ಚೆನ್ನೈ : ಮುಂದಿನ ವರ್ಷದ ಆರಂಭದಲ್ಲಿ ರಾಜಕೀಯ ಪಕ್ಷ ಘೋಷಣೆ ಮಾಡುವ ಯೋಜನೆಯಲ್ಲಿದ್ದ ಸೂಪರ್ ಸ್ಟಾರ್ ರಜನಿ ಕಾಂತ್ ಆರೋಗ್ಯ ಕಾರಣದಿಂದ ತಮ್ಮ ಯೋಜನೆಗಳನ್ನು ರದ್ದುಗೊಳಿಸಿದ್ದಾರೆ.
ಅನಾರೋಗ್ಯದಿಂದಾಗಿ ರಾಜಕೀಯ ಪಕ್ಷ ಕಟ್ಟಲು ಆಗುತ್ತಿಲ್ಲ. ಡಿ.31ರಂದು ರಾಜಕೀಯ ಪಕ್ಷವನ್ನು ಅಧಿಕೃತವಾಗಿ ಘೋಷಣೆ ಮಾಡುವುದಾಗಿ ಘೋಷಿಸಿದ್ದೆ. ಸದ್ಯಕ್ಕೆ ರಾಜಕೀಯ ಪಕ್ಷ ಘೋಷಣೆಯಿಲ್ಲ ಎನ್ನುವ ಮೂಲಕ, ಸೂಪರ್ ಸ್ಟಾರ್ ರಜನಿಕಾಂತ್ ರಾಜಕೀಯದಿಂದ ಹಿಂದೆ ಸರಿದಿದ್ದಾರೆ.
‘ಅನ್ನತ್ತೆ’ ಚಿತ್ರದ ಶೂಟಿಂಗ್ಗೆಂದು ಹೈದರಾಬಾದ್ಗೆ ಹೋಗಿದ್ದ ರಜನಿಕಾಂತ್ ಅವರ ಚಿತ್ರತಂಡದ ಸದಸ್ಯರಲ್ಲಿ ಸೋಂಕು ಕಾಣಿಸಿ ಕೊಂಡು ಕ್ವಾರಂಟೈನ್ ಗೆ ಒಳಗಾಗಿದ್ದರು. ಅಲ್ಲಿ ಅವರಿಗೆ ತೀವ್ರ ರಕ್ತದೊತ್ತಡ ಮತ್ತು ಉಸಿರಾಟ ಸಮಸ್ಯೆಯುಂಟಾಗಿ ಮೊನ್ನೆ ಡಿ.25ರಂದು ಆಸ್ಪತ್ರೆಗೆ ದಾಖಲಾಗಿದ್ದರು. ಅವರಿಗೆ ಪರೀಕ್ಷೆಯಲ್ಲಿ ಕೊರೋನಾ ನೆಗೆಟಿವ್ ಬಂದಿದೆ.
ಆಸ್ಪತ್ರೆಯಿಂದ ಗುಣಮುಖರಾಗಿ ಬಿಡುಗಡೆಯಾದ ರಜನಿಕಾಂತ್ ಅವರಿಗೆ ವೈದ್ಯರು ಒಂದು ವಾರ ಕಾಲ ವಿಶ್ರಾಂತಿ ಸೂಚಿಸಿ ದ್ದಾರೆ. ಇಂದು ಟ್ವಿಟ್ಟರ್ ನಲ್ಲಿ ಹೇಳಿಕೆ ಪ್ರಕಟಿಸಿರುವ ರಜನಿಕಾಂತ್, ತಮ್ಮ ಅನಾರೋಗ್ಯ ಕಾರಣದಿಂದ ತಳಮಟ್ಟದಲ್ಲಿ ಕೆಲಸ ಮಾಡಲು ಸದ್ಯಕ್ಕೆ ಸಾಧ್ಯವಾಗುತ್ತಿಲ್ಲ, ಕೇವಲ ಸೋಷಿಯಲ್ ಮೀಡಿಯಾ ಮತ್ತು ವರ್ಚುವಲ್ ಮಾಧ್ಯಮ ಮೂಲಕವೇ ಸದ್ಯದ ಮಟ್ಟಿಗೆ ಸಾಧ್ಯ ಎಂದು ಪ್ರಕಟಿಸಿದ್ದಾರೆ.
ನಾನು ರಾಜಕೀಯ ಪಕ್ಷ ಸ್ಥಾಪಿಸುವುದಿಲ್ಲ, ಚುನಾವಣಾ ರಾಜಕೀಯಕ್ಕೆ ಸೇರ್ಪಡೆಯಾಗದೆ ನನ್ನಿಂದಾದ ಮಟ್ಟಿಗೆ ಜನರ ಸೇವೆ ಮಾಡುತ್ತೇನೆ ಎಂದು ರಜನಿಕಾಂತ್ ಇಂದು ಹೇಳಿಕೆ ಬಿಡುಗಡೆ ಮಾಡಿದ್ದಾರೆ.