Thursday, 24th October 2024

ಕನ್ನಡದ ಹಿರಿಯ ನಟ ಪ್ರೊ. ಜಿ.ಕೆ.ಗೋವಿಂದ ರಾವ್ ಇನ್ನಿಲ್ಲ

ಹುಬ್ಬಳ್ಳಿ: ಕನ್ನಡದ ಹಿರಿಯ ನಟ ಪ್ರೊ. ಜಿ.ಕೆ. ಗೋವಿಂದ ರಾವ್ ಶುಕ್ರವಾರ ಹುಬ್ಬಳ್ಳಿಯ ಪುತ್ರಿಯ ಮನೆಯಲ್ಲಿ ಅವರು ನಿಧನರಾಗಿದ್ದು, ಹುಬ್ಬಳ್ಳಿಯ ಕೇಶ್ವಾಪುರದ ಮುಕ್ತಿಧಾಮದಲ್ಲಿ8 ಗಂಟೆಗೆ ಅಂತ್ಯ ಸಂಸ್ಕಾರ ನಡೆದಿದೆ.

ವೃತ್ತಿಯಿಂದ ಇಂಗ್ಲಿಷ್ ಪ್ರಾಧ್ಯಾಪಕರಾಗಿದ್ದ ಅವರು, ರಂಗಭೂಮಿ ಕಲಾವಿದರೂ ಆಗಿದ್ದರು.

ಮಾಲ್ಗುಡಿ ಡೇಸ್, ಮಹಾಪರ್ವ ಧಾರಾವಾಹಿ ಸೇರಿದಂತೆ ಹಲವಾರು ಧಾರವಾಹಿಗಳಲ್ಲಿ ಹಾಗೂ ಚಲನಚಿತ್ರಗಳಲ್ಲಿ ಅಭಿನಯಿಸಿದ್ದರು. ವಯೋಸಹಜ ಅನಾರೋಗ್ಯಕ್ಕೆ ಒಳಗಾಗಿದ್ದ ಜಿ.ಕೆ. ಗೋವಿಂದ ರಾವ್​​ ತಮ್ಮ ಇಳಿ ವಯಸ್ಸಿನಲ್ಲೂ ರಂಗ ಚಟುವಟಿಕೆ ಮತ್ತು ಹೋರಾಟದಲ್ಲಿ ಸಕ್ರಿಯರಾಗಿದ್ದರು.

ವಿಪಕ್ಷ ನಾಯಕ ಸಿದ್ದರಾಮಯ್ಯನವರು ಜಿ.ಕೆ. ಗೋವಿಂದರಾವ್ ನಿಧನದ ಸುದ್ದಿಗೆ ಸಂತಾಪ ಸೂಚಿಸಿದ್ದಾರೆ. ಟ್ವೀಟ್ ಮಾಡಿದ್ದು, ”ಹಿರಿಯ ಲೇಖಕ, ಚಿಂತಕ,‌ ನಟ ಪ್ರೊ.ಜಿ.ಕೆ. ಗೋವಿಂದರಾವ್ ಸಾವಿನಿಂದ ಆಘಾತಕ್ಕೀಡಾಗಿದ್ದೇನೆ. ನನ್ನ ಹಿತೈಷಿ, ಮಾರ್ಗದರ್ಶಕ ಮತ್ತು ಆತ್ಮೀಯ ಸ್ನೇಹಿತರಾಗಿದ್ದ ಪ್ರೊ.ಜಿಕೆಜಿ ಅವರಿಗೆ ಗೌರವದ ನಮನಗಳು. ಅವರನ್ನು ಕಳೆದುಕೊಂಡ ಕುಟುಂಬದ ಸದಸ್ಯರು, ಶಿಷ್ಯರು, ಅಭಿಮಾನಿಗಳ ದುಃಖದಲ್ಲಿ ನಾನೂ ಭಾಗಿಯಾಗಿದ್ದೇನೆ,” ಎಂದು ಸಂತಾಪ ಸೂಚಿಸಿದ್ದಾರೆ.