Thursday, 12th December 2024

ಸೂಪರ್ ಸ್ಟಾರ್ ರಜನಿಕಾಂತ್ ಡಿಸ್ಚಾರ್ಜ್

ಹೈದರಾಬಾದ್ : ರಕ್ತದೊತ್ತಡ ಸಮಸ್ಯೆಯಿಂದ ಬಳಲುತ್ತಿದ್ದ ಸೂಪರ್ ಸ್ಟಾರ್ ರಜನಿಕಾಂತ್ ಹೈದರಾಬಾದ್ ನ ಅಪೋಲೋ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.

ಈ ಕುರಿತಂತೆ ಆಸ್ಪತ್ರೆ ಆಡಳಿತ ಮಂಡಳಿ ಮಾಹಿತಿ ನೀಡಿದ್ದು, ಅಧಿಕ ರಕ್ತದೊತ್ತಡ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾಗಿದ್ದ ಸೂಪರ್ ಸ್ಟಾರ್ ರಜನಿಕಾಂತ್ ಆರೋಗ್ಯ ಸುಧಾರಿಸಲ್ಪಟ್ಟಿದೆ. ಎಲ್ಲಾ ಪರೀಕ್ಷೆಗಳ ಬಳಿಕ ಅವರು ಆರೋಗ್ಯದಿಂದ ಇದ್ದಾರೆ ಎಂಬುದಾಗಿ ಖಚಿತಪಡಿಸಿದರು.