ಮೈಸೂರು: ಕನ್ನಡ ಚಿತ್ರರಂಗದ ನಿರ್ದೇಶಕ, ನಟ ಎಸ್. ನಾರಾಯಣ್ ಪುತ್ರ ಪಂಕಜ್ ನಾರಾಯಣ್ ಅವರು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.
ಕೆಲವೇ ದಿನಗಳ ಹಿಂದೆ ರಕ್ಷಾ ಜೊತೆ ಪಂಕಜ್ ಅವರ ನಿಶ್ಚಿತಾರ್ಥ ನೆರವೇರಿತ್ತು. ಈಗ ಈ ಜೋಡಿ ಸಪ್ತಪದಿ ತುಳಿದಿದೆ. ಕೇವಲ ಆಪ್ತರ ಸಮ್ಮುಖದಲ್ಲಿ ವಿವಾಹ ನಡೆದಿದೆ. ಪಂಕಜ್ ಮತ್ತು ರಕ್ಷಾ ಮದುವೆಯ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿವೆ. ಕೊವಿಡ್ ಹರಡುವ ಭಯ, ಪುನೀತ್ ರಾಜ್ಕುಮಾರ್ ನಿಧನದ ನೋವು ಸೇರಿದಂತೆ ಹಲವು ಕಾರಣಗಳಿಂದಾಗಿ ಸಿಂಪಲ್ ಆಗಿ ಮದುವೆ ಮಾಡಲಾಗಿದೆ.
ಮೈಸೂರಿನ ಸ್ಪೆಕ್ಟ್ರಾ ಕನ್ವೆನ್ಷನ್ ಹಾಲ್ನಲ್ಲಿ ಮದುವೆ ಸಮಾರಂಭ ಏರ್ಪಡಿಸಲಾಗಿತ್ತು. ಮಾಜಿ ಸಚಿವ ಎನ್.ಚೆಲುವರಾಯ ಸ್ವಾಮಿ ಸೇರಿದಂತೆ ಅನೇಕರು ಆಗಮಿಸಿದ್ದರು. ಸೋಶಿಯಲ್ ಮೀಡಿಯಾ ಮೂಲಕ ನವ ದಂಪತಿಗೆ ಶುಭ ಹಾರೈಸುತ್ತಿದ್ದಾರೆ.
ಚಿತ್ರರಂಗದಲ್ಲಿ ಎಸ್. ನಾರಾಯಣ್ ನಟನಾಗಿ, ನಿರ್ದೇಶಕನಾಗಿ ಅವರು ಸ್ಯಾಂಡಲ್ವುಡ್ನಲ್ಲಿ ದೊಡ್ಡ ಮಟ್ಟದ ಖ್ಯಾತಿ ಗಳಿಸಿ ದ್ದಾರೆ. ಅವರ ಮೊದಲ ಪುತ್ರ ಪವನ್ ನಿರ್ದೇಶನದಲ್ಲಿ ಆಸಕ್ತಿ ಹೊಂದಿದ್ದಾರೆ. ಎರಡನೇ ಪುತ್ರ ಪಂಕಜ್ ಅವರು ಹಲವು ಸಿನಿಮಾ ಗಳಲ್ಲಿ ನಟಿಸಿದ್ದಾರೆ.
‘ಚೆಲುವಿನ ಚಿಲಿಪಿಲಿ’, ‘ದುಷ್ಟ’, ‘ದಕ್ಷ’, ‘ಒಡೆಯ’ ಮುಂತಾದ ಚಿತ್ರಗಳ ಮೂಲಕ ಅಭಿಮಾನಿಗಳನ್ನು ರಂಜಿಸಿದ್ದಾರೆ.