Friday, 13th December 2024

ರಶ್ಮಿಕಾ ಮಂದಣ್ಣಗೆ 28ನೇ ಹುಟ್ಟುಹಬ್ಬದ ಸಂಭ್ರಮ

ಬೆಂಗಳೂರು: ‘ನ್ಯಾಷನಲ್ ಕ್ರಷ್’ ರಶ್ಮಿಕಾ ಮಂದಣ್ಣ ಅವರಿಗೆ 28ನೇ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ಅವರ ಅಭಿನಯದ ಪುಷ್ಪ 2 ಹಾಗೂ ದಿ ಗರ್ಲ್ ಫ್ರೆಂಡ್ ಚಿತ್ರದ ಫಸ್ಟ್ ಲುಕ್ ಫೋಸ್ಟರ್ ಗಳನ್ನು ಬಿಡುಗಡೆ ಮಾಡಲಾಗಿದೆ.

ಪುಷ್ಪ 2 ಚಿತ್ರದ ಸಾಮಾಜಿಕ ಮಾಧ್ಯಮ ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿರುವ ಫೋಸ್ಟರ್ ನಲ್ಲಿ ಸೀರೆ ಗೆಟಪ್, ಜೊತೆಗೆ ಸಾಕಷ್ಟು ಅಭರಣ ತೊಟ್ಟು ರಶ್ಮಿಕಾ ಕಾಣಿಸಿಕೊಂಡಿದ್ದಾರೆ.

ಆಗಸ್ಟ್ 15 ರಂದು ಚಿತ್ರ ಬಿಡುಗಡೆ ಆಗಲಿದೆ ಎಂದು ಪೋಸ್ಟರ್ ನಲ್ಲಿ ಬರೆಯಲಾಗಿದೆ. ಈ ಚಿತ್ರದಲ್ಲಿ ಅಲ್ಲು ಅರ್ಜುನ್ ನಾಯಕ ನಟನಾಗಿ ಅಭಿನಯಿಸಿದ್ದಾರೆ.