ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Capital City Movie: ರಾಜೀವ್ ರೆಡ್ಡಿ ನಟನೆಯ ‘ಕ್ಯಾಪಿಟಲ್ ಸಿಟಿ’ ಚಿತ್ರ ಈ ವಾರ ತೆರೆಗೆ

Capital City Movie: ʼಮಸ್ತ್ ಮಜಾ ಮಾಡಿʼ, ʼನಂದʼ ಸೂಪರ್ ಹಿಟ್ ಚಿತ್ರಗಳ ನಿರ್ದೇಶಕ ಆರ್. ಅನಂತರಾಜು ನಿರ್ದೇಶನದ ಹಾಗೂ ʼಜಿಂದಗಿʼ ಚಿತ್ರದ ನಂತರ ರಾಜೀವ್ ರೆಡ್ಡಿ ನಾಯಕನಾಗಿ ನಟಿಸಿರುವ ʼಕ್ಯಾಪಿಟಲ್ ಸಿಟಿʼ ಚಿತ್ರ‌ ಇದೇ ಜುಲೈ 4ರಂದು ಬಿಡುಗಡೆಯಾಗುತ್ತಿದೆ.

ರಾಜೀವ್ ರೆಡ್ಡಿ ನಟನೆಯ ‘ಕ್ಯಾಪಿಟಲ್ ಸಿಟಿ’ ಚಿತ್ರ ಈ ವಾರ ತೆರೆಗೆ

Profile Siddalinga Swamy Jul 3, 2025 4:13 PM

ಬೆಂಗಳೂರು: ʼಇನಿಫಿನಿಟಿ ಕ್ರಿಯೇಷನ್ಸ್ʼ ಸಂಸ್ಥೆ ಲಾಂಛನದಲ್ಲಿ ನಿರ್ಮಾಣವಾಗಿರುವ, ʼಅಪ್ಪು‌ ಪಪ್ಪುʼ, ʼಮಸ್ತ್ ಮಜಾ ಮಾಡಿʼ, ʼನಂದʼ ಸೂಪರ್ ಹಿಟ್ ಚಿತ್ರಗಳ ನಿರ್ದೇಶಕ ಆರ್. ಅನಂತರಾಜು ನಿರ್ದೇಶನದ ಹಾಗೂ ʼಜಿಂದಗಿʼ ಚಿತ್ರದ ನಂತರ ರಾಜೀವ್ ರೆಡ್ಡಿ ನಾಯಕನಾಗಿ ನಟಿಸಿರುವ ʼಕ್ಯಾಪಿಟಲ್ ಸಿಟಿʼ ಚಿತ್ರ‌ (Capital City Movie) ಇದೇ ಜುಲೈ 4 ರಂದು ಅದ್ದೂರಿಯಾಗಿ ಬಿಡುಗಡೆಯಾಗುತ್ತಿದೆ. ಈಗಾಗಲೇ ಹಾಡುಗಳು, ಟೀಸರ್ ಹಾಗೂ ಟ್ರೇಲರ್ ಮೂಲಕ ಚಿತ್ರ ಜನರ ಮನಸ್ಸಿಗೆ ಹತ್ತಿರವಾಗಿದೆ.

ಪ್ರೇರಣ ನಾಯಕಿಯಾಗಿ ನಟಿಸಿರುವ ಈ ಚಿತ್ರದ ಪ್ರಮುಖ ಪಾತ್ರದಲ್ಲಿ ಖ್ಯಾತ ನಟರಾದ ಸುಮನ್, ರವಿಶಂಕರ್, ಶರತ್ ಲೋಹಿತಾಶ್ವ, ಕೆ.ಎಸ್. ಶ್ರೀಧರ್ ಮುಂತಾದವರಿದ್ದಾರೆ. ನಾಗ್ ಸಂಗೀತ ನಿರ್ದೇಶನ, ಪ್ರದೀಪ್ ಛಾಯಾಗ್ರಹಣ, ಈಶ್ವರ್ ಸಂಕಲನ ಹಾಗೂ ಡಿಫರೆಂಟ್ ಡ್ಯಾನಿ ಸಾಹಸ ನಿರ್ದೇಶನ ʼಕ್ಯಾಪಿಟಲ್ ಸಿಟಿʼ ಚಿತ್ರಕ್ಕಿದೆ.

