Saturday, 14th December 2024

ನಟಿ ರಾಧಿಕಾ ಪಂಡಿತ್’ಗೆ ಹುಟ್ಟುಹಬ್ಬದ ಸಂಭ್ರಮ

ಬೆಂಗಳೂರು: ರಾಕಿಂಗ್‌ ಸ್ಟಾರ್‌ ನಟ ಯಶ್‌ ಪತ್ನಿ ಹಾಗೂ ನಟಿ ರಾಧಿಕಾ ಪಂಡಿತ್ ಭಾನುವಾರ ತಮ್ಮ 37ನೇ ಹುಟ್ಟುಹಬ್ಬದ ಸಂಭ್ರಮ ದಲ್ಲಿದ್ದಾರೆ.

ನಟಿ ರಾಧಿಕಾ ಪಂಡಿತ್ ಆರಂಭದಲ್ಲಿ ಸುಮಂಗಲಿ ಹಾಗೂ ನಂದಗೋಕುಲ ಸೇರಿದಂತೆ ಹಲವಾರು ಧಾರಾವಾಹಿಗಳಲ್ಲಿ ಅಭಿನಯಿಸುವ ಮೂಲಕ ಮನೆಮಾತಾಗಿದ್ದರು. ನಂತರ 2008ರಂದು ‘ಮೊಗ್ಗಿನ ಮನಸು’ ಚಿತ್ರದ ಮೂಲಕ ಕನ್ನಡ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದರು. ನಂತರ ಸಾಕಷ್ಟು ಹಿಟ್ ಸಿನಿಮಾಗಳಲ್ಲಿ ನಟಿಸುವ ಮೂಲಕ ಸ್ಯಾಂಡಲ್ ವುಡ್ ನ ಸ್ಟಾರ್ ನಟಿಯಾಗಿ ಹೊರಹೊಮ್ಮಿದರು.

ನಟಿ ರಾಧಿಕಾ ಪಂಡಿತ್ 1984 ಮಾರ್ಚ್ 7ರಂದು ಜನಿಸಿದ್ದು, ಸಾಮಾಜಿಕ ಜಾಲತಾಣದಲ್ಲಿ ರಾಧಿಕಾ ಪಂಡಿತ್ ಅವರ ಅಭಿಮಾನಿ ಗಳು ಹಾಗೂ ಸಿನಿ ತಾರೆಯರು ಹುಟ್ಟುಹಬ್ಬದ ಶುಭಾಶಯ ತಿಳಿಸಿದ್ದಾರೆ.