Friday, 3rd January 2025

BBK 11: ಬಿಗ್ ಬಾಸ್ ಮನೆಯೊಳಗೆ ಬಂದ ಪತ್ನಿಯನ್ನೇ ಆಚೆ ಹೋಗು ಎಂದ ರಜತ್

Rajath Kishan Family

ಬಿಗ್ ಬಾಸ್ ಕನ್ನಡ ಸಿಸನ್ 11 (Bigg Boss Kannada 11) ಇನ್ನು ಕೆಲವೇ ವಾರಗಳಲ್ಲಿ ಪೂರ್ಣಗೊಳ್ಳಲಿದೆ. ಸ್ಪರ್ಧಿಗಳ ಮಧ್ಯೆ ಕಾಂಪಿಟೇಷನ್ ಜೋರಾಗಿದೆ. ಸುಮಾರು 95 ದಿನಗಳ ಕಾಲ ಕುಟುಂಬವನ್ನು ಬಿಟ್ಟು ಬಿಗ್ ಬಾಸ್ ಮನೆಯಲ್ಲಿರುವ ಸ್ಪರ್ಧಿಗಳಿಗೆ ಕುಟುಂಬದವರನ್ನು ಭೇಟಿ ಮಾಡುವ ಅವಕಾಶ ಒದಗಿಸಲಾಗಿದೆ. ಈ ವಾರ ಫ್ಯಾಮಿಲಿ ವೀಕ್. ಸ್ಪರ್ಧಿಗಳ ಅಮ್ಮಂದಿರು, ಅಪ್ಪಂದಿರು ಮಡದಿ, ಮಕ್ಕಳು ಬಿಗ್ ಬಾಸ್​ಗೆ ಬಂದಿದ್ದಾರೆ.

ಬಿಗ್ ಬಾಸ್ ಮನೆಯಲ್ಲಿರುವ 9 ಸ್ಪರ್ಧಿಗಳ ಕುಟುಂಬದವರು ಆಗಮಿಸುತ್ತಿದ್ದಾರೆ. ಅದರಲ್ಲಿ ಮುಖ್ಯವಾಗಿ ರಜತ್ ಕಿಶನ್ ಅವರ ಮಡದಿ ಮತ್ತು ಮಕ್ಕಳು ಬಿಗ್ ಬಾಸ್ ಮನೆಯೊಳಗೆ ಕಾಲಿಟ್ಟಿದ್ದಾರೆ. ಆದರೆ, ಇದರಲ್ಲೂ ಬಿಗ್ ಬಾಸ್ ಒಂದು ಟ್ವಿಸ್ಟ್ ಇಟ್ಟಿದ್ದಾರೆ. ಸ್ಪರ್ಧಿಗಳಿಗೆ ಹೊಸ ಟಾಸ್ಕ್ ನೀಡಲಾಗಿದೆ. ಟಾಸ್ಕ್‌ ಗೆದ್ದವರಿಗೆ ಮಾತ್ರ ತಮ್ಮ ಮನೆಯವರನ್ನು ಭೇಟಿ ಮಾಡುವ ಅವಕಾಶ ಕೊಡಲಾಗುತ್ತದೆ.