Capital City Movie: ರಾಜೀವ್ ರೆಡ್ಡಿ ಅಭಿನಯದ ‘ಕ್ಯಾಪಿಟಲ್ ಸಿಟಿ’ ಚಿತ್ರ ಜು.4ಕ್ಕೆ ರಿಲೀಸ್‌

ʼಇನಿಫಿನಿಟಿ ಕ್ರಿಯೇಷನ್ಸ್ʼ ಸಂಸ್ಥೆ ಲಾಂಛನದಲ್ಲಿ ನಿರ್ಮಾಣವಾಗಿರುವ, ʼಅಪ್ಪು‌ ಪಪ್ಪುʼ, ʼಮಸ್ತ್ ಮಜಾ ಮಾಡಿʼ, ʼನಂದʼ ಸೂಪರ್ ಹಿಟ್ ಚಿತ್ರಗಳ ನಿರ್ದೇಶಕ ಆರ್. ಅನಂತರಾಜು ನಿರ್ದೇಶನದ ಹಾಗೂ ʼಜಿಂದಗಿʼ ಚಿತ್ರದ ನಂತರ ರಾಜೀವ್ ರೆಡ್ಡಿ ನಾಯಕನಾಗಿ ನಟಿಸಿರುವ ʼಕ್ಯಾಪಿಟಲ್ ಸಿಟಿʼ ಚಿತ್ರ‌ ಇದೇ ಜುಲೈ 4 ರಂದು ಅದ್ದೂರಿಯಾಗಿ ಬಿಡುಗಡೆಯಾಗುತ್ತಿದೆ. ಈ ಕುರಿತು ಮಾಹಿತಿ ನೀಡಲು ಆಯೋಜಿಸಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಚಿತ್ರತಂಡದ ಸದಸ್ಯರು ಮಾತನಾಡಿದರು. ಮೊದಲು ಮಾತನಾಡಿದ ಖ್ಯಾತ ನಟ ರವಿಶಂಕರ್, ಈ ಚಿತ್ರದ ಜರ್ನಿ ಚೆನ್ನಾಗಿತ್ತು. ಚಿತ್ರದ ತುಣುಕುಗಳನ್ನು ನೋಡಿದಾಗ ನಾಯಕ ರಾಜೀವ್ ರೆಡ್ಡಿ ಅವರ ಅಭಿನಯ ಬಹಳ ಇಷ್ಟವಾಯಿತು. ನನ್ನದು ಈ ಚಿತ್ರದಲ್ಲಿ ವಿಭಿನ್ನ ಪಾತ್ರ. ಜುಲೈ 4 ರಂದು ಬಿಡುಗಡೆಯಾಗುತ್ತಿರುವ ಈ ಚಿತ್ರಕ್ಕೆ ನಿಮ್ಮೆಲ್ಲರ ಪ್ರೋತ್ಸಾಹವಿರಲಿ ಎಂದು ತಿಳಿಸಿದರು.

ಇದು ನನ್ನ ನಿರ್ದೇಶನದ 11ನೇ ಚಿತ್ರ. ರವಿಶಂಕರ್ ಅವರು ಬಹಳ ವರ್ಷಗಳ ಪರಿಚಯ. ಆದರೆ ಅವರ ಜತೆಗೆ ಕೆಲಸ ಮಾಡಿರುವುದು ಇದೇ ಮೊದಲು. ಚಿತ್ರ ಅಂದುಕೊಂಡ ಹಾಗೆ ಮೂಡಿಬರಲು ನಿರ್ಮಾಪಕರು ಹಾಗೂ ಇಡೀ ತಂಡದ‌ ಸಹಕಾರವೇ ಕಾರಣ. ಇದೊಂದು ಬೆಂಗಳೂರು ಭೂಗತ ಜಗತ್ತಿನ ಸುತ್ತ ನಡೆಯುವ ಕಥೆ. 90ರ ಕಾಲಘಟ್ಟದ ಕಥೆಯೂ ಹೌದು. ತೊಂದರೆಗೀಡಾದ ನಾಯಕ ಹೇಗೆ ತನ್ನ ಕಷ್ಟವನ್ನು ನಿಭಾಯಿಸಿಕೊಂಡು ಬರುತ್ತಾನೆ ಎನ್ನುವುದೇ ಪ್ರಮುಖ ಕಥಾಹಂದರ.

