Sunday, 15th December 2024

ಕ್ರೇಜಿಸ್ಟಾರ್​ ರವಿಚಂದ್ರನ್ ತಾಯಿ ನಿಧನ

ಬೆಂಗಳೂರು: ಕ್ರೇಜಿಸ್ಟಾರ್​ ರವಿಚಂದ್ರನ್ ಅವರ ತಾಯಿ ಪಟ್ಟಮ್ಮಾಳ್ ವೀರಸ್ವಾಮಿ(83 ವರ್ಷ) ಸೋಮವಾರ ನಿಧನರಾದರು.

ಅನಾರೋಗ್ಯದಿಂದ ಬಳಲುತ್ತಿದ್ದ ಪಟ್ಟಮ್ಮಾಳ್ ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ ಚಿಕಿತ್ಸೆ ಫಲಿಸದೆ​ ಕೊನೆಯುಸಿ ರೆಳೆದರು.

ರವಿಚಂದ್ರನ್​ ಅವರ ಮನೆಗೆ ಪಾರ್ಥೀವ ಶರೀರವನ್ನು ತರಲಾಗುತ್ತದೆ. ಸಂಜೆ ಅಂತ್ಯಕ್ರಿಯೆ ನೆರವೇರಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.