ಅದರಂತೆ ರಜತ್​ಗೆ ಫ್ಯಾಮಿಲಿ ಭೇಟಿ ಮಾಡುವ ಅವಕಾಶ ಸಿಕ್ಕಿದೆ. ಸದಾ ಒಂದಲ್ಲ ಒಂದು ತರಲೆ ಮಾಡೋ ಪತಿ ರಜತ್‌ಗೆ ಪತ್ನಿ ಸಖತ್‌ ಆಗಿ ಕ್ಲಾಸ್‌ ತೆಗೆದುಕೊಂಡಿದ್ದಾರೆ. ಮೊದಲು ಬಿಗ್ ಬಾಸ್‌ಗೆ ರಜತ್ ಪತ್ನಿ ಅಕ್ಷಿತಾ ಬಂದಿದ್ದರು. ಆಗ ರಜತ್ ಹೆಂಡತಿಗೆ ನನ್ನ ಮಗಳು ಎಲ್ಲಿ ಅಂತ ಕೇಳಿದರು. ಆಗ ಅಕ್ಷಿತಾ ಬಂದಿಲ್ಲ ಅಂತ ಸುಳ್ಳು ಹೇಳಿದ್ದರು. ಇದಕ್ಕೆ ರಜತ್ ಬಿಗ್ ಬಾಸ್ ಇವರನ್ನು ಆಚೆ ಕಳುಹಿಸಿ ಡೋರ್ ಓಪನ್ ಮಾಡಿ ಅಂತ ಹೇಳಿದ್ದಾರೆ.

ಬಳಿಕ ಮನೆ ಮಂದಿಯ ಎದುರು ಏನು ಎಲ್ಲರ ತೊಡೆ ಮೇಲೆ ಹೋಗಿ ಕುಳಿತುಕೊಳ್ಳುತ್ತೀದ್ದೀರಾ? ಏನ್ ಕಥೆ ಎಂದು ರಜತ್ ಪತ್ನಿ ಪ್ರಶ್ನೆ ಮಾಡಿದ್ದಾರೆ. ಅದಷ್ಟೇ ಅಲ್ಲ, ಐಶ್ವರ್ಯಾ ನೋಡಿ ಏನ್ ಅಂದ್ರಿ ಅವತ್ತು ಎಂದು ಕೇಳಿದ್ದಾರೆ. ಅದಕ್ಕೆ ರಜತ್, ಐಶ್ವರ್ಯಾ ಸಖತ್ ಆಗಿದ್ದಾಳೆ, ಅದಕ್ಕೆ ಹಾಗೆ ಅಂದೆ ಅದರಲ್ಲಿ ಏನಿದೆ ಎಂದು ಪ್ರತಿಯುತ್ತರ ನೀಡಿದ್ದಾರೆ. ಅದಕ್ಕೆ ಪತ್ನಿ ನಗುತ್ತಲೇ ರಜತ್‌ಗೆ ಮೆತ್ತಗೆ ಹೊಡೆದಿದ್ದಾರೆ.

ಇದಾದ ಕೆಲವು ನಿಮಿಷಕ್ಕೆ ಬಿಗ್​ ಬಾಸ್​ ಮನೆಗೆ ರಜತ್​ ಅವರ ಇಬ್ಬರು ಮಕ್ಕಳು ಎಂಟ್ರಿ ಕೊಟ್ಟಿದ್ದಾರೆ. ಆದರೆ, ಆ ಹೊತ್ತಿಗೆ ಬಿಗ್ ಬಾಸ್ ಯಾರೂ ಅಲ್ಲಾಡದೇ, ಯಾವುದೇ ರಿಯಾಕ್ಷನ್ ಇಲ್ಲದೇ ನಿಲ್ಲಬೇಕು ಎಂಬ ಟಾಸ್ಕ್ ಕೊಟ್ಟಿದ್ದಾರೆ. ಇಬ್ಬರು ಮಕ್ಕಳನ್ನು ನೋಡುತ್ತಿದ್ದಂತೆ ರಜತ್​ ಕಣ್ಣಲ್ಲಿ ನೀರು ಬಂದಿದೆ. ಅಪ್ಪ ಮಾತಾಡಿ ಅಪ್ಪ ಅಂತ ಮಗಳು ರಜತ್​ರನ್ನು ಅಪ್ಪಿಕೊಂಡಿದ್ದಾರೆ.

BBK 11: ಕೊನೆಗೂ ಬಂದೇ ಬಿಡ್ತು ಆ ದಿನ: ಬಿಗ್ ಬಾಸ್​ನಲ್ಲಿ ಫ್ಯಾಮಿಲಿ ವೀಕ್