ಆಕ್ಷನ್ ಚಿತ್ರ ಎನಿಸಿದರೂ, ನೋಡುಗರಿಗೆ ಬೇಕಾದ ಎಲ್ಲಾ ಅಂಶಗಳು ನಮ್ಮ ಚಿತ್ರದಲ್ಲಿದೆ. ರಾಜೀವ್ ರೆಡ್ಡಿ ಈ ಚಿತ್ರದ ನಾಯಕನಾಗಿ ನಟಿಸಿದ್ದು, ಪ್ರೇರಣ ನಾಯಕಿಯಾಗಿ ಅಭಿನಯಿಸಿದ್ದಾರೆ. ಸುಮನ್, ರವಿಶಂಕರ್, ಶರತ್ ಲೋಹಿತಾಶ್ವ, ಕೆ.ಎಸ್. ಶ್ರೀಧರ್ ಮುಂತಾದ ಹಿರಿಯ ನಟರು ಈ ಚಿತ್ರದಲ್ಲಿದ್ದಾರೆ. ಕರ್ನಲ್ ರಾಜೇಂದ್ರ ಅವರು ಸೇರಿದಂತೆ ಚಿತ್ರ‌ದ ಕೆಲವು ನಿರ್ಮಾಪಕರು ಸಹ ಈ ಚಿತ್ರದಲ್ಲಿ ಅಭಿನಯಿಸಿದ್ದಾರೆ. ಜುಲೈ 4 ರಂದು ನಮ್ಮ ಚಿತ್ರ ಅದ್ದೂರಿಯಾಗಿ ಬಿಡುಗಡೆಯಾಗುತ್ತಿದೆ ಎಂದು ನಿರ್ದೇಶಕ ಅನಂತರಾಜು ತಿಳಿಸಿದರು.

ಇದೊಂದು ರಿವೆಂಜ್ ಸ್ಟೋರಿ. ನಿಮಗೆ ತೊಂದರೆಯಾದಾಗ ನಿಮ್ಮನ್ನು ನೀವು ಹೇಗೆ ಕಾಪಾಡಿಕೊಳ್ಳುತ್ತೀರಾ ಎಂಬುದೆ ಪ್ರಮುಖ ಕಥಾಹಂದರ.‌ ರವಿಶಂಕರ್, ಸುಮನ್ ಮುಂತಾದ ಹಿರಿಯ ಕಲಾವಿದರೊಂದಿಗೆ ಅಭಿನಯಿಸಿದ್ದು ಬಹಳ ಖುಷಿಯಾಗಿದೆ. ದಯವಿಟ್ಟು ಎಲ್ಲರೂ ನಮ್ಮ ಚಿತ್ರವನ್ನು ನೋಡುವ ಮೂಲಕ ಪ್ರೋತ್ಸಾಹ ನೀಡಿ ಎಂದು ನಾಯಕ ರಾಜೀವ್ ರೆಡ್ಡಿ ಹೇಳಿದರು.

ನಿರ್ಮಾಪಕರಾದ ಮಂಜುನಾಥ್, ಕೃಷ್ಣಮೂರ್ತಿ ಹಾಗೂ ಕರ್ನಲ್ ರಾಜೇಂದ್ರ ಅವರು ಮಾತನಾಡಿ‌, ಇಡೀ ಚಿತ್ರತಂಡದ ಸಹಕಾರದಿಂದ ನಮ್ಮ ಚಿತ್ರ ಉತ್ತಮವಾಗಿ ಮೂಡಿಬಂದಿದೆ. ಜುಲೈ 4 ರಂದು ನಮ್ಮ ಚಿತ್ರ 200ಕ್ಕೂ ಅಧಿಕ ಚಿತ್ರಮಂದಿರಗಳಲ್ಲಿ ನಮ್ಮ ಚಿತ್ರ ಬಿಡುಗಡೆಯಾಗುತ್ತಿದೆ.‌ ದಯವಿಟ್ಟು ಎಲ್ಲರೂ ಚಿತ್ರಮಂದಿರಗಳಲ್ಲೇ ಚಿತ್ರ ನೋಡಿ ಎಂದರು. ಸಂಗೀತ ನಿರ್ದೇಶಕ ನಾಗ್ ಹಾಗೂ ಛಾಯಾಗ್ರಾಹಕ ಪ್ರದೀಪ್ ಪತ್ರಿಕಾಗೋಷ್ಠಿಯಲ್ಲಿದ್ದರು.

ಈ ಸುದ್ದಿಯನ್ನೂ ಓದಿ | Jewel Fashion 2025: ಸೀಸನ್‌ನಲ್ಲಿ ಟ್ರೆಂಡಿಯಾದ ವೈವಿಧ್ಯಮಯ ಪರ್ಲ್ ನೆಕ್ಲೇಸ್‌ಗಳಿವು