Wednesday, 11th December 2024

ನಟ ಮಿಥುನ್ ಚಕ್ರವರ್ತಿ ಪುತ್ರನ ವಿರುದ್ದ ಅತ್ಯಾಚಾರ ಪ್ರಕರಣ ದಾಖಲು

ನವದೆಹಲಿ : ಬಾಲಿವುಡ್ ಹಿರಿಯ ನಟ ಮಿಥುನ್ ಚಕ್ರವರ್ತಿ ಪತ್ನಿ, ಮಾಜಿ ನಟಿ ಯೋಗಿತಾ ಬಾಲಿ ಪುತ್ರ ಮತ್ತು ಅಕ್ಷಯ ಚಕ್ರವರ್ತಿ ಮೇಲೆ ಅತ್ಯಾಚಾರ ಪ್ರಕರಣ ದಾಖಲಾಗಿದೆ.

ವರದಿಗಳ ಪ್ರಕಾರ, ಮಹಾಕ್ಷಯ ಚಕ್ರವರ್ತಿ ಮದುವೆಯ ನೆಪದಲ್ಲಿ ಅತ್ಯಾಚಾರ ವೆಸಗಿದ್ದಾನೆ ಎಂದು ಮಹಿಳೆಯೊಬ್ಬಳು ಆರೋಪಿಸಿದ್ದು, ಮುಂಬೈನ ಓಶಿವಾರ ಪೊಲೀಸ್ ಠಾಣೆಯಲ್ಲಿ ಎಫ್ ಐ ಆರ್ ದಾಖಲಾಗಿದೆ. ಯೋಗಿತಾ ಬಾಲಿ ಪ್ರಕರಣದಲ್ಲಿ ಆರೋಪಿಗಳಲ್ಲಿ ಒಬ್ಬ ಎಂದು ಹೆಸರಿಸಲಾಗಿದೆ.

2018ರಲ್ಲಿ ಮಹಾಕ್ಷಯ್ ಚಕ್ರವರ್ತಿ ವಿರುದ್ಧ ಅತ್ಯಾಚಾರ ಮತ್ತು ವಂಚನೆ ಪ್ರಕರಣವೊಂದರಲ್ಲಿ ಪ್ರಕರಣ ದಾಖಲಾಗಿದ್ದು, 2018ರ ಜುಲೈನಲ್ಲಿ ನಟ ಮದಲ್ಸಾ ಶರ್ಮಾ ಅವರನ್ನು ವಿವಾಹವಾಗುವ ಕೆಲ ದಿನಗಳ ಮೊದಲು ದೆಹಲಿ ನ್ಯಾಯಾಲಯ ನಿರೀಕ್ಷಣಾ ಜಾಮೀನು ನೀಡಿತ್ತು. ಅತ್ಯಾಚಾರ, ವಂಚನೆ, ಬೆದರಿಕೆ ಸೇರಿದಂತೆ ಇನ್ನಿತರ ಆರೋಪಗಳಡಿ ಪ್ರಕರಣ ದಾಖಲಿಸ ಲಾಗಿದೆ.

ಯೋಗಿತಾ ಬಾಲಿ ಅವರು ಸಂತ್ರಸ್ತೆಗೆ ಬೆದರಿಕೆ ಒಡ್ಡಿದ್ದಾರೆ. ಪ್ರಕರಣ ವಾಪಾಸ್ ಪಡೆಯುವಂತೆಯೂ ಒತ್ತಾಯಿಸಿದ್ದಾರೆ ಎಂಬು ದಾಗಿ ದೂರಿನಲ್ಲಿ ಆರೋಪಿಸಲಾಗಿದೆ. ಮಹಾಕ್ಷಯ್ 2015ರಿಂದ ಸಂಬಂಧ ಹೊಂದಿದ್ದ ಎಂದು ಮಹಿಳೆ ಹೇಳಿಕೊಂಡಿ ದ್ದು, ಮದುವೆಯಾಗುವುದಾಗಿ ಭರವಸೆ ನೀಡಿ ದ್ದರು. ದೈಹಿಕ ಮತ್ತು ಮಾನಸಿಕ ಕಿರುಕುಳ ನೀಡಿ ದೈಹಿಕ ಸಂಬಂಧ ಮುಂದುವರೆಸಿ ದ್ದರು ಎಂದು ದೂರಿನಲ್ಲಿ ಆರೋಪಿಸಲಾಗಿದೆ.