Saturday, 14th December 2024

ನಟ ಸಲ್ಮಾನ್ ಖಾನ್’ಗೆ ಬೆದರಿಕೆ ಕರೆ: ಹೆಚ್ಚಿದ ಭದ್ರತೆ

ಮುಂಬೈ: ಬಾಲಿವುಡ್ ನಟ ಸಲ್ಮಾನ್ ಖಾನ್ ಅವರನ್ನು ಕೊಲ್ಲುವುದಾಗಿ ಮುಂಬೈ ಪೊಲೀಸರಿಗೆ ಬೆದರಿಕೆ ಕರೆ ಮಾಡಿರುವುದು ಬೆಳಕಿಗೆ ಬಂದಿದೆ.

ಕರೆ ಮಾಡಿದವನು ತನ್ನನ್ನು ರಾಜಸ್ಥಾನದ ಜೋಧಪುರದ ರೋಕಿ ಭಾಯ್ ಎಂದು ಗುರುತಿ ಸಿದ್ದು, ಏ.30 ರಂದು ನಟನನ್ನು ಕೊಲ್ಲುವುದಾಗಿ ಬೆದರಿಕೆ ಹಾಕಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಪೊಲೀಸ್ ಕಂಟ್ರೋಲ್ ರೂಂಗೆ ಬಂದ ಕರೆಯಲ್ಲಿ, ರಾಜಸ್ಥಾನದ ಜೋಧಪುರದ ರೋಕಿ ಭಾಯ್ ಎಂದು ಗುರುತಿಸಿಕೊಂಡ ವ್ಯಕ್ತಿ ಏಪ್ರಿಲ್ 30 ರಂದು ನಟ ಸಲ್ಮಾನ್ ಖಾನ್ ಅವರನ್ನು ಕೊಲ್ಲುವುದಾಗಿ ಬೆದರಿಕೆ ಹಾಕಿದ್ದಾನೆ. ಹೆಚ್ಚಿನ ತನಿಖೆ ನಡೆಯುತ್ತಿದೆ’ ಎಂದು ಮುಂಬೈ ಪೊಲೀಸರು ತಿಳಿಸಿದ್ದಾರೆ.

ಬೆದರಿಕೆ ಕರೆ ಬಂದ ಕೂಡಲೇ ಬಾಲಿವುಡ್ ನಟ ಸಲ್ಮಾನ್ ಖಾನ್‌ ಬಾಂದ್ರಾ ಮನೆಯ ಹೊರಗೆ ಈಗಾಗಲೇ ಹೆಚ್ಚಿನ ಭದ್ರತೆಯನ್ನು ನೀಡಲಾಗಿದೆ ಎಂದು ವರದಿಯಾಗಿದೆ