Friday, 13th December 2024

ಬೆದರಿಕೆ ಕರೆ: ಹೆಲ್ಮೆಟ್ ಧರಿಸಿ ಓಡಾಡಿದ ನಟಿ ರಾಖಿ ಸಾವಂತ್

ಮುಂಬೈ: ಬಾಲಿವುಡ್ ನಟಿ ರಾಖಿ ಸಾವಂತ್ ಇದೀಗ ಮುಂಬೈನ ಬೀದಿಗಳಲ್ಲಿ ಹೆಲ್ಮೆಟ್ ಧರಿಸಿ ಓಡಾಡುವ ಮೂಲಕ ಸುದ್ದಿಯಾಗಿದ್ದಾರೆ.

ನಟ ಸಲ್ಮಾನ್ ಖಾನ್ ಪರವಾಗಿ ನಿಂತಿರುವ ಮತ್ತು ಸಲ್ಮಾನ್ ಕುರಿತಾಗಿ ಸಾಕಷ್ಟು ಮೆಚ್ಚುಗೆಯ ಮಾತುಗಳನ್ನು ಆಡಿರುವ ರಾಖಿ ಸಾವಂತ್ ಗೆ ಲಾರೆನ್ಸ್ ಬಿಷ್ಣೋಯ್ ಟೀಮ್ ನಿಂದ ಬೆದರಿಕೆ ಕರೆ ಬಂದಿದೆಯಂತೆ. ಹೀಗಾಗಿ ರಾಖಿ ಹೋದಲ್ಲಿ ಬಂದಲೆಲ್ಲ ಹೆಲ್ಮೆಟ್ ಧರಿಸಿಕೊಂಡು ಓಡಾಡುತ್ತಿದ್ದಾರೆ.

ಸಲ್ಮಾನ್ ವಿಚಾರವಾಗಿ ಮೂಗು ತೂರಿಸದಂತೆ ರಾಖಿಗೆ ಎಚ್ಚರಿಕೆ ನೀಡಿದೆಯಂತೆ. ಹಾಗಾಗಿ ಅವರನ್ನು ಗುರುತು ಹಿಡಿಯಬಾರದು ಎನ್ನುವ ಕಾರಣಕ್ಕಾಗಿ ಹೆಲ್ಮೆಟ್ ಧರಿಸಿಕೊಂಡು ಓಡಾಡುತ್ತಿದ್ದಾರೆ.

ಸಲ್ಮಾನ್ ಖಾನ್ ಗೆ ಕೊಲೆ ಬೆದರಿಕೆ ಹಿನ್ನೆಲೆಯಲ್ಲಿ ಬಾಂದ್ರಾದಲ್ಲಿರುವ ಸಲ್ಮಾನ್ ಖಾನ್ ಅವರ ಗ್ಯಾಲಕ್ಸಿ ಅಪಾರ್ಟ್ಮೆಂಟ್ ಗೆ ಮುಂಬೈ ಪೊಲೀಸರು ಬಿಗಿ ಪೊಲೀಸ್ ಭದ್ರತೆ ನಿಯೋಜಿಸಿದ್ದಾರೆ.