈಲ್​ನಿಂದ ಹಣ ಕೊಡಿ ಎಂದು ಮೆಸೇಜ್ ಬಂದರೆ ಇಗ್ನೋರ್ ಮಾಡಿ’ ಎಂದು ಉಪೇಂದ್ರ ಕೇಳಿಕೊಂಡಿದ್ದಾರೆ. ಈಗಾಗಲೇ ಪ್ರಿಯಾಂಕಾ ವಾಟ್ಸಾಪ್​ನಿಂದ ಕೆಲವರಿಗೆ ಹಣ ಕಳಿಸುವಂತೆ ಮೆಸೇಜ್ ಹೋಗಿದೆ.

ಬೆಂಗಳೂರು: ನಟಿ ಪ್ರಿಯಾಂಕ ಉಪೇಂದ್ರ (Priyanka Upendra) ಹಾಗೂ ಉಪೇಂದ್ರ ಅವರ ಮೊಬೈಲ್‌ ಹ್ಯಾಕ್‌ (mobile hack) ಆಗಿದ್ದು, ಈ ಬಗ್ಗೆ ದಂಪತಿಗಳು ದೂರು ನೀಡಲು ಸದಾಶಿವನಗರದ ಪೊಲೀಸ್‌ ಠಾಣೆಗೆ ತೆರಳಿದ್ದಾರೆ. ಈ ಬಗ್ಗೆ ನಟ ಉಪೇಂದ್ರ ಅವರು ವಿಡಿಯೋ ಮೂಲಕ ಮನವಿ ಮಾಡಿಕೊಂಡಿದ್ದು, ದಯವಿಟ್ಟು ಯಾವುದೇ ಕಾರಣಕ್ಕೂ ನನ್ನ ನಂಬರ್‌ನಿಂದ ಅಥವಾ ಪ್ರಿಯಾಂಕ ಅವರ ನಂಬರ್‌ನಿಂದ ಯಾವುದೇ ಮೆಸೇಜ್‌ ಬಂದರೆ ಅದಕ್ಕೆ ಮರು ಉತ್ತರ ನೀಡಬೇಡಿ. ಹಾಗೂ ಹಣ ನೀಡಬೇಡಿ ಎಂದು ಹೇಳಿದ್ದಾರೆ. ದಯವಿಟ್ಟು ಈ ಬಗ್ಗೆ ಎಲ್ಲರಿಗೂ ಮಾಹಿತಿಯನ್ನು ನೀಡಿ ಎಂದು ಹೇಳಿದ್ದಾರೆ.

ಮೊಬೈಲ್ ಹ್ಯಾಕ್ ಆದ ಬಗ್ಗೆ ಉಪೇಂದ್ರ ವಿಡಿಯೋ ಮಾಡಿ ಪೋಸ್ಟ್ ಮಾಡಿದ್ದಾರೆ. ‘ಪ್ರಿಯಾಂಕಾಗೆ ಬೆಳಿಗ್ಗೆ ಒಂದು ಮೆಸೇಜ್ ಬಂತು. ಪ್ರಿಯಾಂಕಾ ಆರ್ಡರ್ ಮಾಡಿದ ಪಾರ್ಸಲ್ ಒಂದು ಬರೋದಿತ್ತು. ಪಾರ್ಸಲ್ ಸಂಬಂಧದ್ದೇ ಮೆಸೇಜ್ ಇದು ಎಂದು ಅವಳು ಭಾವಿಸಿದಳು. ಹ್ಯಾಶ್ ಟ್ಯಾಗ್ ಒತ್ತಿ ಆ ನಂಬರ್ ಡಯಲ್ ಮಾಡಿ, ಈ ನಂಬರ್ ಡಯಲ್ ಮಾಡಿ ಎಂದು ಮೆಸೇಜ್ ಮಾಡಿದಾತ ಹೇಳಿದ್ದಾನೆ. ಅವಳು ಹಾಗೆ ಮಾಡಿದಳು. ಅಲ್ಲಿ ಆಗುತ್ತಿಲ್ಲ ಎಂದು ನನ್ನ ಮೊಬೈಲ್​ನಿಂದಲೂ ಪ್ರಯತ್ನಿಸಿದ್ದಾಳೆ. ಹೀಗಾಗಿ, ನನ್ನ ಮೊಬೈಲ್ ಕೂಡ ಹ್ಯಾಕ್ ಆಗಿದೆ ಎನಿಸುತ್ತಿದೆ’ ಎಂದು ಉಪೇಂದ್ರ ಹೇಳಿದ್ದಾರೆ.

‘ನನ್ನ ಮೊಬೈಲ್​ನಿಂದ ಅಥವಾ ಪ್ರಿಯಾಂಕಾ ಮೊಬೈಲ್​ನಿಂದ ಹಣ ಕೊಡಿ ಎಂದು ಮೆಸೇಜ್ ಬಂದರೆ ಇಗ್ನೋರ್ ಮಾಡಿ’ ಎಂದು ಉಪೇಂದ್ರ ಕೇಳಿಕೊಂಡಿದ್ದಾರೆ. ಈಗಾಗಲೇ ಪ್ರಿಯಾಂಕಾ ವಾಟ್ಸಾಪ್​ನಿಂದ ಕೆಲವರಿಗೆ ಮೆಸೇಜ್ ಹೋಗಿದೆ. ‘ನನ್ನ ಮೊಬೈಲ್ ಯುಪಿಐ ವರ್ಕ್ ಆಗುತ್ತಿಲ್ಲ. ನೀವು ಹಣ ಕಳುಹಿಸಿ. 2 ಗಂಟೆಯಲ್ಲಿ ಕಳುಹಿಸುತ್ತೇವೆ’ ಎಂದು ಹ್ಯಾಕರ್ ಪ್ರಿಯಾಂಕಾ ಕಾಂಟ್ಯಾಕ್ಟ್​ನಲ್ಲಿರೋ ವ್ಯಕ್ತಿಗಳಿಗೆ ಮೆಸೇಜ್ ಮಾಡುತ್ತಿದ್ದಾನೆ.

ಇದರಿಂದ ಅನೇಕರಿಗೆ ಅನುಮಾನ ಬಂದಿದೆ. ಹೀಗಾಗಿ, ‘ಕರೆ ಮಾಡಿ, ನಾವು ಫೋನ್​ನಲ್ಲೇ ಮಾತನಾಡೋಣ’ ಎಂದು ಉತ್ತರಿಸಿದ್ದಾರೆ. ಆದರೆ, ‘ಈಗ ಮಾತನಾಡೋಕೆ ಆಗಲ್ಲ’ ಎಂದು ಹ್ಯಾಕರ್ ಹೇಳಿದ್ದಾನೆ. ಹೀಗಾಗಿ, ಯಾರೂ ಹಣ ಕಳುಹಿಸಿಲ್ಲ ಎಂದು ಹೇಳಲಾಗುತ್ತಿದೆ.

ಇದನ್ನೂ ಓದಿ: 45 Movie: ಶಿವಣ್ಣ, ಉಪೇಂದ್ರ, ರಾಜ್ ಬಿ ಶೆಟ್ಟಿ ಅಭಿನಯದ ʼ45ʼ ಸಿನಿಮಾ ಬಿಡುಗಡೆ ಯಾವಾಗ?

ಹರೀಶ್‌ ಕೇರ

View all posts by this author